ಮಂಗಳೂರಿನಲ್ಲಿ ಎಸ್‌ಐಆರ್ ಸಹಾಯವಾಣಿ ಕೇಂದ್ರಕ್ಕೆ ಚಾಲನೆ; ಸಾರ್ವಜನಿಕರಿಗೆ ಮಾಹಿತಿ ನೀಡಲು ಐವನ್ ಡಿಸೋಜಾ ಮುಂದಾಳತ್ವ

ಮಂಗಳೂರು : ವಿಧಾನ ಪರಿಷತ್ ಸದಸ್ಯರು ಹಾಗೂ ಕೆ.ಪಿ.ಸಿ.ಸಿ. ಉಪಾಧ್ಯಕ್ಷರಾದ ಶ್ರೀ ಐವನ್ ಡಿ’ಸೋಜಾ ಅವರು ಇಂದು ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ತಮ್ಮ ಶಾಸಕರ ಕಚೇರಿಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಎಸ್‌ಐಆರ್ ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಮಾಜಿ ಮೇಯರ್‌ಗಳಾದ ಭಾಸ್ಕರ್ ಮೊಯ್ಲಿ ಹಾಗೂ ಶಶಿಧರ್ ಹೆಗ್ಡೆ, ಮಂಗಳೂರು ದಕ್ಷಿಣ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅಬ್ದುಲ್ ಸಲೀಂ ಹಾಗೂ ಪ್ರಕಾಶ್ ಬಿ….

Read More

ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ: ಮನೆಯ ಅಂಗಳಕ್ಕೆ ಕುಸಿದ ತೆಂಗಿನ ಮರ!

ಮನೆಯ ಮುಂಭಾಗದಲ್ಲಿದ್ದ ತೆಂಗಿನ ಮರ ತುಂಡಾಗಿ ಮನೆಯ ಅಂಗಳಕ್ಕೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೈಚಾರ್ ಎಂಬಲ್ಲಿ ನಡೆದಿದೆ.ಮನೆಯ ಅಂಗಳದಲ್ಲಿ ನಿಂತಿದ್ದ ಶಾಫಿ ಪ್ರಗತಿಯವರ ಹಿರಿಯ ಸಹೋದರ ಹಸೈನಾರ್‌ ಎಂಬುವವರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಮನೆಯ ಸ್ಲ್ಯಾಬ್ ಮೇಲಿನಿಂದ ಬೀಳುತ್ತಿದ್ದ ಮಳೆ ನೀರನ್ನು ಬಕೆಟ್‌ನಲ್ಲಿ ತುಂಬುತ್ತಿದ್ದ ವೇಳೆ ಈ ಘಟನೆ ನಡೆದಿದೆ. ತುಂಡಾಗಿ ತೆಂಗಿನ ಮರ ಬೀಳುವುದನ್ನು ಕಂಡ ಇವರು ಅಲ್ಲಿಂದ ಓಡಿ ಅಪಾಯದಿಂದ ಪಾರಾದರು. ಇದೇ ಸ್ಥಳದಲ್ಲಿ ಘಟನೆ ಸಂಭವಿಸುವ ಮೊದಲು ಶಾಫಿಯವರ…

Read More

ಶಿಕ್ಷಣದಲ್ಲಿ ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳ ಪಾತ್ರ ಕುರಿತು ಸಂವಾದ

ಮೂಡುಬಿದಿರೆ ತಾಲೂಕಿನ ಜ್ಞಾನವಿಕಾಸ ಯೋಜನೆಯ ಅಂತರ್ಗತವಾಗಿ ವಾಲ್ಪಾಡಿ ಗ್ರಾಮದ ಪೆರಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 15ರಂದು ಶಿಕ್ಷಣದಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪಾತ್ರದ ಕುರಿತು ಸಂವಾದ ಚರ್ಚೆ ನಡೆಯಿತು. ಸಂವಾದ ಚರ್ಚೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರು ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ರಾಜ್ಯ ಗ್ರಾಹಕ ಸಂಘಟನೆಯ ಸಂಪನ್ಮೂಲ ವ್ಯಕ್ತಿ, ಕಾರ್ಯನಿರತ ಪತ್ರಕರ್ತ ರಾಯಿ ರಾಜ ಕುಮಾರ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಅವರು ತಮ್ಮ ಭಾಷಣದಲ್ಲಿ ಶಿಕ್ಷಕರ ಹಾಗೂ ಪೋಷಕರಿಂದ ನಿರೀಕ್ಷಿಸುವ ವಿವಿಧ ಅಂಶಗಳ…

Read More

ಚಿಲಿಂಬಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ; ₹50 ಲಕ್ಷ ವಿಶೇಷ ಅನುದಾನದಲ್ಲಿ ಅಭಿವೃದ್ಧಿ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 26ನೇ ದೇರೆಬೈಲ್ ನೈರುತ್ಯ ವಾರ್ಡಿನ ಚಿಲಿಂಬಿ ಶ್ರೀ ಮಲರಾಯ ದೈವಸ್ಥಾನದ ದ್ವಾರದಿಂದ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಯು 50ಲಕ್ಷ ರೂ. ವಿಶೇಷ ಅನುದಾನದಲ್ಲಿ ನಡೆಯಲಿದ್ದು ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ನಡೆಯಿತು. ನಂತರ ಮಾತನಾಡಿದ ಶಾಸಕರು ಈ ಭಾಗದ ಸ್ಥಳೀಯರ ಬೇಡಿಕೆಯ ಮೇರೆಗೆ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಈ ಸಂದರ್ಭದಲ್ಲಿ ಉಂಟಾಗುವ ಅಡಚಣೆಗೆ ಸಾರ್ವಜನಿಕರು ಸಹಕರಿಸಬೇಕು. ಅದೇ ರೀತಿಯಲ್ಲಿ ಕಾಮಗಾರಿ ವಹಿಸಿಕೊಂಡವರೂ ಸಹ ಯಾವುದೇ ವಿಳಂಬಕ್ಕೆ ಆಸ್ಪದವಿಲ್ಲದಂತೆ…

Read More

ಇನೋಳಿಗೆ ಸರ್ಕಾರಿ ಬಸ್ ಓಡಾಟಕ್ಕೆ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನ

ಕೊಣಾಜೆ: ಪಾವೂರು ಗ್ರಾಮದ ಇನೋಳಿಗೆ ಸರ್ಕಾರಿ ಬಸ್ ಸೇವೆ ಆರಂಭಿಸುವಂತೆ ಆಗ್ರಹಿಸಿ ಸರ್ಕಾರಿ ಬಸ್ ಹೋರಾಟ ಸಮಿತಿಯ ನೇತೃತ್ವದಲ್ಲಿ ಮಲಾರ್ ಪದವಿನ ಸೆಂಟ್ರಲ್ ಮುಸ್ಲಿಂ ಶಾಲೆ ಬಳಿ ಭಾನುವಾರ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಇನೋಳಿಗೆ ಸರ್ಕಾರಿ ಬಸ್ ಓಡಾಟ ಆರಂಭಿಸುವಂತೆ ಗ್ರಾಮ ಪಂಚಾಯಿತಿ, ಸಚಿವರು ಹಾಗೂ ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಈಗಾಗಲೇ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸಮಿತಿ ಮುಖಂಡರು ಆರೋಪಿಸಿದ್ದಾರೆ. ಸರ್ಕಾರಿ ಬಸ್ ಸೇವೆ ಇಲ್ಲದ ಕಾರಣ ರಾಜ್ಯ ಸರ್ಕಾರದ ಮಹತ್ವದ…

Read More

ರೈತರ ಸಮಸ್ಯೆ ಪರಿಹಾರಕ್ಕೆ ಎಸ್‌ಪಿಗೆ ಮನವಿ ಸಲ್ಲಿಕೆ

ಮಂಗಳೂರು: ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆ ರಕ್ಷಣೆಗಾಗಿ ಅಗತ್ಯವಿರುವ ಕೋವಿ ಪರವಾನಗಿ ನವೀಕರಣಕ್ಕೆ ನಿರಪೇಕ್ಷಣಾ ಪತ್ರ (ಎನ್‌ಒಸಿ) ಪಡೆಯುವಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ನಿಯೋಗವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ಮುಂದಾಳತ್ವದಲ್ಲಿ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ನಿಯೋಗವು ಎಸ್‌ಪಿ ಅವರನ್ನು…

Read More

ಶಬರಿಮಲೆ ಯಾತ್ರೆಗೆ ತೆರಳಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಪಂಪ: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಸೋಮವಾರ ಮುಂಜಾನೆ ಕೊಚ್ಚಿನ್‌ನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿ, ಶ್ರೀ ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿದರು. ಬಳಿಕ ದೇವಸ್ಥಾನದಲ್ಲಿಯೇ ಇರುಮುಡಿ ಕಟ್ಟಿ ಶಬರಿಮಲೆ ಯಾತ್ರೆಗೆ ಚಾಲನೆ ನೀಡಿದರು. ಮಧ್ಯಾಹ್ನದ ವೇಳೆಗೆ ಪಂಪಾ ನದಿ ತೀರ ತಲುಪಲಿರುವ ಸಚಿವರು, ಪವಿತ್ರ ಸ್ನಾನ ನೆರವೇರಿಸಿದ ಬಳಿಕ ಶಬರಿಮಲೆಯತ್ತ ಪಾದಯಾತ್ರೆ ಮುಂದುವರಿಸಲಿದ್ದಾರೆ….

Read More

ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆ ಖಂಡಿಸಿ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಆಕ್ರೋಶ

ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಆರೈಕೆ ಇಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಕೆಲವು ಕಡೆ ಸರ್ಕಾರಿ ಆಸ್ಪತ್ರೆ ಕಾರ್ಯ ನಿರ್ವಹಿಸುತ್ತಿದೆಯೋ ಅಥವಾ ಇಲ್ಲವೋ ಎಂಬ ಪ್ರಶ್ನೆ ಕಾಡುತ್ತಿದೆ.. ಕೆಲವು ಆಸ್ಪತ್ರೆಗಳಲ್ಲಿ ಸರಿಯಾದ ಆರೈಕೆ ಇಲ್ಲದೆ ಬಡ ರೋಗಿಗಳು ಪರದಾಡುವಂತಾಗಿದೆ.. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ ತಮ್ಮ ಜೀವವನ್ನೇ ಕಳೆದುಕೊಂಡ ಕೆಲವು ಘಟನೆಗಳು ಕೂಡ ತಮ್ಮ ಕಣ್ಣೆದುರು ಇದೇ.. ಹಾಗೂ ಬಡ ಜನಾಂಗದವರಿಗೆ ದುಬಾರಿ ಹಣ ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಷ್ಟು…

Read More

“ಬಂಟ ಸಮಾಜ ಮಕ್ಕಳಿಗೆ ಶಿಕ್ಷಣದ ಜೊತೆ ಉತ್ತಮ ಸಂಸ್ಕಾರವನ್ನು ನೀಡಬೇಕು” -ಅಜಿತ್ ಕುಮಾರ್ ರೈ ಮಾಲಾಡಿ

ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ 26ನೇ ವಾರ್ಷಿಕ ಮಹಾಸಭೆ, ಅಭಿನಂದನೆ, ಸಹಾಯಹಸ್ತ, ವಿದ್ಯಾರ್ಥಿ ವೇತನ, ದತ್ತಿ ನಿಧಿ ಹಾಗೂ ಸಮೂಹ ನೃತ್ಯ ಸ್ಪರ್ಧೆ ಕಾರ್ಯಕ್ರಮವು ಆದಿತ್ಯವಾರ ಬಂಟರ ಸಂಘದಲ್ಲಿ ಜರುಗಿತು. ಕಾರ್ಯಕ್ರಮವನ್ನು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು “ಬಂಟ ಸಮಾಜ ಇಂದು ಬಹಳಷ್ಟು ಮುಂದುವರಿದಿದೆ. ಮಕ್ಕಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ಇಂದು ಅದೇ ವಿಧ್ಯೆ ನಮ್ಮ…

Read More

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಅನಂತ್ ಅಂಬಾನಿ ಭೇಟಿ; ವಿಶೇಷ ಪೂಜೆ ಸಲ್ಲಿಕೆ

ಉಡುಪಿ : ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಭಾನುವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅನಂತ್ ಅಂಬಾನಿ ಅವರು ಶನಿವಾರವೇ ಕೊಲ್ಲೂರಿಗೆ ಆಗಮಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಮುಂಬೈನಲ್ಲಿ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲಿ ಉಂಟಾದ ತೊಂದರೆಯಿಂದ ಅವರ ಭೇಟಿ ಮುಂದೂಡಲ್ಪಟ್ಟಿತ್ತು. ಭಾನುವಾರ ಸಂಜೆ ದೇವಸ್ಥಾನಕ್ಕೆ ಆಗಮಿಸಿದ ಅನಂತ್ ಅಂಬಾನಿ, ಶ್ರೀ ಮೂಕಾಂಬಿಕಾ ದೇವಿಯ ಸನ್ನಿಧಿಯಲ್ಲಿ…

Read More
error: Content is protected !!