ಟೋಲ್ ಶುಲ್ಕ ತಪ್ಪಿಸಲು ಬೂಮ್ ಬ್ಯಾರಿಯರ್‌ಗೆ ಡಿಕ್ಕಿ ಹೊಡೆದು ಪರಾರಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಶುಲ್ಕ ಪಾವತಿಸದೇ ವಾಹನಗಳು ಬೂಮ್ ಬ್ಯಾರಿಯರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಇತ್ತೀಚೆಗೆ ಸಿಪಿಐಎಂ ಪಕ್ಷದ ಕಾರ್ಯಕರ್ತರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್‌ವೊಂದು ಟೋಲ್ ಶುಲ್ಕ ಪಾವತಿಸದೇ ಬೂಮ್ ಬ್ಯಾರಿಯರ್‌ಗೆ ಡಿಕ್ಕಿ ಹೊಡೆದು ಹಾನಿಗೊಳಿಸಿ ಸ್ಥಳದಿಂದ ತೆರಳಿರುವುದು ವರದಿಯಾಗಿದೆ. ಅಷ್ಟೇ ಅಲ್ಲದೆ, ಇದೇ ಟೋಲ್ ಪ್ಲಾಜಾದಲ್ಲಿ ಹಲವು ವಾಹನಗಳು ಟೋಲ್ ಪಾವತಿಸುವುದನ್ನು ತಪ್ಪಿಸಲು ಬ್ಯಾರಿಯರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆಗಳು ನಡೆದಿವೆ ಎನ್ನಲಾಗಿದೆ….

Read More

ಪ್ರಭಾವಿಗಳ ಹಿತ ಕಾಪಾಡಲು ಬಡ ಬೀದಿಬದಿ ವ್ಯಾಪಾರಿಗಳ ಮೇಲೆ ಪಾಲಿಕೆಯ ದಬ್ಬಾಳಿಕೆ ಖಂಡನೀಯ – ಸಿಪಿಐಎಂ

ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಡ ಬೀದಿಬದಿ ವ್ಯಾಪಾರಸ್ಥರ ಮೇಲೆ ನಗರಾಡಳಿತ ನಡೆಸುತ್ತಿರುವ ದಾಳಿಗಳು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಆಡಳಿತವನ್ನೇ ನಾಚಿಸುವಂತಿದೆ. ನಗರದಲ್ಲಿ ಸಂಡೇ ಬಜಾರ್ ವ್ಯಾಪಾರಸ್ಥರ ವಿರುದ್ದ ಪ್ರಾರಂಭವಾದ ದಬ್ಬಾಳಿಕೆಗಳು ನಗರದ ಎಲ್ಲಾ ಭಾಗಗಳಲ್ಲಿಯೂ ವಿಸ್ತರಿಸಿದೆ. ಇದು ತನ್ನ ಬಡಜನ ವಿರೋದಿ ಮನೋಭಾವವನ್ನು ತೋರಿಸುತ್ತದೆ ಎಂದು CPIM ನಗರ ಸಮಿತಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ತಾ. 20/06/2026 ರ ಶನಿವಾರ ಪಡೀಲ್–ಬಜಾಲ್ ಮುಖ್ಯ ರಸ್ತೆಯಲ್ಲಿ ಜೀವನೋಪಾಯಕ್ಕಾಗಿ ಹಲವು ವರ್ಷಗಳಿಂದ ಹೂವಿನ ವ್ಯಾಪಾರ ನಡೆಸುತ್ತಿದ್ದ ಅಂಗವಿಕಲ…

Read More

ಜೂನ್ 23ರಂದು ಮಂಗಳೂರಿನಲ್ಲಿ ಕಾಂಗ್ರೆಸ್‌ನ ಮತದಾರರ ಜಾಗೃತಿ ಸಮಾವೇಶ

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವತಿಯಿಂದ ಜೂನ್ 23ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ. ಶನಿವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಮ್ಮ ನಡೆ ಮತ ರಕ್ಷಣೆಯ ಕಡೆ” ಎಂಬ ಧ್ಯೇಯವಾಕ್ಯದಡಿ ಐದು ವಿಭಾಗಗಳಲ್ಲಿ ಈ ಜನಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಜೂನ್ 23ರಂದು ಬೆಳಿಗ್ಗೆ 10.30ಕ್ಕೆ…

Read More

“ಅತ್ಯುತ್ತಮ ಜನಮೆಚ್ಚಿದ ನಾಯಕಿ” ಪ್ರಶಸ್ತಿ ಸ್ವೀಕರಿಸಿದ ಕಾಂತಿ ಶೆಟ್ಟಿ

ಬೆಂಗಳೂರು: ಕರ್ನಾಟಕ ಟಿವಿ ವತಿಯಿಂದ ಆಯೋಜಿಸಲಾದ ಬೆಸ್ಟ್ ನಾಯಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದ “ಅತ್ಯುತ್ತಮ ಜನಮೆಚ್ಚಿದ ನಾಯಕಿ” ಪ್ರಶಸ್ತಿಯನ್ನು ಕಾಂತಿ ಶೆಟ್ಟಿ ಸ್ವೀಕರಿಸಿದರು. ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಜನಪರ ಕಾರ್ಯಗಳು ಹಾಗೂ ಸಮಾಜದ ಅಭಿವೃದ್ಧಿಯತ್ತ ಕಾಂತಿ ಶೆಟ್ಟಿ ತೋರಿದ ಬದ್ಧತೆ ಮತ್ತು ಸೇವೆಯನ್ನು ಪರಿಗಣಿಸಿ ಈ ಗೌರವವನ್ನು ನೀಡಲಾಗಿದೆ. ಕಾರ್ಯಕ್ರಮದಲ್ಲಿ ಹಿರಿಯ ರಾಜಕಾರಾಣಿಗಳಾದ ಬಸವರಾಜ…

Read More

ಜೂನ್ 23ರಂದು ಪುತ್ತೂರು ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ …. !

ಪುತ್ತೂರು: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317ಡಿ ವ್ಯಾಪ್ತಿಯ ಪುತ್ತೂರು ಲಯನ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಲಯನ್ ಮಂಜುನಾಥ್ ಗೌಡ, ಕಾರ್ಯದರ್ಶಿಯಾಗಿ ಲಯನ್ ಆನಂದ ಆಚಾರ್ಯ ಹಾಗೂ ಕೋಶಾಧಿಕಾರಿಯಾಗಿ ಲಯನ್ ಸುಂದರ ಗೌಡ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂನ್ 23ರಂದು (ಮಂಗಳವಾರ) ಸಂಜೆ 7 ಗಂಟೆಗೆ ಪುತ್ತೂರಿನ ಲಯನ್ ಸೇವಾ ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಂಗಳೂರು ಲಯನ್ಸ್ ಕ್ಲಬ್‌ನ ಅಧ್ಯಕ್ಷ ಲಯನ್ ರಾಜೇಶ್ ಎಂ. ಕಾಮತ್ ಅವರು ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಪದಪ್ರದಾನ…

Read More

ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ–ಸಂತ ಅಲೋಶಿಯಸ್ ಕಾಲೇಜು ನಡುವೆ ಸಹಕಾರ ಒಪ್ಪಂದ

ಮಂಗಳೂರು, ಸಸ್ಯಗಳ ವೈವಿಧ್ಯತೆ, ಸಂರಕ್ಷಣೆ ಹಾಗೂ ಔಷಧೀಯ ಸಸ್ಯಶಾಸ್ತ್ರ ಕುರಿತ ಅಧ್ಯಯನ ಮತ್ತು ಸಂಶೋಧನೆಯನ್ನು ಉತ್ತೇಜಿಸುವ ಉದ್ದೇಶದಿಂದ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು (ಪರಿಗಣಿತ ವಿಶ್ವವಿದ್ಯಾನಿಲಯ)ದ ಸಸ್ಯಶಾಸ್ತ್ರ ವಿಭಾಗ ಹಾಗೂ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಸಸ್ಯಕಾಶಿ ವಿಭಾಗದ ನಡುವೆ ಪರಸ್ಪರ ಸಹಕಾರ ಒಪ್ಪಂದ (ಎಂಒಯು)ಕ್ಕೆ ಸಹಿ ಹಾಕಲಾಯಿತು. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎರಡೂ ಸಂಸ್ಥೆಗಳ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಒಪ್ಪಂದಕ್ಕೆ ಸಹಿ ಮಾಡಿಕೊಳ್ಳಲಾಯಿತು. ಈ ಸಹಭಾಗಿತ್ವದ ಮೂಲಕ ಸಸ್ಯಶಾಸ್ತ್ರ ಕ್ಷೇತ್ರದಲ್ಲಿ ಸಂಶೋಧನೆ,…

Read More

2027ರಲ್ಲಿ ಕುದ್ರೋಳಿ ಭಗವತಿ ಕ್ಷೇತ್ರದ ಪೆರುಂ ಕಳಿಯಾಟ ಮಹೋತ್ಸವ: 75 ವರ್ಷಗಳ ಬಳಿಕ ಮತ್ತೆ ಕದ್ರಿ-ಕುದ್ರೋಳಿ ಐತಿಹಾಸಿಕ ಭೇಟಿ

ಮಂಗಳೂರು: ತುಳುನಾಡಿನ ಅತ್ಯಂತ ವೈಭವಶಾಲಿ ಹಾಗೂ ಐತಿಹಾಸಿಕ ಧಾರ್ಮಿಕ ಉತ್ಸವಗಳಲ್ಲಿ ಒಂದಾದ ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಪೆರುಂ ಕಳಿಯಾಟ ಮಹೋತ್ಸವವು 75 ವರ್ಷಗಳ ಬಳಿಕ 2027ರ ಏಪ್ರಿಲ್ 9ರಿಂದ ಮೇ 4ರವರೆಗೆ ವೈಭವದಿಂದ ನಡೆಯಲಿದೆ. ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಹಾಗೂ ಆಧ್ಯಾತ್ಮಿಕ ಪರಂಪರೆಯ ಪ್ರತೀಕವಾಗಿ ಗುರುತಿಸಿಕೊಂಡಿರುವ ಈ ಮಹೋತ್ಸವವು ಲಕ್ಷಾಂತರ ಭಕ್ತರು, ಕಲಾವಿದರು ಹಾಗೂ ಸಾರ್ವಜನಿಕರನ್ನು ಒಂದೆಡೆ ಸೇರಿಸುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವವಾಗಿದೆ. ಭಕ್ತಿ, ಆಚರಣೆ ಮತ್ತು ಜನಪದ ವೈಭವದ ಸಂಗಮವಾಗಿರುವ ಪೆರುಂ ಕಳಿಯಾಟವು…

Read More

ಬಸ್-ಬೈಕ್ ಡಿಕ್ಕಿ: ಬೆಂಕಿಗೆ ಆಹುತಿಯಾಗಿ ಯುವಕ ಸಾವು

ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದ ಪರಿಣಾಮ ಬೈಕ್‌ಗೆ ಬೆಂಕಿ ಹೊತ್ತಿಕೊಂಡು ಯುವಕನೊಬ್ಬ ಸಜೀವ ದಹನಗೊಂಡು ಮೃತಪಟ್ಟ ಘಟನೆ ಮುಧೋಳ ತಾಲ್ಲೂಕಿನ ಸೋರಗಾಂವ ಗ್ರಾಮದ ಸಮೀಪ ನಡೆದಿದೆ. ಮೃತ ಯುವಕನನ್ನು ಮುಧೋಳ ನಗರದ ಜನತಾ ಪ್ಲಾಟ್ ನಿವಾಸಿ ನವೀನ್ ಹನುಮಂತ ಗೊರ್ಕ್ (20) ಎಂದು ಗುರುತಿಸಲಾಗಿದೆ. ಬಾದಾಮಿಯಿಂದ ಇಚಲಕರಂಜಿ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಬೈಕ್‌ಗೆ ತಕ್ಷಣ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ತೀವ್ರತೆಗೆ ಸಿಲುಕಿದ ಸವಾರ…

Read More

ಅಲೋಶಿಯಸ್ ವಿವಿಗೆ ಪ್ರತಿಷ್ಠಿತ ಯುಜಿಸಿ ಕೆಟಗರಿ-1 ಸ್ಥಾನಮಾನ

ಮಂಗಳೂರು, ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯವು ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ಶ್ರೇಣೀಕೃತ ಸ್ವಾಯತ್ತತೆ ನಿಯಮಗಳ ಅಡಿಯಲ್ಲಿ ಪ್ರತಿಷ್ಠಿತ ಕೆಟಗರಿ-1 ಸ್ಥಾನಮಾನವನ್ನು ಪಡೆದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ನಗರದ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ರೆ. ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ., ವಿಶ್ವವಿದ್ಯಾಲಯದ 146 ವರ್ಷಗಳ ಶೈಕ್ಷಣಿಕ ಶ್ರೇಷ್ಠತೆ, ನಾವೀನ್ಯತೆ, ಸಂಶೋಧನೆ ಮತ್ತು ರಾಷ್ಟ್ರ ನಿರ್ಮಾಣದ ಸೇವೆಯನ್ನು ಪರಿಗಣಿಸಿ ಯುಜಿಸಿ ಈ ಗೌರವವನ್ನು ನೀಡಿದೆ…

Read More

SDPI 18ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ 383 ಯೂನಿಟ್ ರಕ್ತ ಸಂಗ್ರಹ

ಮಂಗಳೂರು, ಜೂನ್ 21: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ಯ 18ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಮಂಗಳೂರು ನಗರ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲೆಯ ನಾಲ್ಕು ಕಡೆಗಳಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಬಜ್ಪೆ, ಜೋಕಟ್ಟೆ, ಅಲೇಕಳ ಹಾಗೂ ಮುಲ್ಕಿ ಘಟಕಗಳ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ ಯುವಕರು ಮತ್ತು ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ರಕ್ತದಾನ ಮಾಡಿದರು. ಬಜ್ಪೆಯಲ್ಲಿ 153 ಯೂನಿಟ್, ಜೋಕಟ್ಟೆಯಲ್ಲಿ 91 ಯೂನಿಟ್, ಹಳೆಕಳದಲ್ಲಿ 85 ಯೂನಿಟ್ ಹಾಗೂ ಮುಲ್ಕಿಯಲ್ಲಿ 54 ಯೂನಿಟ್…

Read More
error: Content is protected !!