ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕರಾಗಿ ಕರೂಣ್ ನಾಯರ್ ನೇಮಕ
ಮಂಗಳೂರು, ಜೂನ್ 14 : ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ರ ಅಂಗವಾಗಿ ಕೋಸ್ಟಲ್ ಕಿಂಗ್ಸ್ ಮಂಗಳೂರು ಫ್ರಾಂಚೈಸಿಯು ಭಾರತೀಯ ಕ್ರಿಕೆಟಿಗ ಕರೂಣ್ ನಾಯರ್ ಅವರನ್ನು ತಂಡದ ನಾಯಕರಾಗಿ ಘೋಷಿಸಿದೆ. ಭಾನುವಾರ ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಲಾಯಿತು.ಇದೇ ಸಂದರ್ಭದಲ್ಲಿ ಫ್ರಾಂಚೈಸಿಯು ತನ್ನ ಚೊಚ್ಚಲ ತಂಡವನ್ನು ಪರಿಚಯಿಸುವುದರ ಜೊತೆಗೆ ನಾಯಕತ್ವ ತಂಡವನ್ನು ಪ್ರಕಟಿಸಿ, ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ಅಧಿಕೃತ ಗೀತೆಯನ್ನು ಬಿಡುಗಡೆ ಮಾಡಿತು ಹಾಗೂ ತಂಡದ ಅಧಿಕೃತ ಜೆರ್ಸಿಯನ್ನು ಅನಾವರಣಗೊಳಿಸಿತು. ಕಾರ್ಯಕ್ರಮದಲ್ಲಿ ಕೆಎಸ್ಸಿಎ ಮಂಗಳೂರು…
