ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸುರತ್ಕಲ್‌ನಲ್ಲಿ ಬೃಹತ್ ಮಾನವ ಸರಪಳಿ

ಸುರತ್ಕಲ್: ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ರಾಜ್ಯ ಸರ್ಕಾರದ ಆದೇಶವನ್ನು ವಿರೋಧಿಸಿ ಹಾಗೂ ಸುರತ್ಕಲ್ ಹೋಬಳಿಯಲ್ಲಿ ಸಮುದಾಯ ಆಸ್ಪತ್ರೆ ಸ್ಥಾಪನೆಗೆ ಆಗ್ರಹಿಸಿ “ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ” ನೇತೃತ್ವದಲ್ಲಿ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು. ಸುರತ್ಕಲ್ ವ್ಯಾಪ್ತಿಯ ವಿವಿಧ ಸಂಘ-ಸಂಸ್ಥೆಗಳ ಕಾರ್ಯಕರ್ತರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾನವ ಸರಪಳಿಗೆ ಮುನ್ನ ನಡೆದ…

Read More

ಕಲುಷಿತ ನೀರು ಸರಬರಾಜು: ಪಾಲಿಕೆ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

ನಗರದ ಬಿಜೈ ನ್ಯೂರೋಡ್, ಬಟ್ಟಗುಡ್ಡೆ, ಕದ್ರಿ, ಚಿಲಿಂಬಿ ಸೇರಿದಂತೆ ಕೆಲವು ಭಾಗಗಳಲ್ಲಿ ಕುಡಿಯಲು ಯೋಗ್ಯವಲ್ಲದ ನೀರು ಸರಬರಾಜು ಆಗಿದ್ದರಿಂದ ಹಲವು ಸಾರ್ವಜನಿಕರ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದಿದ್ದು ಶಾಸಕ ವೇದವ್ಯಾಸ ಕಾಮತ್ ಅವರು ರಾಜ್ಯ ಕಾಂಗ್ರೆಸ್ ನೇತೃತ್ವದ ಪಾಲಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರದೇಶಗಳ ಬಹುತೇಕ ಮನೆ ಹಾಗೂ ಅಪಾರ್ಟ್‌ಮೆಂಟ್ ಗಳಿಗೆ, ನೀಲಿ ಬಣ್ಣದಿಂದ ಕೂಡಿದ ವಾಸನೆ ಮಿಶ್ರಿತ ನೀರು ಸರಬರಾಜಾಗಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ. ಈ ನೀರನ್ನು ಕುಡಿದ ಅವರಲ್ಲಿ ವಾಂತಿ,…

Read More

ಸುರತ್ಕಲ್ ರೈಲ್ವೆ ನಿಲ್ದಾಣದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಸಂಸದ ಕ್ಯಾ. ಚೌಟ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ₹2.1 ಕೋಟಿ ಅನುದಾನದ ಅಡಿಯಲ್ಲಿ ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ನಡೆದ ನೂತನ ಪ್ಲಾಟ್‌ಫಾರ್ಮ್ ನಿರ್ಮಾಣ ಹಾಗೂ ಸುಸಜ್ಜಿತ ಮೇಲ್ಛಾವಣಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ದ. ಕ. ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು. ನಿಲ್ದಾಣದ ಬಹುತೇಕ ಕಾಮಗಾರಿಗಳು ಮುಕ್ತಾಯದ ಹಂತಕ್ಕೆ ತಲುಪಿದ್ದು, ಶೀಘ್ರದಲ್ಲೇ ಇದನ್ನು ಪ್ರಯಾಣಿಕರ ಸೇವೆಗೆ ಮುಕ್ತಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದರು ಅಧಿಕಾರಿಗಳಿಗೆ ಸೂಚಿಸಿದರು….

Read More

ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ಸಭೆ ಯಶಸ್ವಿ : ಸಂಘಟನೆ ಬಲವರ್ಧನೆಗೆ ಮಹಿಳಾ ಕಾರ್ಯಕರ್ತೆಯರ ಸಕ್ರಿಯ ಪಾತ್ರ ಅಗತ್ಯ: ಜಾಕೆ ಮಾಧವ ಗೌಡ

ಮಂಗಳೂರು, ಜೂನ್ 16: ಜನತಾದಳ ಜಾತ್ಯಾತೀತ (ಜೆಡಿಎಸ್) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ಮಹತ್ವದ ಸಭೆಯು ಮಂಗಳವಾರ ನಗರದ ವುಡ್‌ಲ್ಯಾಂಡ್ಸ್ ಹೋಟೆಲ್‌ನಲ್ಲಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ರಮೀಝಾ ನಾಸೀರ್ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಪಕ್ಷದ ಸಂಘಟನೆ ಬಲವರ್ಧನೆ, ಮಹಿಳಾ ಘಟಕದ ವಿಸ್ತರಣೆ, ಸದಸ್ಯತ್ವ ಅಭಿಯಾನ, ಮುಂಬರುವ ರಾಜಕೀಯ ಕಾರ್ಯಕ್ರಮಗಳ ರೂಪುರೇಷೆ ಹಾಗೂ ಪಕ್ಷದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಸೇರಿದಂತೆ ವಿವಿಧ ಮಹತ್ವದ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು….

Read More

ಎಸ್ ಐ ಆರ್ ಸಂದರ್ಭ ಪ್ರತಿಯೊಬ್ಬ ಮತದಾರರ ಸಂವಿಧಾನಿಕ ಹಕ್ಕು ಕಾಪಾಡಲು ಕ್ರಮ ವಹಿಸಲು ದ.ಕ. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಗಳಿಗೆ ಸಿಪಿಐಎಂ ಮನವಿ

ಜೂನ್ 30 ರಿಂದ ಎಸ್ಐಆರ್ ರಾಜ್ಯದಲ್ಲಿ ಆರಂಭಗೊಳ್ಳುತ್ತಿದ್ದು, ಪೌರತ್ವವನ್ನು ಸ್ವಯಂ ಮತದಾರರೆ ನಿರೂಪಿಸಿಕೊಂಡು ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳುವ ತೀವ್ರ ಸಂಕಷ್ಟದ ವಿಧಾನವನ್ನು ಚುನಾವಣಾ ಆಯೋಗ ಅನುಸರಿಸುತ್ತಿರುವುದರಿಂದ ಯಾವೊಬ್ಬ ನಾಗರಿಕನೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ರಾಜ್ಯ ಸರಕಾರ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಪಿಐಎಂ ರಾಜ್ಯ ಸಮಿತಿಯು ದ.ಕ. ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಚುನಾವಣಾ ಆಯೋಗ ನಿಗದಿ ಪಡಿಸಿರುವ 11 ದಾಖಲೆಗಳ ಪೈಕಿ ಒಂದು ದಾಖಲೆಯೂ ಒದಗಿಸಲು ಸಾಧ್ಯ ಇಲ್ಲದವರಿಗೆ ದಾಖಲೆಗಳನ್ನು ಪಡೆದುಕೊಳ್ಳಲು ನಿಯಮಗಳನ್ನು ಸರಳೀಕರಿಸಿ…

Read More

ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕುಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ಹಾಗೂ ಕೈಗಾರಿಕಾ ರಂಗಕ್ಕೆ ಹೊಸ ಶಕ್ತಿ ತುಂಬಲಿರುವ ಗಂಜಿಮಠದಲ್ಲಿ ನಿರ್ಮಾಣ ಹಂತದಲ್ಲಿರುವ ಮಹತ್ವಾಕಾಂಕ್ಷೆಯ ಪ್ಲಾಸ್ಟಿಕ್ ಪಾರ್ಕ್ ಯೋಜನಾ ಪ್ರದೇಶಕ್ಕೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಅವರೊಂದಿಗೆ ಇಂದು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. ಭೇಟಿ ವೇಳೆ ಸಂಸದರು ಪಾರ್ಕ್‌ನ ರಸ್ತೆ, ವಿದ್ಯುತ್, ನೀರು ಸರಬರಾಜು ಸೇರಿದಂತೆ ಪ್ರಮುಖ ಮೂಲಸೌಕರ್ಯ…

Read More

ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರ್ಧಾರ ಸ್ವಾಗತಾರ್ಹ – ಸಭೆಯು ಕರಾವಳಿಯ ಅಭಿವೃದ್ಧಿಯ ಮಂತ್ರವಾಗಲಿ: ಅನ್ವರ್ ಸಾದತ್

ಮಂಗಳೂರು:- ರಾಜ್ಯ ಸರ್ಕಾರದ ಮುಂದಿನ ಸಚಿವ ಸಂಪುಟ ಸಭೆಯನ್ನು ಕರಾವಳಿಯ ರಾಜಧಾನಿಯಾದ ಮಂಗಳೂರಿನಲ್ಲಿ ನಡೆಸಲು ಕರ್ನಾಟಕದ ಮುಖ್ಯಮಂತ್ರಿಗಳಾದ ಗೌರವಾನ್ವಿತ ಡಿ.ಕೆ. ಶಿವಕುಮಾರ್ ಅವರು ತೆಗೆದುಕೊಂಡಿರುವ ನಿರ್ಧಾರವನ್ನು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಸ್ವಾಗತಿಸಿದ್ದಾರೆ. ಆಡಳಿತ ಯಂತ್ರವನ್ನು ಜನಸಾಮಾನ್ಯರ ಬಾಗಿಲಿಗೆ ತಲುಪಿಸುವ ಈ ಕ್ರಮವು, ಪ್ರಾದೇಶಿಕ ಅಸಮತೋಲನವನ್ನು ನಿವಾರಿಸುವ ದಿಕ್ಕಿನಲ್ಲಿ ಒಂದು ಧನಾತ್ಮಕ ಹೆಜ್ಜೆಯಾಗಲಿ ಎಂದು ಅವರು ಹಾರೈಸಿದ್ದಾರೆ. ಮುಖ್ಯಮಂತ್ರಿಗಳ ನೇತೃತ್ವದ ಈ ಮಹತ್ವದ ಸಂಪುಟ ಸಭೆಯು ಕೇವಲ ಔಪಚಾರಿಕ ಸಭೆಯಾಗದೆ, ಈ ಭಾಗದ…

Read More

ಕಂಬ್ಳ ವಾರ್ಡಿನ ವೇರ್‌ಹೌಸ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 29ನೇ ಕಂಬ್ಳ ವಾರ್ಡಿನ ವೇರ್ ಹೌಸ್ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗಾಗಿಯು 40ಲಕ್ಷ ರೂ. ವಿಶೇಷ ಅನುದಾನದಲ್ಲಿ ನಡೆಯಲಿದ್ದು ಅದರ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಬೇಡಿಕೆಗೆ ಅನುಗುಣವಾಗಿ ಈ ಕಾಮಗಾರಿ ನಡೆಯುತ್ತಿದ್ದು ಶೀಘ್ರದಲ್ಲಿ ಕಾಮಗಾರಿ ನೆರವೇರಲಿದೆ. ಈ ಸಂದರ್ಭದಲ್ಲಿ ಉಂಟಾಗುವ ಅಡಚಣೆಗೆ ಸಾರ್ವಜನಿಕರು ಸಹಕರಿಸುವಂತೆ ಶಾಸಕರು ಮನವಿ ನೀಡಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯರಾದ…

Read More

ಶಿಕ್ಷಣದಲ್ಲಿ ಮಹಿಳೆಯರ ಸೃಜನಶೀಲತೆ ಮನೆಯನ್ನು ಬೆಳಗಿಸುತ್ತದೆ: ರಾಯಿ ರಾಜಕುಮಾರ್

ಮೂಡುಬಿದಿರೆ: ತಾಲೂಕಿನ ಪಡುಮಾರ್ನಾಡು ಗ್ರಾಮದ ಅಮನಬೆಟ್ಟು ಯುವಕ ಮಂಡಲದಲ್ಲಿ ಯುವಕ-ಯುವತಿ ಮಂಡಲದ ಸದಸ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ಶಿಕ್ಷಣ ಸಂಬಂಧಿತ ವಿಶೇಷ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಬೆಂಗಳೂರು ಸ್ಪಾರ್ಕ್ ಅಕಾಡೆಮಿಯ ತರಬೇತುದಾರ ಹಾಗೂ ಪತ್ರಕರ್ತ Rai Rajkumar ಮಾತನಾಡಿ, ಶಿಕ್ಷಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದ್ದು, ಸೃಜನಶೀಲ ಮನೋಭಾವವನ್ನು ಬೆಳೆಸಿಕೊಂಡರೆ ಯಶಸ್ಸು ಸಾಧಿಸಲು ಸಾಧ್ಯ ಎಂದು ಹೇಳಿದರು. ಶಿಸ್ತು, ಸಂಯಮ, ಸರಳ ಜೀವನ ಮತ್ತು ಉನ್ನತ ಜ್ಞಾನದೊಂದಿಗೆ ಯೋಜಿತವಾಗಿ ಕಾರ್ಯನಿರ್ವಹಿಸಿದರೆ ಪ್ರತಿಯೊಬ್ಬರೂ ಜೀವನದಲ್ಲಿ…

Read More

ಕಡೆಕಾರು ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಪುನರ್‌ನಿರ್ಮಾಣಕ್ಕೆ ಶಿಲಾನ್ಯಾಸ

ಮಂಗಳೂರು: ಜಪ್ಪಿನಮೊಗರು ಕಡೆಕಾರು ಶ್ರೀ ಮಲ್ಲಿಕಾರ್ಜುನ ಕ್ಷೇತ್ರದ ಪುನರ್‌ನಿರ್ಮಾಣ ಕಾಮಗಾರಿಗೆ ಬುಧವಾರ ಬ್ರಹ್ಮಶ್ರೀ ವೇದಮೂರ್ತಿ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಯವರ ವೈದಿಕ ನೇತೃತ್ವದಲ್ಲಿ ಶಿಲಾನ್ಯಾಸ ನೆರವೇರಿತು. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಒಂದು ಕಾಲದಲ್ಲಿ ಹಿಂದುಳಿದ ಪ್ರದೇಶವಾಗಿದ್ದ ಈ ಭಾಗ ಇಂದು ಅಭಿವೃದ್ಧಿ ಹೊಂದಿದ್ದು, ದೇವಸ್ಥಾನದ ಪುನರ್‌ನಿರ್ಮಾಣ ಕಾರ್ಯಕ್ಕೆ ಅವಕಾಶ ದೊರೆತಿರುವುದು ಭಕ್ತರ ಸೌಭಾಗ್ಯ ಎಂದರು. ದೇವಸ್ಥಾನ ಪುನರ್‌ನಿರ್ಮಾಣಕ್ಕೆ ಮಾಣಿಲ ಕ್ಷೇತ್ರದಿಂದ ₹1 ಲಕ್ಷ ದೇಣಿಗೆ ನೀಡುವುದಾಗಿ ಹಾಗೂ ಕರಸೇವೆಗೆ…

Read More
error: Content is protected !!