ಮಾಣಿ ಸಮೀಪ ಭೀಕರ ರಸ್ತೆ ಅಪಘಾತ: ಕಾರು ಪಲ್ಟಿಯಾಗಿ ಚಾಲಕ ಸಾವು, ಮೂವರಿಗೆ ಗಂಭೀರ ಗಾಯ

ಮಾಣಿ, ಜೂ.10: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಮೂವರು ಸಹಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಹಾಸನ ಮೂಲದ ಲಕ್ಷ್ಮೀಕಾಂತ್ ಮೃತಪಟ್ಟ ದುರ್ದೈವಿ ಚಾಲಕ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರಂಜಿತ್, ದರ್ಶನ್ ಹಾಗೂ ಶೋಭಾ ಗಂಭೀರ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ…

Read More

ಮೋದಿಯವರ 4,399 ದಿನಗಳ ಆಡಳಿತ ಮೈಲಿಗಲ್ಲು: ಕದ್ರಿ ದೇವಸ್ಥಾನದಲ್ಲಿ ಬಿಜೆಪಿ ವತಿಯಿಂದ ವಿಶೇಷ ರಂಗ ಪೂಜೆ

ಪ್ರಧಾನಿ ನರೇಂದ್ರ ಮೋದಿಯವರ 4,399 ದಿನಗಳ ಯಶಸ್ವಿ ಆಡಳಿತ ಹಾಗೂ ದೇಶದ ದೀರ್ಘಾವಧಿಯ ಚುನಾಯಿತ ಪ್ರಧಾನಿ ಎಂಬ ಮೈಲಿಗಲ್ಲು ಸ್ಥಾಪನೆಯಾದ ಹಿನ್ನೆಲೆಯಲ್ಲಿ, ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಸಹಿತ ದೇಶವನ್ನು ಮುನ್ನಡೆಸಲು ಇನ್ನಷ್ಟು ಶಕ್ತಿ ನೀಡಲಿ ಎಂಬ ಪ್ರಾರ್ಥನೆಯೊಂದಿಗೆ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಇತಿಹಾಸ ಪ್ರಸಿದ್ಧ ಕದ್ರಿ ದೇವಸ್ಥಾನದಲ್ಲಿ ವಿಶೇಷ ರಂಗ ಪೂಜೆ ನಡೆಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಮೋದಿ ಸರ್ಕಾರವು ಹನ್ನೆರಡು ವರ್ಷಗಳ ಕಾಲ ನಿರಂತರ…

Read More

ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅವರು ಜೂನ್ 12ರಂದು ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ

ಉಡುಪಿ, ತಮಿಳುನಾಡಿನ ಸಿ ಎಂ ವಿಜಯ್ ಅವರು ಜೂನ್ 12ರಂದು ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಮಾಹಿತಿಯ ಪ್ರಕಾರ, ವಿಜಯ್ ಅವರು ಮಧ್ಯಾಹ್ನ 12.30ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ತೆರಳಲಿದ್ದಾರೆ. ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದ ಬಳಿಕ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮತ್ತೆ ರಸ್ತೆ ಮಾರ್ಗವಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ…

Read More

ಕಣಚೂರಿನಲ್ಲಿ ಮಕ್ಕಳ ಚರ್ಮರೋಗಶಾಸ್ತ್ರದ ವಿಶೇಷ ವೈದ್ಯಕೀಯ ಸಮ್ಮೇಳನ

ಉಳ್ಳಾಲ: ಕಣಚೂರು ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗ ಹಾಗೂ ಚರ್ಮರೋಗ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಚರ್ಮರೋಗಶಾಸ್ತ್ರ ವಿಷಯದ ಕುರಿತ ವಿಶೇಷ ನಿರಂತರ ವೈದ್ಯಕೀಯ ಶಿಕ್ಷಣ ಸಮ್ಮೇಳನವನ್ನು ಜೂನ್ 13ರ ಶನಿವಾರದಂದು ಬೆಳಿಗ್ಗೆ 9 ಗಂಟೆಗೆ ಕಣಚೂರು ವೈದ್ಯಕೀಯ ಕಾಲೇಜಿನ ಕಾನ್ಫರೆನ್ಸ್ ಡ್ರೋಮ್ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಪ್ರೊಫೆಸರ್ ಎಮೆರಿಟಸ್ ಡಾ. ಶಂಶಾದ್ ಎ. ಖಾನ್ ತಿಳಿಸಿದ್ದಾರೆ.ಉಳ್ಳಾಲ ಪ್ರೆಸ್ ಕ್ಲಬ್‌ನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಮ್ಮೇಳನದ ಉದ್ಘಾಟನಾ ಸಮಾರಂಭವು ಬೆಳಿಗ್ಗೆ 10.30ಕ್ಕೆ…

Read More

ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಇಲಾಖೆಗೆ ದೂರು

ಬಂಟ್ವಾಳ, ಜೂ.10: ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಪ್ರದೇಶದಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆಯಲಾಗುತ್ತಿದ್ದು, ಅದರ ಸಾಗಾಟವೂ ನಡೆಯುತ್ತಿದೆ ಎಂದು ಆರೋಪಿಸಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗಣೇಶ್ ನಾಯಕ್ ಅವರು ಪೊಲೀಸ್ ಇಲಾಖೆಗೆ ದೂರು ನೀಡಿದ್ದಾರೆ. ಪಾಣೆಮಂಗಳೂರಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆಗೆ ಬಳಸಲಾಗುತ್ತಿರುವ ದೋಣಿಗಳು ನಿಲ್ಲಿಸಲಾಗಿದ್ದು, ಈಗಾಗಲೇ ಅಕ್ರಮವಾಗಿ ತೆಗೆಯಲಾದ ಹತ್ತಕ್ಕೂ ಅಧಿಕ ಮರಳು ಲೋಡ್‌ಗಳನ್ನು ದಾಸ್ತಾನು ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪಾಣೆಮಂಗಳೂರು ಸೇತುವೆ ಹಾಗೂ ರೈಲ್ವೆ ಸೇತುವೆಯಿಂದ ಕೂಗಳತೆಯ ಅಂತರದಲ್ಲಿ…

Read More

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜನನ್ ಜಗನ್ನಾಥ್ (29) ಮತ್ತು ಪರೀಕ್ಷಿತ್ (33) ಎಂದು ಗುರುತಿಸಲಾಗಿದೆ. ಗೂಡ್ ಶೆಡ್ಡೆ ಪ್ರದೇಶದಲ್ಲಿ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿದರು.ಕಾರ್ಯಾಚರಣೆಯಲ್ಲಿ ಆರೋಪಿಗಳಿಂದ 11.68 ಗ್ರಾಂ ಎಂಡಿಎಂಎ, ₹1,110 ನಗದು, ಮೂರು…

Read More

ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ 12 ವರ್ಷ; ಕದ್ರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಮಂಗಳೂರು, ಜೂ.10: “ಸಬ್ಕಾ ಸಾಥ್, ಸಬ್ಕಾ ವಿಕಾಸ್” ಎಂಬ ಧ್ಯೇಯದೊಂದಿಗೆ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಯಶಸ್ವಿ 12 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆರೋಗ್ಯ, ಆಯುಷ್ಯ ವೃದ್ಧಿ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪೂಜೆ ನೆರವೇರಿಸಲಾಯಿತು. ದೇಶದ…

Read More

ಪ್ರಧಾನಿ ನರೇಂದ್ರ ಮೋದಿ ದೀರ್ಘಾಯುಷ್ಯಕ್ಕಾಗಿ ಶ್ರೀ ನೀಟಿಲಾಕ್ಷ ಸದಾಶಿವ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ

ಬಂಟ್ವಾಳ, ಜೂ. 10: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿಗಳ ಸಾಲಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿರುವ ಹಿನ್ನೆಲೆಯಲ್ಲಿ, ಅವರ ದೀರ್ಘಾಯುಷ್ಯ, ಆಯುರಾರೋಗ್ಯ ಹಾಗೂ ದೇಶದ ಪ್ರಗತಿಗಾಗಿ ಮೋಗರ್ನಾಡು ಸಾವಿರ ಸೀಮೆಯ ಒಡೆಯ ಶ್ರೀ ನೀಟಿಲಾಕ್ಷ ಸದಾಶಿವ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವಗುರು ಭಾರತ ಹಾಗೂ ಆತ್ಮನಿರ್ಭರ ಭಾರತದ ಸಂಕಲ್ಪ ಇನ್ನಷ್ಟು ಬಲಗೊಳ್ಳಲಿ ಹಾಗೂ ದೇಶವು ಜಾಗತಿಕ…

Read More

ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ; ಶಿಕ್ಷಣ ಕ್ಷೇತ್ರದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ

ಮಂಗಳೂರು, ಜೂ.10: ಶಿಕ್ಷಣ, ಸಂಶೋಧನೆ ಹಾಗೂ ನವೀನತೆಯ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ಶ್ರೀನಿವಾಸ ಸಂಸ್ಥೆಗಳು ಮತ್ತೊಮ್ಮೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ನಡೆದ ಪ್ರತಿಷ್ಠಿತ ಗ್ಲೋಬಲ್ ಎಜುಕೇಷನ್ ಸಮ್ಮಿಟ್‌ನಲ್ಲಿ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡಿವೆ ಎಂದು ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಶ್ರೀನಿವಾಸ ರಾವ್ ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಿವಂಗತ ಶಿಕ್ಷಣ ದಾರ್ಶನಿಕ ಹಾಗೂ ಸಂಸ್ಥಾಪಕರಾದ ಡಾ. ಸಿ.ಎ.ಎ. ರಾಘವೇಂದ್ರ ರಾವ್ ಅವರ ದೂರದೃಷ್ಟಿಯ ಫಲವಾಗಿ…

Read More

ಹಲಸಿನ ಸವಿ, ವೈವಿಧ್ಯಮಯ ಹಣ್ಣುಗಳ ರುಚಿ: ಮಂಗಳೂರಿನಲ್ಲಿ ವಿಶೇಷ ಹಬ್ಬ

ಮಂಗಳೂರು, : ‘ಹನಿ ಜೆನಿಕ್ಸ್’ ಸಂಸ್ಥೆಯ ವತಿಯಿಂದ ಆಯೋಜಿಸಲಾಗುತ್ತಿರುವ “ಕುಡ್ಲ ಪೆಲಕಾಯಿ ಪರ್ಬ- ಮಂಗಳೂರು ಹಲಸು ಹಬ್ಬ 2026” ಜೂನ್ 12ರಿಂದ 14ರವರೆಗೆ ನಗರದ ಬೆಂದೂರುವೆಲ್‌ನ ಸೇಂಟ್ ಸೆಬಾಸ್ಟಿಯನ್ ಪ್ಲಾಟಿನಂ ಜುಬಿಲಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಹಬ್ಬದ ಆಯೋಜಕ ಅಶ್ವಿನ್ ಸಿಕ್ವೆರಾ ಬರಿಮಾರ್ ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ದಿನಗಳ ಕಾಲ ನಡೆಯುವ ಈ ಹಬ್ಬದಲ್ಲಿ ಸಾರ್ವಜನಿಕರಿಗೆ ಹಲಸಿನ ವಿವಿಧ ತಳಿಗಳು ಹಾಗೂ ಹಲಸಿನ ಉಪ ಉತ್ಪನ್ನಗಳ ಪ್ರದರ್ಶನ, ಮಾರಾಟ ಮತ್ತು…

Read More
error: Content is protected !!