ಸರಕಾರಿ ಆಸ್ಪತ್ರೆಗಳನ್ನು ಖಾಸಗಿಯವರಿಗೆ ಹಸ್ತಾಂತರಿಸಬೇಡಿ: ಉಳ್ಳಾಲದಲ್ಲಿ ಸಿಪಿಐಎಂ ನೇತೃತ್ವದಲ್ಲಿ ಮಾನವ ಸರಪಳಿ ಪ್ರತಿಭಟನೆ
ಳ್ಳಾಲ, ಜೂನ್ 12: ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದವನ್ನು ರದ್ದುಗೊಳಿಸಿ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಉಳಿಸಬೇಕು ಎಂದು ಒತ್ತಾಯಿಸಿ ಸಿಪಿಐಎಂ ಉಳ್ಳಾಲ ವಲಯ ಸಮಿತಿಯ ನೇತೃತ್ವದಲ್ಲಿ ಉಳ್ಳಾಲ ಸಮುದಾಯ ಆಸ್ಪತ್ರೆಯ ಮುಂಭಾಗ ಮಾನವ ಸರಪಳಿ ಪ್ರತಿಭಟನೆ ನಡೆಯಿತು. ಮಾನವ ಸರಪಳಿ ಬಳಿಕ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಆರೋಗ್ಯ ಕ್ಷೇತ್ರದ ವ್ಯಾಪಾರೀಕರಣವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದರು. ಖಾಸಗಿ ಆಸ್ಪತ್ರೆಗಳ ಏಕಸ್ವಾಮ್ಯದಿಂದ ಜಿಲ್ಲೆಯ…
