ವೆನ್‌ಲಾಕ್ ಆಸ್ಪತ್ರೆಯಲ್ಲಿ ರೋಗಿಗಳೊಂದಿಗೆ ಕನ್ನಡದಲ್ಲೇ ವ್ಯವಹರಿಸಲು ಸೂಚನೆ
ಮಂಗಳೂರು, ಜೂನ್ 8: ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸುವ ರೋಗಿಗಳೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸುವಂತೆ ಆಸ್ಪತ್ರೆ ಆಡಳಿತ ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಇಂಟರ್ನ್‌ಗಳಿಗೆ ಸೂಚನೆ ನೀಡಿದೆ. ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಸ್ಪತ್ರೆಗೆ ಆಗಮಿಸುವ ಬಹುತೇಕ ರೋಗಿಗಳು ಕನ್ನಡ ಭಾಷಿಕರಾಗಿದ್ದು, ಇತರ ಭಾಷೆಗಳ ಅರಿವು ಇಲ್ಲದ ಕಾರಣ ಕೆಲ ವೈದ್ಯರು ಹಾಗೂ ವಿದ್ಯಾರ್ಥಿಗಳು ಕನ್ನಡದಲ್ಲಿ ಸಂವಹನ ನಡೆಸದಿರುವುದರಿಂದ ರೋಗಿಗಳಿಗೆ ತೊಂದರೆ ಉಂಟಾಗುತ್ತಿದೆ ಎಂಬ ದೂರುಗಳು ಬಂದಿವೆ. ಅಲ್ಲದೆ, ರೋಗಿಗೆ ನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ಆರೋಗ್ಯದ…
