ಅಶೋಕ್ ರೈಗೆ ಸಚಿವ ಸ್ಥಾನ ಚರ್ಚೆ ಮತ್ತೆ ಗರಿಗೆದರಿತು.ಹೈಕಮಾಂಡ್ ಬುಲಾವ್ ಹಿನ್ನೆಲೆ ದೆಹಲಿಗೆ ತೆರಳಿದ ಶಾಸಕ

ಪುತ್ತೂರು, ಜೂನ್ 19: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆಗಳ ಬಗ್ಗೆ ಮತ್ತೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ರಚನೆಯ ಸಂದರ್ಭದಲ್ಲೇ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ಮಾತುಗಳು ಕೇಳಿಬಂದಿದ್ದವು. ಮೊದಲ ಹಂತದ ಸಚಿವ ಸಂಪುಟದಲ್ಲೇ ಅವಕಾಶ ದೊರೆಯಲಿದೆ ಎಂಬ ನಿರೀಕ್ಷೆ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರಲ್ಲಿ ಮೂಡಿತ್ತು….

Read More

ರಸಗೊಬ್ಬರ ದರ ಏರಿಕೆಯಿಂದ ರೈತರ ದೋಚಾಟ: ಕೆಆರ್‌ಎಸ್ ಗಂಭೀರ ಆರೋಪ

ಪುತ್ತೂರು; ರೈತರಿಗೆ ಅಗತ್ಯವಾದ ರಸಗೊಬ್ಬರಗಳ ಅಭಾವ ಸೃಷ್ಟಿಸಿ ದರ ಏರಿಕೆ ಮಾಡಿ ರೈತರನ್ನು ವಂಚಿಸುವ ಕೆಲಸ ಕಳೆದ ಹಲವಾರು ವರ್ಷಗಳಿಂದ ನಡೆಯುತ್ತಿದೆ. ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಉಂಟು ಮಾಡುವ ಮೂಲಕ ಸಬ್ಸಿಡಿ ವ್ಯಾಪ್ತಿಗೆ ಬರುವ ಯೂರಿಯಾ ಹಾಗೂ ಡಿಎಪಿ ರಸಗೊಬ್ಬರಗಳ ಮೂಲ ಬೆಲೆಯಿಂದ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಮೂಲಕ ರಾಜ್ಯದಲ್ಲಿ ಸುಮಾರು 2 ಸಾವಿರ ಕೋಟಿ ಹಣವನ್ನು ರೈತರಿಂದ ಮಾರಾಟಗಾರರು, ಅಧಿಕಾರಿಗಳು ಮತ್ತು ರಾಜಕಾರಣಿಗಳು ದೋಚುತ್ತಿದ್ದಾರೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ವೇಣುಗೋಪಾಲ್…

Read More

ರಾಹುಲ್ ಗಾಂಧಿ ಜನ್ಮದಿನ: ಹಿರಿಯ ಕಾಂಗ್ರೆಸ್ ಕಾರ್ಯಕರ್ತರಿಗೆ ಸನ್ಮಾನ

ಉಡುಪಿ:ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಬೇಕಾದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಬ್ರಹ್ಮಾವರದಲ್ಲಿ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾದ ಹಿರಿಯ ಕಾಂಗ್ರೆಸ್ ಕಾರ್ಯಕರ್ತರ ಸನ್ಮಾನ ಹಾಗೂ ಸ್ವಚ್ಛತಾ ಕಾರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಿಜೆಪಿ ಉದ್ಯಮಿಗಳು ಮತ್ತು ಶ್ರೀಮಂತರ ಪರ ಇರುವ ಪಕ್ಷವಾಗಿದ್ದು, ಕಾಂಗ್ರೆಸ್…

Read More

ದ.ಕ ಜಿಲ್ಲೆಯ 20 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ ವರದಿಯನ್ನು ಗಂಭೀರವಾಗಿ ಪರಿಗಣಿಸಿ : ಎಸ್ ಡಿ ಪಿ ಐ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ

ಬಿ.ಸಿ ರೋಡ್: ಶೈಕ್ಷಣಿಕ ವರ್ಷ ಆರಂಭವಾಗಿ 18 ದಿನಗಳು ಕಳೆದಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯ 20 ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ವಿದ್ಯಾರ್ಥಿಯೂ ದಾಖಲಾತಿಯಾಗದಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಮಾತ್ರವಲ್ಲದೆ, ದಾಖಲಾತಿ ನಡೆದಿರುವ ಅನೇಕ ಸರ್ಕಾರಿ ಶಾಲೆಗಳಲ್ಲಿಯೂ ವಿದ್ಯಾರ್ಥಿಗಳ ಸಂಖ್ಯೆ ಅತ್ಯಂತ ಕಡಿಮೆಯಾಗಿರುವುದು ಸರ್ಕಾರಿ ಶಿಕ್ಷಣ ವ್ಯವಸ್ಥೆಯ ದುಸ್ಥಿತಿಯನ್ನು ಬಿಂಬಿಸುತ್ತಿದೆ ಎಂದು ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಕಳವಳ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಶಾಲೆಗಳ ಮೇಲಿನ ಜನರ ವಿಶ್ವಾಸ ಕುಸಿಯುತ್ತಿರುವುದು,…

Read More

ಮುದ್ದು ಮೂಡುಬೆಳ್ಳೆ ಜೀವನ-ಸಾಹಿತ್ಯ ದಾಖಲಿಸುವ ಇಂಗ್ಲಿಷ್ ಕೃತಿ ಲೋಕಾರ್ಪಣೆ

ಮಂಗಳೂರು:ಕರಾವಳಿಯ ಖ್ಯಾತ ಸಾಹಿತಿ, ವಿಮರ್ಶಕ ಹಾಗೂ ಕನ್ನಡ ಸಾಹಿತ್ಯ ಕ್ಷೇತ್ರದ ವಿಶಿಷ್ಟ ವ್ಯಕ್ತಿತ್ವವಾದ ಮುದ್ದು ಮೂಡುಬೆಳ್ಳೆ ಅವರ ಜೀವನ, ಸಾಹಿತ್ಯ ಸಾಧನೆ ಹಾಗೂ ವ್ಯಕ್ತಿತ್ವವನ್ನು ದಾಖಲಿಸುವ ಡಾ. ಎಸ್.ಎನ್.ಡಿ. ಪೂಜಾರಿ ರಚಿಸಿರುವ ಇಂಗ್ಲಿಷ್ ಕೃತಿ ‘A Biographical Sketch of Muddu Moodubelle’ ಶುಕ್ರವಾರ ಮಂಗಳೂರಿನ ಪತ್ರಿಕಾಭವನದಲ್ಲಿ ಲೋಕಾರ್ಪಣೆಯಾಯಿತು. ವಿಮರ್ಶಕರು, ತುಳು-ಕನ್ನಡ ವಿದ್ವಾಂಸರು ಹಾಗೂ ವಿಶ್ರಾಂತ ಕುಲಪತಿಗಳಾದ ಪ್ರೊ. ಬಿ.ಎ. ವಿವೇಕ ರೈ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿ, ಇದು ಅನುವಾದಿತ ಕೃತಿಯಲ್ಲ, ಡಾ. ಎಸ್.ಎನ್.ಡಿ. ಪೂಜಾರಿ ಅವರು…

Read More

ಬಾಲಕಿ ಆರ್ನಿಕಾ ಸಾವು: ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಆರೋಗ್ಯ ಸಚಿವರು, ಶಾಸಕರಿಗೆ ದೂರು ನೀಡಲು ಕುಟುಂಬದ ನಿರ್ಧಾರ

ಬಂಟ್ವಾಳ: ಅಲ್ಪಕಾಲದ ಅಸೌಖ್ಯದಿಂದ ಜೂನ್ 16ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಐದು ವರ್ಷದ ಬಾಲಕಿ ಆರ್ನಿಕಾ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ವೈದ್ಯಕೀಯ ನಿರ್ಲಕ್ಷ್ಯ ಮತ್ತು ಚಿಕಿತ್ಸಾ ವ್ಯವಸ್ಥೆಯ ಲೋಪಗಳ ಬಗ್ಗೆ ಬಾಲಕಿಯ ತಾಯಿ ಛಾಯಾ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಆರೋಗ್ಯ ಸಚಿವರು ಹಾಗೂ ಸ್ಥಳೀಯ ಶಾಸಕರಿಗೆ ಲಿಖಿತ ದೂರು ಸಲ್ಲಿಸುವುದಾಗಿ ತಿಳಿಸಿದ್ದಾರೆ. ಇಂತಹ ಘಟನೆ ಮತ್ತಾವ ಕುಟುಂಬಕ್ಕೂ ಮರುಕಳಿಸಬಾರದು ಎಂಬ ಉದ್ದೇಶದಿಂದ ವೈದ್ಯಕೀಯ…

Read More

ಕಲ್ಲಡ್ಕ ಫ್ಲೈಓವರ್ ನಿರ್ಮಾಣ ಪೂರ್ಣ; ಸಮಸ್ಯೆಗಳು ಮಾತ್ರ ಯಥಾಸ್ಥಿತಿ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿಯ ಭಾಗವಾಗಿ ಕಲ್ಲಡ್ಕದಲ್ಲಿ ನಿರ್ಮಾಣಗೊಂಡಿರುವ 2.1 ಕಿ.ಮೀ ಉದ್ದದ ಫ್ಲೈಓವರ್ ರಾಜ್ಯದ ಗಮನ ಸೆಳೆದಿದ್ದರೂ, ಸ್ಥಳೀಯರ ಸಮಸ್ಯೆಗಳು ಮಾತ್ರ ಇನ್ನೂ ಬಗೆಹರಿದಿಲ್ಲ ಎಂಬ ಆರೋಪ ಕೇಳಿಬಂದಿದೆ. ಫ್ಲೈಓವರ್ ನಿರ್ಮಾಣದ ಅವಧಿಯಲ್ಲಿ ಧೂಳು, ವಾಹನ ಸಂಚಾರದ ಅಡಚಣೆ ಹಾಗೂ ವ್ಯಾಪಾರ ವಹಿವಾಟಿನ ಕುಸಿತದಿಂದ ಸ್ಥಳೀಯ ವ್ಯಾಪಾರಿಗಳು ಸಂಕಷ್ಟ ಅನುಭವಿಸಿದ್ದರು. ಕಾಮಗಾರಿ ಪೂರ್ಣಗೊಂಡ ಬಳಿಕವೂ ಸರ್ವೀಸ್ ರಸ್ತೆಯ ಅವ್ಯವಸ್ಥೆ, ಪಾರ್ಕಿಂಗ್ ಸಮಸ್ಯೆ ಹಾಗೂ ಸಂಚಾರ ನಿಯಮ ಉಲ್ಲಂಘನೆಗಳು ಮುಂದುವರಿದಿವೆ ಎಂದು…

Read More

ಅಂತರಾಷ್ಟ್ರೀಯ ಗೃಹ ಕಾರ್ಮಿಕರ ದಿನಾಚರಣೆ: ಗೃಹ ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಒತ್ತಾಯ

ಕಾವೂರು: ಮಹಿಳಾ ಗೃಹ ಕಾರ್ಮಿಕರ ಸಬಲೀಕರಣ ಯೋಜನೆ-ಸೇವಕ ಮಂಗಳೂರು ಇದರ ವತಿಯಿಂದ ಅಂತರಾಷ್ಟ್ರೀಯ ಗೃಹ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವು ಕಾವೂರು ಸೊಸೈಟಿ ಹಾಲ್‌ನಲ್ಲಿ ನಡೆಯಿತು. ಅಂತರಾಷ್ಟ್ರೀಯ ಗೃಹ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮಕ್ಕೆ ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ಮನೆ ಚೆನ್ನಾಗಿದ್ದರೆ ನಮ್ಮ ಮನಸ್ಸು ಇಡೀ ಪ್ರಪಂಚ ಚೆನ್ನಾಗಿರುತ್ತೆ ಇದಕ್ಕೆಲ್ಲ ಕಾರಣ ಗೃಹ ಕಾರ್ಮಿಕರು ಎಂದು ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ವಕೀಲೆ ಮಾನಸ ಹೆಗಡೆ ಸಂಪನ್ಮೂಲ…

Read More

ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: AI, ಮೆಕ್ಯಾನಿಕಲ್ ಡಿಪ್ಲೋಮಾ ಕೋರ್ಸ್‌ಗಳಲ್ಲಿ ಪ್ರವೇಶ ಆರಂಭ

ಮಂಗಳೂರು:ಬೈಕಂಪಾಡಿಯಲ್ಲಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ (ಜಿ.ಟಿ.ಟಿ.ಸಿ) ಡಿಪ್ಲೋಮಾ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿವಿಧ ಡಿಪ್ಲೋಮಾ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು, ಕೆಲವು ಕೋರ್ಸ್‌ಗಳಲ್ಲಿ ಸೀಟುಗಳು ಖಾಲಿ ಉಳಿದಿವೆ ಎಂದು ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀನಾರಾಯಣ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಡಿಪ್ಲೋಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ಡಿಪ್ಲೋಮಾ ಇನ್ ಆರ್ಟಿಫಿಷಿಯಲ್…

Read More

ಸಜಿಪದಲ್ಲಿ ಭೀಕರ ರಸ್ತೆ ಅಪಘಾತ 22 ವರ್ಷದ ಅಹಮದ್ ಆಸೀರ್ ಸ್ಥಳದಲ್ಲೇ ಸಾವು

ಬಂಟ್ವಾಳ, ಜೂನ್ 20: ಮುಡಿಪು–ಬಿ.ಸಿ.ರೋಡ್ ರಸ್ತೆಯ ಸಜಿಪ ಎಂಬಲ್ಲಿ ಶುಕ್ರವಾರ ಸಂಜೆ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸಜಿಪ ನಿವಾಸಿ ಅಬ್ದುಲ್ ರಹಿಮಾನ್ ಅವರ ಪುತ್ರ ಅಹಮದ್ ಆಸೀರ್ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಹಮದ್ ಆಸೀರ್ ಅವರು ಸಂಜೆ ತಮ್ಮ ಮನೆಯಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ಸಜಿಪ ಬೇಂಕೆ ಪ್ರದೇಶಕ್ಕೆ ಆಕ್ಟಿವಾ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ…

Read More
error: Content is protected !!