ಕಲಾಸಂಗಮ ಟ್ರಸ್ಟ್ 15ನೇ ವಾರ್ಷಿಕೋತ್ಸವ ಜೂ.14ರಂದು: ಸನ್ಮಾನ ಹಾಗೂ ಯಕ್ಷಗಾನ ಬಯಲಾಟ ಆಯೋಜನೆ

ಮಂಗಳೂರು, ಕಲಾಸಂಗಮ ಚಾರಿಟೇಬಲ್ ಟ್ರಸ್ಟ್ (ರಿ.), ಮಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಹಯೋಗದಲ್ಲಿ ಟ್ರಸ್ಟ್‌ನ 15ನೇ ವಾರ್ಷಿಕೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮವು ಜೂನ್ 14ರ ಭಾನುವಾರ ಸಂಜೆ 4.30ರಿಂದ ರಾತ್ರಿ 9 ಗಂಟೆಯವರೆಗೆ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಕೇಶವ ಹೆಗಡೆ ಮಂಗಳೂರು ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವನ್ನು ಧರ್ಮದರ್ಶಿ ಹಾಗೂ ಕರ್ನಾಟಕ…

Read More

ಬಜಾಲ್ ಚರ್ಚ್‌ನ ನೂತನ ಧರ್ಮಗುರು ಫಾ. ಬೊನವೆಂಚರ್ ನಜ್ರತ್ ಅವರಿಗೆ ವಿವಿಧ ಸಂಘಸಂಸ್ಥೆಗಳಿಂದ ಅಭಿನಂದನೆ

ಬಜಾಲ್ ಚರ್ಚ್ ನ‌ ನೂತನ ಧರ್ಮಗುರುಗಳಾಗಿ ಇತ್ತೀಚಿಗೆ ಆಗಮಿಸಿದ ರೆ.ಫಾ.ಬೊನವೆಂಚರ್ ನಜ್ರತ್ ರವರನ್ನು ಬಜಾಲ್ ಪರಿಸರದ ವಿವಿಧ ಸಂಘಸಂಸ್ಥೆಗಳು ಸೌಹಾರ್ದ ಭೇಟಿ ನಡೆಸಿ ಬಳಿಕ ಅಭಿನಂದಿಸಲಾಯಿತು. ಮಂಗಳೂರು ನಗರದ ಹೃದಯ ಭಾಗದಲ್ಲಿರುವ ಹಾಗೂ ಅತ್ಯಂತ ಪ್ರಾಚೀನ ಚರ್ಚ್ ಗಳಲ್ಲಿ ಒಂದಾದ ಮಿಲಾಗ್ರಿಸ್ ಚರ್ಚ್‌ ನ ಧರ್ಮಗುರುಗಳಾಗಿ ಕಳೆದ ಹಲವಾರು ವರ್ಷಗಳ ಕಾಲ ಅತ್ಯಂತ ನಿಷ್ಠೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಫಾ.ಬೊನೆವೆಂಚರ್ ನಜ್ರತ್ ರವರು ತನ್ನ ವ್ಯಕ್ತಿತ್ವ ಹಾಗೂ ಸೇವೆಯ ಮೂಲಕ ಸರ್ವಧರ್ಮದ ಜನತೆಯ ಪ್ರೀತಿ ವಿಶ್ವಾಸವನ್ನು ಗಳಿಸಿದ್ದರು….

Read More

ಸುಳ್ಯದಲ್ಲಿ ಕಾಡಾನೆಗಳ ದಾಳಿ: ಕೃಷಿ ತೋಟಗಳಿಗೆ ಭಾರೀ ಹಾನಿ

ಮಂಗಳೂರು/ಸುಳ್ಯ, ಜೂ.10: ಪಶ್ಚಿಮ ಘಟ್ಟಗಳ ತಪ್ಪಲು ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗೂನಡ್ಕ ಪರಿಸರದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಮಂಗಳವಾರ ತಡರಾತ್ರಿ 8ರಿಂದ 10 ಕಾಡಾನೆಗಳ ಬೃಹತ್ ಹಿಂಡು ಕೃಷಿ ತೋಟಗಳಿಗೆ ನುಗ್ಗಿ ಭಾರೀ ಪ್ರಮಾಣದ ಬೆಳೆ ಹಾನಿ ಉಂಟುಮಾಡಿದೆ. ಅರಣ್ಯ ಗಡಿಯಿಂದ ಹೊರಬಂದ ಕಾಡಾನೆಗಳ ಹಿಂಡು ಏಕಾಏಕಿ ನಾಡು ಪ್ರದೇಶದ ತೋಟಗಳತ್ತ ದಾಳಿ ನಡೆಸಿದ ಪರಿಣಾಮ ಸ್ಥಳೀಯ ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಆನೆಗಳನ್ನು ತಡೆಯಲು ಗ್ರಾಮಸ್ಥರು ತಕ್ಷಣ ಕಾರ್ಯಾಚರಣೆಗೆ ಇಳಿದು,…

Read More

ಮುಂಗಾರು ಆರಂಭದಲ್ಲೇ ಜಪ್ಪಿನಮೊಗರಿನಲ್ಲಿ ಕೃತಕ ನೆರೆ: ಅಂಗಡಿಗಳಿಗೆ ಹಾನಿ, ಶಾಶ್ವತ ಪರಿಹಾರಕ್ಕೆ ಆಗ್ರಹ

ಮಂಗಳೂರು, ಜೂ. 10: ಮುಂಗಾರು ಮಳೆಯ ಆರಂಭದಲ್ಲೇ ನಗರದ ಜಪ್ಪಿನಮೊಗರು ಪ್ರದೇಶದಲ್ಲಿ ಕೃತಕ ನೆರೆ ಉಂಟಾಗಿ ಸುಮಾರು ಆರು ಅಂಗಡಿಗಳಿಗೆ ಹಾನಿ ಸಂಭವಿಸಿದೆ. ಒಂದೆರಡು ದಿನಗಳ ಮಳೆಯಲ್ಲೇ ಶಾಲೆಯ ಸಮೀಪದ ಪ್ರದೇಶ ಜಲಾವೃತಗೊಂಡು ಅಂಗಡಿಗಳೊಳಗೆ ನೀರು ನುಗ್ಗಿ ವ್ಯಾಪಾರಿಗಳಿಗೆ ನಷ್ಟ ಉಂಟಾಗಿದೆ. ಪಕ್ಕದ ತೋಡಿಗೆ ಮಣ್ಣು ತುಂಬಿ ನೀರಿನ ಸಹಜ ಹರಿವಿಗೆ ಅಡ್ಡಿಯಾಗಿರುವುದೇ ಸಮಸ್ಯೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪ್ರತೀ ಮಳೆಗಾಲದಲ್ಲೂ ಇದೇ ಸಮಸ್ಯೆ ಮರುಕಳಿಸುತ್ತಿದ್ದು, ಹಲವು ಬಾರಿ ದೂರು ನೀಡಿದರೂ ಶಾಶ್ವತ ಪರಿಹಾರ ದೊರೆತಿಲ್ಲ…

Read More

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್‌ಗೆ ಅರ್ಜಿ ಆಹ್ವಾನ

ಮಂಗಳೂರು, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ವತಿಯಿಂದ ಜುಲೈ 1ರಿಂದ ಆರಂಭವಾಗಲಿರುವ ಆರು ತಿಂಗಳ ಅವಧಿಯ ರೆಗ್ಯುಲರ್ ಹಾಗೂ ದೂರಶಿಕ್ಷಣದ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ (ಡಿಸಿಎಂ) ಕೋರ್ಸ್‌ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಹಾಗೂ ವಿವಿಧ ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಗಳು ಕೋರ್ಸ್‌ಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಜೂನ್…

Read More

ಶ್ರೀರಾಮ ಕುರಿತು ಕೆ.ಎಸ್. ಭಗವಾನ್ ಹೇಳಿಕೆ ವಿವಾದಕ್ಕೆ: ಹರಿಹರ ಕಾರ್ಯಕ್ರಮದಲ್ಲಿ ಚರ್ಚೆಗೆ ಕಾರಣವಾದ ಮಾತುಗಳು

ದಾವಣಗೆರೆ, ಲೇಖಕ ಹಾಗೂ ಚಿಂತಕ ಕೆ. ಎಸ್. ಭಗವಾನ್ ಅವರು ಶ್ರೀರಾಮನ ಕುರಿತು ನೀಡಿರುವ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಮಾಯಣದ ಕೆಲವು ಪ್ರಸಂಗಗಳು ಹಾಗೂ ಶ್ರೀರಾಮನ ಜನನದ ಕುರಿತು ಪ್ರಶ್ನೆಗಳನ್ನು ಎತ್ತಿದರು. ತಮ್ಮ ಭಾಷಣದಲ್ಲಿ, “ನೀವು ಪೂಜೆ ಮಾಡುವ ಶ್ರೀರಾಮ ದಶರಥನಿಗೆ ಹುಟ್ಟಿದವನಲ್ಲ” ಎಂದು ಹೇಳಿದ ಭಗವಾನ್, ಈ ಕುರಿತು ತಾವು ಬರೆದಿರುವ ‘ರಾಮ ಮಂದಿರ ಏಕೆ ಬೇಕು?’ ಕೃತಿಯಲ್ಲಿ ಉಲ್ಲೇಖಿಸಿದ್ದು, ಅದಕ್ಕೆ ವಾಲ್ಮೀಕಿ ರಾಮಾಯಣ…

Read More

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು, ಜೂ.10: ಕೃಷಿ ಇಲಾಖೆಯ ಆತ್ಮ (ATMA) ಯೋಜನೆಯಡಿ 2026-27ನೇ ಸಾಲಿನ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ಮತ್ತು ಅರ್ಹ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿಯಲ್ಲಿ ಸಾಧನೆ ಮಾಡಿರುವ ರೈತರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಶಸ್ತಿ ನೀಡಲಾಗುತ್ತಿದ್ದು, ಅರ್ಜಿದಾರರು ತಾವು ನಿರ್ವಹಿಸುತ್ತಿರುವ ಒಂದೇ ಒಂದು ಚಟುವಟಿಕೆಯಡಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಶಸ್ತಿಗಾಗಿ ಸಮಗ್ರ ಕೃಷಿ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಕೃಷಿ…

Read More

ಮೀನಿನ ಲಾರಿಗಳ ನೀರು ಸೋರಿಕೆ ತಡೆಗೆ ಕ್ರಮ: ತಲಪಾಡಿ, ಮುಲ್ಕಿಯಲ್ಲಿ ಸೆಪ್ಟಿಕ್ ಟ್ಯಾಂಕ್ ನಿರ್ಮಾಣಕ್ಕೆ ಪ್ರಸ್ತಾವನೆ

ಮಂಗಳೂರು, ನಗರದಲ್ಲಿ ಸಂಚರಿಸುವ ಮೀನಿನ ಲಾರಿಗಳಿಂದ ತ್ಯಾಜ್ಯ ನೀರು ಸೋರಿಕೆಯಾಗುತ್ತಿರುವುದರಿಂದ ದುರ್ವಾಸನೆ ಉಂಟಾಗಿ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗುತ್ತಿರುವ ಕುರಿತು ಬಂದಿರುವ ನಿರಂತರ ದೂರುಗಳ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮೀನಿನ ಕಾರ್ಖಾನೆ ಮಾಲೀಕರು ಹಾಗೂ ಉದ್ಯಮಿಗಳ ಸಭೆ ನಡೆಸಿತು. ಸಭೆಯಲ್ಲಿ ಮಾತನಾಡಿದ ಉದ್ಯಮಿಗಳು, ಕೇರಳದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕಗಳಲ್ಲಿ ಮೀನಿನ ಲಾರಿಗಳ ತ್ಯಾಜ್ಯ ನೀರು ವಿಸರ್ಜನೆಗಾಗಿ ಸೆಪ್ಟಿಕ್ ಟ್ಯಾಂಕ್‌ಗಳನ್ನು ನಿರ್ಮಿಸಿರುವ ಮಾದರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿ ಹಾಗೂ ಮುಲ್ಕಿ ಪ್ರದೇಶಗಳಲ್ಲಿಯೂ ವ್ಯವಸ್ಥೆ ಕಲ್ಪಿಸಬೇಕು ಎಂದು ಸಲಹೆ ನೀಡಿದರು….

Read More

65 ವರ್ಷದ ವ್ಯಕ್ತಿ ನಾಪತ್ತೆ; ಪತ್ತೆಗೆ ಪೊಲೀಸರ ಮನವಿ

ಮಂಗಳೂರು, ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ನಿವಾಸಿ ಕೃಷ್ಣ ನಾಯ್ಕ್ (65) ಅವರು ಕಾಣೆಯಾಗಿದ್ದು, ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃಷ್ಣ ನಾಯ್ಕ್ ಅವರು ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಅವರು ಕಾಣೆಯಾದ ಸಂದರ್ಭದಲ್ಲಿ ಮಿಶ್ರ ಬಣ್ಣದ ಗೆರೆಗಳಿರುವ ಶರ್ಟ್ ಹಾಗೂ ಪ್ಯಾಂಟ್ ಧರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಾಣೆಯಾದ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸಮೀಪದ ಪೊಲೀಸ್ ಠಾಣೆ ಅಥವಾ…

Read More

ಜಂಕ್ಷನ್‌, ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ ತ್ವರಿತ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ದರ್ಶನ್ ಸೂಚನೆ

ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ವಿವಿಧ ಜಂಕ್ಷನ್‌ಗಳು ಮತ್ತು ವೃತ್ತಗಳಲ್ಲಿ ಸುಗಮ ವಾಹನ ಸಂಚಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸಂಬಂಧಿತ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಮುಖ ಜಂಕ್ಷನ್‌ಗಳು ಹಾಗೂ ಮುಖ್ಯ ರಸ್ತೆಗಳಲ್ಲಿ ಅಕ್ರಮ ಪಾರ್ಕಿಂಗ್, ಒತ್ತುವರಿ ಮತ್ತು ಬೀದಿ ವ್ಯಾಪಾರದಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವ ಕುರಿತು ಸಾರ್ವಜನಿಕರಿಂದ ಹಲವು ದೂರುಗಳು ಬಂದಿರುವುದಾಗಿ ಹೇಳಿದರು….

Read More
error: Content is protected !!