2028ರಲ್ಲೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ: ಶಾಸಕ ಅಶೋಕ್ ರೈ
ಪುತ್ತೂರು, ಜೂ.13: ದೇಶದಲ್ಲಿ ಬೆಲೆ ಏರಿಕೆಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಹಲವು ರಾಜ್ಯಗಳಲ್ಲಿ ಭವಿಷ್ಯದ ಬಗ್ಗೆ ಅನಿಶ್ಚಿತತೆ ಎದುರಿಸುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಜನರು ನೆಮ್ಮದಿಯಿಂದ ಬದುಕುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳೇ ಕಾರಣ ಎಂದು ಶಾಸಕ ಅಶೋಕ್ ರೈ ಹೇಳಿದರು.ಅವರು ಉಪ್ಪಿನಂಗಡಿಯ ರೋಟರಿ ಸಭಾಭವನದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ಕಾರ್ಯಕರ್ತರು ಮನೆಮನೆಗೆ ತಲುಪಿಸುವ ಕೆಲಸ ಮಾಡಬೇಕು. ಪಕ್ಷದ ಬಲವರ್ಧನೆಗೆ ಕಾರ್ಯಕರ್ತರ ಶ್ರಮ ಅತ್ಯಗತ್ಯ. ಜನರ…
