ಹೂಡಿಕೆದಾರರಿಗೆ ಸುಗಮ ಮಾರ್ಗ ಕಲ್ಪಿಸಿ, ಇಲಾಖಾ ಕಿರಿಕಿರಿಗೆ ಅಂತ್ಯ ಹಾಡಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
ಬೆಂಗಳೂರು, ಜೂನ್ 20: ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸುವ ಮೂಲಕ ಹೆಚ್ಚಿನ ಹೂಡಿಕೆ ಆಕರ್ಷಣೆ, ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕ ಬೆಳವಣಿಗೆಗೆ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೂಡಿಕೆದಾರರಿಗೆ ಸುಗಮ ಮತ್ತು ಸರಳವಾದ ವ್ಯವಸ್ಥೆ ಕಲ್ಪಿಸಬೇಕು. ಉದ್ಯಮಿಗಳು ವಿವಿಧ ಇಲಾಖೆಗಳ ಅನುಮತಿಗಳನ್ನು ಪಡೆಯುವ ಸಂದರ್ಭದಲ್ಲಿ ಎದುರಿಸುತ್ತಿರುವ ಕಿರಿಕಿರಿ…
