ಹೊಸ ನಾಯಕತ್ವದಲ್ಲಿ ಸರ್ಕಾರ, ಪಕ್ಷ ಇನ್ನಷ್ಟು ಬಲಿಷ್ಠ: ಜಿಲ್ಲಾ ಕಾಂಗ್ರೆಸ್

ಮಂಗಳೂರು:ರಾಜ್ಯ ಕಾಂಗ್ರೆಸ್ ಸಂಘಟನೆಯಲ್ಲಿ ನಡೆದಿರುವ ಇತ್ತೀಚಿನ ನೇಮಕಾತಿಗಳು ಪಕ್ಷದ ಸಂಘಟನೆಗೆ ಹೊಸ ಚೈತನ್ಯ ಮತ್ತು ಬಲವನ್ನು ನೀಡಲಿದ್ದು, ಹೊಸ ನಾಯಕತ್ವದಡಿ ಸರ್ಕಾರ ಹಾಗೂ ಪಕ್ಷ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಸಂತಸ ವ್ಯಕ್ತಪಡಿಸಿದರು . ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ ಎಂದರು. ಇದೇ ವೇಳೆ…

Read More

ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ; ಕೇವಲ ಪರಿಷ್ಕರಣೆ ಮಾತ್ರ: ಕಾಂಗ್ರೆಸ್ ಸ್ಪಷ್ಟನೆ

ಮಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂಬ ಬಿಜೆಪಿ ನಾಯಕರ ಆರೋಪಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳು ಮತ್ತು ಅಪಪ್ರಚಾರ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಸ್ಪಷ್ಟಪಡಿಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನತೆಗೆ ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಅದರ ಪ್ರಯೋಜನ ರಾಜ್ಯದ ಮನೆಮನೆಗೂ ತಲುಪಿದೆ ಎಂದರು….

Read More

ಕಡಬದಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ಬಂಧನ

ದಕ್ಷಿಣ ಕನ್ನಡ :ಕಡಬದ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ರಸ್ತೆಯಲ್ಲಿ ದಿನಾಂಕ:13 ರಂದು ಬೆಳಗ್ಗಿನ ಜಾವ ಪಿಕಪ್ ವಾಹನವೊಂದು ಆಯತಪ್ಪಿ ಬಿದ್ದಿದ್ದು, ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ. ಇದರಲ್ಲಿ ಜಾನುವಾರು ಸಾಗಿಸುತ್ತಿದ್ದ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ಉಪ-ನಿರೀಕ್ಷಕರಿಗೆ ಮಾಹಿತಿ ಬಂದಿತ್ತು. ಅದನ್ನು ಆಧರಿಸಿ, ಪಿಕಪ್ ವಾಹನದ ಚಾಲಕ ಹಾಸನ ಅರಕಲಗೂಡು ನಿವಾಸಿಗಳಾದ ಚಂದ್ರು @ ಚಂದ್ರಶೇಖರ ಮತ್ತು ಕ್ಲೀನರ್ ಮೋಹನ ಎಂಬವರುಗಳನ್ನು ಪೊಲೀಸರು ವಿಚಾರಣೆಗಾಗಿ ಠಾಣೆಗೆ ಕರೆತಂದಿದ್ದರು. ವಿಚಾರಣೆಗೊಳಪಡಿಸಿದಾಗ ಈ ಪಿಕಪ್ ವಾಹನದಲ್ಲಿ…

Read More

ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡದ ಕಾಮಗಾರಿ ತುರ್ತಾಗಿ ಪೂರ್ಣಗೊಳಿಸಿ: ಪವನ್ ಕುಮಾರ್ ಶಿರ್ವ ಆಗ್ರಹ

ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವಂತೆ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಂದೇಶವನ್ನು ಹಂಚಿಕೊಂಡ ಅವರು , ಉಡುಪಿ ಜಿಲ್ಲೆಯ ಐದು ತಾಲೂಕುಗಳ ಜನತೆಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸಬೇಕಾದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿ ಆರಂಭವಾಗಿ ಹಲವು ವರ್ಷಗಳಾದರೂ ಇನ್ನೂ ಪೂರ್ಣಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಬಡ ಹಾಗೂ ಮಧ್ಯಮ ವರ್ಗದ…

Read More

ಜುಲೈ 5ರಂದು ಬಜ್ಪೆ ಬಂಟರ ಸಂಘದ ನೂತನ ಭವನಕ್ಕೆ ಶಿಲಾನ್ಯಾಸ

ಮಂಗಳೂರು:ಬಜ್ಪೆ ಬಂಟರ ಸಂಘ (ರಿ) ವಲಯದ ಮಹತ್ವಾಕಾಂಕ್ಷೆಯ ಕನಸಿನ ಕೂಸಾಗಿರುವ ನೂತನ ಬಂಟರ ಭವನ ನಿರ್ಮಾಣ ಯೋಜನೆಗೆ ಜುಲೈ 5ರಂದು ಬೆಳಿಗ್ಗೆ 10.30 ಗಂಟೆಗೆ ತಾರಿಕಂಬಳ – ಮುಂಡಾರಿನಲ್ಲಿ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಬಂಟರ ಸಂಘ (ರಿ) ಬಜ್ಪೆ ವಲಯದ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜ್ಪೆ ಬಂಟರ ಸಂಘ ವಲಯವು 16 ಗ್ರಾಮಗಳನ್ನು ಒಳಗೊಂಡಿದ್ದು, ಕಳೆದ 14 ವರ್ಷಗಳಿಂದ ಸಂಸ್ಥಾಪಕ ಅಧ್ಯಕ್ಷ ವಿಜಯನಾಥ್ ವಿಠ್ಠಲ್ ಶೆಟ್ಟಿ…

Read More

SIR ಕುರಿತು ಮಹಿಳೆಯರಲ್ಲಿ ಜಾಗೃತಿ ಮೂಡಿಸಿ: ಉಷಾ ಅಂಚನ್ ಕರೆ

SIR ಕುರಿತು ಮಹಿಳೆಯರಲ್ಲಿ ಜಾಗೃತಿ ಮೂಡಿಸಿ: ಮಹಿಳಾ ಕಾಂಗ್ರೇಸ್ ಅದ್ಯಕ್ಷೆ ಉಷಾ ಅಂಚನ್,ಆಟಿಡೊಂಜಿ ಕೂಟ, ಕ್ರೀಡಾಕೂಟಗಳ ಮೂಲಕ ಮಹಿಳೆಯರನ್ನು ಸಂಘಟಿಸಿ ಬ್ಲಾಕ್ ಅದ್ಯಕ್ಷೆ ಐಡಾ ಸುರೇಶ್ ಪಾಣೆಮಂಗಳೂರು: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳ ಮಾಸಿಕ ಸಭೆಯು ಇಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಐಡಾ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ…

Read More

ವಿದ್ಯಾರ್ಥಿ ಸಮಸ್ಯೆಗಳ ನಿರ್ವಹಣೆಯಲ್ಲಿ ವಿಫಲ: ಮಂಗಳೂರು ವಿವಿ ಉಪಕುಲಪತಿ ರಾಜೀನಾಮೆಗೆ ಎಬಿವಿಪಿ ಒತ್ತಾಯ

ಮಂಗಳೂರು ವಿಶ್ವವಿದ್ಯಾನಿಲಯದ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಜೂನ್ 12ರಂದು ಹಮ್ಮಿಕೊಳ್ಳಲಾಗಿದ್ದ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಹಕ್ಕುಗಳ ಉಲ್ಲಂಘನೆಯಾಗಿದ್ದು, ಈ ಕ್ರಮವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ತೀವ್ರವಾಗಿ ಖಂಡಿಸಿದೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎವಿವಿಪಿ ಕರ್ನಾಟಕ ದಕ್ಷಿಣ ರಾಜ್ಯ ಸಹ ಕಾರ್ಯದರ್ಶಿ ಸುವಿತ್ ಶೆಟ್ಟಿ , ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಒಂಬತ್ತು ಪ್ರಮುಖ ಸಮಸ್ಯೆಗಳ ಪರಿಹಾರಕ್ಕಾಗಿ ಆಡಳಿತ ಸೌಧದ ಎದುರು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗಿತ್ತು. ಯಾವುದೇ ರೀತಿಯ…

Read More

ಕೊಲ್ಲೂರಿಗೆ ಬಿ.ವೈ. ವಿಜಯೇಂದ್ರ ಭೇಟಿ- ದೇವಿ ದರ್ಶನ ,ವಿಶೇಷ ಪೂಜೆ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ ದರ್ಶನ ಪಡೆದರು. ಈ ವೇಳೆ ದೇವಳದಲ್ಲಿ ನಡೆದ ಚಂಡಿಕಾ ಹೋಮದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ವಿಜಯೇಂದ್ರ ಅವರೊಂದಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಉಪಸ್ಥಿತರಿದ್ದರು. ದೇವಿ ದರ್ಶನದ ಬಳಿಕ ಮುಖಂಡರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ ವಿಜಯೇಂದ್ರ, ಪಕ್ಷದ ಸ್ಥಳೀಯ ಯುವ ನಾಯಕರನ್ನು ಭೇಟಿ ಮಾಡಿ ಸಂಘಟನಾ…

Read More

ದುರ್ಬಲಗೊಂಡ ಮುಂಗಾರು: ರಾಜ್ಯದಲ್ಲಿ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಕುಸಿತ

ಬೆಂಗಳೂರು, ಜೂ.16: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳು ತೀವ್ರ ದುರ್ಬಲಗೊಂಡ ಪರಿಣಾಮ ಜೂನ್ ತಿಂಗಳ ಮೊದಲ ಎರಡು ವಾರಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಪ್ರಮುಖ ಜಲಾಶಯಗಳ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ. ಇದರಿಂದ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳ ಬಗ್ಗೆ ಆತಂಕ ಹೆಚ್ಚಾಗಿದೆ. ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ಇದುವರೆಗೆ ಶೇ.21ರಷ್ಟು ಮಳೆ ಕೊರತೆ ದಾಖಲಾಗಿದ್ದು, ದೇಶಾದ್ಯಂತ ಶೇ.64ರಷ್ಟು ಮಳೆಯ ಅಭಾವ ಉಂಟಾಗಿದೆ. ಜೂನ್ 4ರಿಂದ 15ರವರೆಗಿನ ಅವಧಿಯಲ್ಲಿ ದೇಶದಲ್ಲಿ ವಾಡಿಕೆಯಂತೆ 53 ಮಿ.ಮೀ….

Read More

ಬಿಸಿರೋಡಿನ ನಾಗ ಕ್ಯಾಂಟೀನ್‌ನಲ್ಲಿ ಗ್ಯಾಸ್ ಸೋರಿಕೆ; ಸ್ವಲ್ಪದರಲ್ಲಿ ತಪ್ಪಿದ ಭಾರೀ ದುರಂತ

ಬಂಟ್ವಾಳ: ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ.ಬಿಸಿರೋಡಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಇರುವ ನಾಗರಾಜ್ ಎಂಬವರಿಗೆ ಸೇರಿದ ನಾಗ ಕ್ಯಾಂಟೀನ್ ನ ಹಿಂಬದಿಯಲ್ಲಿ ದೋಸೆ ಮಾಡಲು ಇರಿಸಲಾಗಿದ್ದ ಅಡುಗೆ ಅನಿಲದಲ್ಲಿ ಸೋರಿಕೆ ಕಂಡು ಬಂದು ಬೆಂಕಿ ಕಾಣಿಸಿಕೊಂಡಿದೆ. ದೋಸೆ ಮಾಡುತ್ತಿದ್ದ ಕ್ಯಾಂಟೀನ್ ನ ಕೆಲಸಗಾರ ವಿಶ್ವನಾಥ ಎಂಬವರಿಗೆ ಅನಿಲ ಸೋರಿಕೆಯಿಂದ ತಗುಲಿಗೊಂಡ ಬೆಂಕಿಗೆ ಸ್ವಲ್ಪ ಮಟ್ಟಿಗೆ ಗಾಯವಾಗಿದೆ. ಇದರ ಜೊತೆಗೆ ಕ್ಯಾಂಟೀನ್ ನಲ್ಲಿ ಕೆಲಸ ಮಾಡುತ್ತಿದ್ದ ಮಾಲಕನ…

Read More
error: Content is protected !!