ವಿಶ್ವಶಾಂತಿಗಾಗಿ ರಾಮಾಂಜಿ ಏಕಾಂಗಿ ಮೌನ ಪ್ರತಿಭಟನೆ

ಉಡುಪಿ: ಜಾಗತಿಕ ಯುದ್ಧದ ಮೂಲಕ ಜನಾಂಗದ ಮೇಲೆ ನಡೆಯುತ್ತಿರುವ ಹಿಂಸೆ ಮತ್ತು ಪ್ರಕೃತಿಯ ಮೇಲೆ ಆಗುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಮಕ್ಕಳ ಹಕ್ಕುಗಳ ಹೋರಾಟಗಾರ, ರಂಗಕರ್ಮಿ, ಕನ್ನಡ ಉಪನ್ಯಾಸಕ ರಾಮಾಂಜಿ ನಮ್ಮ ಭೂಮಿ ಶನಿವಾರ ಮಣಿಪಾಲ ಟೈಗರ್ ಸರ್ಕಲ್ ಬಳಿ ಏಕಾಂಗಿಯಾಗಿ ಮೌನ ಪ್ರತಿಭಟನೆ ನಡೆಸಿದರು. ಇದಕ್ಕೂ ಮುನ್ನ ಮಣಿಪಾಲದ ಬ್ರಹ್ಮ ಡಾ. ಟಿ.ಎಂ.ಎ.ಪೈ ಅವರ ಪುತ್ತಳಿಗೆ ಪುಷ್ಪ ನಮನ ಅರ್ಪಿಸಿ, ಈ ಯುದ್ಧ ನೀತಿಗಳಿಂದ ಮಡಿದವರಿಗೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಮಾಂಜಿ, ಕಳೆದ…

Read More

ಧಾರ್ಮಿಕ-ಲೌಕಿಕ ಶಿಕ್ಷಣದ ಸಮನ್ವಯಕ್ಕೆ ದಾರುಲ್ ಖೈರ್ ಅಕಾಡೆಮಿ ಮಂಚಿಯಲ್ಲಿ ಚಾಲನೆ

ಬಂಟ್ವಾಳ ಮಂಚಿ: SKSM ಅಧೀನ ಸಂಸ್ಥೆಯಾದ ದಾರುಲ್ ಖೈರ್ ಎಜುಕೇಶನಲ್ ಅಕಾಡೆಮಿಯ ಹಿಫ್ಝ್ ಕಾಲೇಜು ಹಾಗೂ ಕಿಂಡರ್ ಗಾರ್ಟನ್ (ಕೆ.ಜಿ.) ವಿಭಾಗದ ಉದ್ಘಾಟನಾ ಸಮಾರಂಭವು ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕಾಡಂಗಡಿಯಲ್ಲಿ ಅರ್ಥಪೂರ್ಣವಾಗಿ ನೆರವೇರಿತು. ಪವಿತ್ರ ಕುರ್‌ಆನ್ ಶಿಕ್ಷಣದೊಂದಿಗೆ ಗುಣಮಟ್ಟದ ಲೌಕಿಕ ವಿದ್ಯೆಯನ್ನು ಸಮನ್ವಯಗೊಳಿಸಿ, ಧಾರ್ಮಿಕ ಮೌಲ್ಯಗಳು ಹಾಗೂ ನೈತಿಕತೆಯ ಬೆಳಕಿನಲ್ಲಿ ಸಮಾಜಕ್ಕೆ ಆದರ್ಶ ಪ್ರಜೆಗಳನ್ನು ರೂಪಿಸುವ ಮಹತ್ತರ ಉದ್ದೇಶದೊಂದಿಗೆ ಶಿಕ್ಷಣ ಸಂಸ್ಥೆಯು ತನ್ನ ಪಯಣ ಆರಂಭಿಸಿದೆ. ಗುಣಮಟ್ಟದ ಶಿಕ್ಷಣದ ಭದ್ರ ಬುನಾದಿ;ಅಬ್ದುಲ್ ರಹಿಮಾನ್ ಮಠ ಉಪ್ಪಿನಂಗಡಿ…

Read More

ಬೆಂಗಳೂರು ಕನ್ನಡ ಸಾಂಸ್ಕೃತಿಕ ರಾಯಭಾರಿಗಳ ದುಂಡು ಮೇಜಿನ ಪರಿಷತ್ತು ಚಿಂತನಾ ಸಭೆ

ಕಾಸರಗೋಡು ಕನ್ನಡ ಭಾಷೆ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದ ರಾಜಧಾನಿ- ಬಿಡದಿಯ ಡಾ. ಶ್ರೀ ಮಠದ ನಾಗರಾಜು ಸ್ವಾಮೀಜಿ ಕೇರಳ -ಕರ್ನಾಟಕ ರಾಜ್ಯದ ಗಡಿನಾಡಿನಲ್ಲಿ ಸ್ಥಾಪನೆಗೊಂಡಿರುವ ಕಾಸರಗೋಡು ಕನ್ನಡ ಗ್ರಾಮದಲ್ಲಿ , ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪ ಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕಾಸರಗೋಡು ನೇತೃತ್ವದಲ್ಲಿ ತನ್ನ 36 ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ 2026 ನವಂಬರ್ 7 ಮತ್ತು 8ರಂದು ನಡೆಯುವ ಐತಿಹಾಸಿಕ ಕೇರಳ ರಾಜ್ಯ 8…

Read More

ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ WIM ಪ್ರತಿಭಟನೆ

ಅಡುಗೆ ಅನಿಲ (ಗ್ಯಾಸ್) ಬೆಲೆ ಏರಿಕೆ, ಕೇಂದ್ರ ಸರ್ಕಾರದ ಜನವಿರೋಧಿ ಹಾಗೂ ವಿಳಂಬ ನೀತಿಗಳಿಂದ ಮಹಿಳೆಯರು, ಕೂಲಿ ಕಾರ್ಮಿಕರು ಮತ್ತು ಸಾಮಾನ್ಯ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿ ವಿಮೆನ್ ಇಂಡಿಯಾ ಮೂವ್‌ಮೆಂಟ್ (WIM) ವತಿಯಿಂದ ಮಂಗಳೂರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ವಿವಿಧ ಬೇಡಿಕೆಗಳನ್ನೊಳಗೊಂಡ ಪ್ಲೇಕಾರ್ಡ್‌ಗಳನ್ನು ಪ್ರದರ್ಶಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ WIM ಮಂಗಳೂರು ನಗರ ಅಧ್ಯಕ್ಷೆ…

Read More

ಮಂಗಳೂರಿನಲ್ಲಿ ಎಸ್‌ಐಆರ್ ಸಹಾಯವಾಣಿ ಕೇಂದ್ರಕ್ಕೆ ಚಾಲನೆ; ಸಾರ್ವಜನಿಕರಿಗೆ ಮಾಹಿತಿ ನೀಡಲು ಐವನ್ ಡಿಸೋಜಾ ಮುಂದಾಳತ್ವ

ಮಂಗಳೂರು : ವಿಧಾನ ಪರಿಷತ್ ಸದಸ್ಯರು ಹಾಗೂ ಕೆ.ಪಿ.ಸಿ.ಸಿ. ಉಪಾಧ್ಯಕ್ಷರಾದ ಶ್ರೀ ಐವನ್ ಡಿ’ಸೋಜಾ ಅವರು ಇಂದು ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ತಮ್ಮ ಶಾಸಕರ ಕಚೇರಿಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಎಸ್‌ಐಆರ್ ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಮಾಜಿ ಮೇಯರ್‌ಗಳಾದ ಭಾಸ್ಕರ್ ಮೊಯ್ಲಿ ಹಾಗೂ ಶಶಿಧರ್ ಹೆಗ್ಡೆ, ಮಂಗಳೂರು ದಕ್ಷಿಣ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅಬ್ದುಲ್ ಸಲೀಂ ಹಾಗೂ ಪ್ರಕಾಶ್ ಬಿ….

Read More

ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ: ಮನೆಯ ಅಂಗಳಕ್ಕೆ ಕುಸಿದ ತೆಂಗಿನ ಮರ!

ಮನೆಯ ಮುಂಭಾಗದಲ್ಲಿದ್ದ ತೆಂಗಿನ ಮರ ತುಂಡಾಗಿ ಮನೆಯ ಅಂಗಳಕ್ಕೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೈಚಾರ್ ಎಂಬಲ್ಲಿ ನಡೆದಿದೆ.ಮನೆಯ ಅಂಗಳದಲ್ಲಿ ನಿಂತಿದ್ದ ಶಾಫಿ ಪ್ರಗತಿಯವರ ಹಿರಿಯ ಸಹೋದರ ಹಸೈನಾರ್‌ ಎಂಬುವವರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಮನೆಯ ಸ್ಲ್ಯಾಬ್ ಮೇಲಿನಿಂದ ಬೀಳುತ್ತಿದ್ದ ಮಳೆ ನೀರನ್ನು ಬಕೆಟ್‌ನಲ್ಲಿ ತುಂಬುತ್ತಿದ್ದ ವೇಳೆ ಈ ಘಟನೆ ನಡೆದಿದೆ. ತುಂಡಾಗಿ ತೆಂಗಿನ ಮರ ಬೀಳುವುದನ್ನು ಕಂಡ ಇವರು ಅಲ್ಲಿಂದ ಓಡಿ ಅಪಾಯದಿಂದ ಪಾರಾದರು. ಇದೇ ಸ್ಥಳದಲ್ಲಿ ಘಟನೆ ಸಂಭವಿಸುವ ಮೊದಲು ಶಾಫಿಯವರ…

Read More

ಶಿಕ್ಷಣದಲ್ಲಿ ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳ ಪಾತ್ರ ಕುರಿತು ಸಂವಾದ

ಮೂಡುಬಿದಿರೆ ತಾಲೂಕಿನ ಜ್ಞಾನವಿಕಾಸ ಯೋಜನೆಯ ಅಂತರ್ಗತವಾಗಿ ವಾಲ್ಪಾಡಿ ಗ್ರಾಮದ ಪೆರಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 15ರಂದು ಶಿಕ್ಷಣದಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪಾತ್ರದ ಕುರಿತು ಸಂವಾದ ಚರ್ಚೆ ನಡೆಯಿತು. ಸಂವಾದ ಚರ್ಚೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರು ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ರಾಜ್ಯ ಗ್ರಾಹಕ ಸಂಘಟನೆಯ ಸಂಪನ್ಮೂಲ ವ್ಯಕ್ತಿ, ಕಾರ್ಯನಿರತ ಪತ್ರಕರ್ತ ರಾಯಿ ರಾಜ ಕುಮಾರ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಅವರು ತಮ್ಮ ಭಾಷಣದಲ್ಲಿ ಶಿಕ್ಷಕರ ಹಾಗೂ ಪೋಷಕರಿಂದ ನಿರೀಕ್ಷಿಸುವ ವಿವಿಧ ಅಂಶಗಳ…

Read More

ಚಿಲಿಂಬಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ; ₹50 ಲಕ್ಷ ವಿಶೇಷ ಅನುದಾನದಲ್ಲಿ ಅಭಿವೃದ್ಧಿ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 26ನೇ ದೇರೆಬೈಲ್ ನೈರುತ್ಯ ವಾರ್ಡಿನ ಚಿಲಿಂಬಿ ಶ್ರೀ ಮಲರಾಯ ದೈವಸ್ಥಾನದ ದ್ವಾರದಿಂದ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಯು 50ಲಕ್ಷ ರೂ. ವಿಶೇಷ ಅನುದಾನದಲ್ಲಿ ನಡೆಯಲಿದ್ದು ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ನಡೆಯಿತು. ನಂತರ ಮಾತನಾಡಿದ ಶಾಸಕರು ಈ ಭಾಗದ ಸ್ಥಳೀಯರ ಬೇಡಿಕೆಯ ಮೇರೆಗೆ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಈ ಸಂದರ್ಭದಲ್ಲಿ ಉಂಟಾಗುವ ಅಡಚಣೆಗೆ ಸಾರ್ವಜನಿಕರು ಸಹಕರಿಸಬೇಕು. ಅದೇ ರೀತಿಯಲ್ಲಿ ಕಾಮಗಾರಿ ವಹಿಸಿಕೊಂಡವರೂ ಸಹ ಯಾವುದೇ ವಿಳಂಬಕ್ಕೆ ಆಸ್ಪದವಿಲ್ಲದಂತೆ…

Read More

ಇನೋಳಿಗೆ ಸರ್ಕಾರಿ ಬಸ್ ಓಡಾಟಕ್ಕೆ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನ

ಕೊಣಾಜೆ: ಪಾವೂರು ಗ್ರಾಮದ ಇನೋಳಿಗೆ ಸರ್ಕಾರಿ ಬಸ್ ಸೇವೆ ಆರಂಭಿಸುವಂತೆ ಆಗ್ರಹಿಸಿ ಸರ್ಕಾರಿ ಬಸ್ ಹೋರಾಟ ಸಮಿತಿಯ ನೇತೃತ್ವದಲ್ಲಿ ಮಲಾರ್ ಪದವಿನ ಸೆಂಟ್ರಲ್ ಮುಸ್ಲಿಂ ಶಾಲೆ ಬಳಿ ಭಾನುವಾರ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಇನೋಳಿಗೆ ಸರ್ಕಾರಿ ಬಸ್ ಓಡಾಟ ಆರಂಭಿಸುವಂತೆ ಗ್ರಾಮ ಪಂಚಾಯಿತಿ, ಸಚಿವರು ಹಾಗೂ ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಈಗಾಗಲೇ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸಮಿತಿ ಮುಖಂಡರು ಆರೋಪಿಸಿದ್ದಾರೆ. ಸರ್ಕಾರಿ ಬಸ್ ಸೇವೆ ಇಲ್ಲದ ಕಾರಣ ರಾಜ್ಯ ಸರ್ಕಾರದ ಮಹತ್ವದ…

Read More

ರೈತರ ಸಮಸ್ಯೆ ಪರಿಹಾರಕ್ಕೆ ಎಸ್‌ಪಿಗೆ ಮನವಿ ಸಲ್ಲಿಕೆ

ಮಂಗಳೂರು: ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆ ರಕ್ಷಣೆಗಾಗಿ ಅಗತ್ಯವಿರುವ ಕೋವಿ ಪರವಾನಗಿ ನವೀಕರಣಕ್ಕೆ ನಿರಪೇಕ್ಷಣಾ ಪತ್ರ (ಎನ್‌ಒಸಿ) ಪಡೆಯುವಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ನಿಯೋಗವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ಮುಂದಾಳತ್ವದಲ್ಲಿ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ನಿಯೋಗವು ಎಸ್‌ಪಿ ಅವರನ್ನು…

Read More
error: Content is protected !!