ವಿಜಯಪುರದ ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ; ತನಿಖೆ ಆರಂಭ

ವಿಜಯಪುರದ ಪಾನ್ ಶಾಪ್ ನಲ್ಲಿ ನಿಗೂಢ ಸ್ಪೋಟ ಸಂಭವಿಸಿದೆ.ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ.ರವಿಕಿರಣ ಎಂಬುವವರಿಗೆ ಸೇರಿದ ಶೆಡ್ ಮಾದರಿಯ ಪಾನ್ ಶಾಪ್ ಇದಾಗಿದೆ.ಪಾನ್ ಶಾಪ್ ಒಳಗಿದ್ದ ಪ್ರಿಡ್ಜ್ ಗೆ ಯಾವುದೇ ಹಾನಿಯಾಗಿಲ್ಲ.ಹೊರಗಡೆಯಿಂದ ಸ್ಪೋಟವಾಗಿರಬಹುದಾದ ಶಂಕೆಯ ಹಿನ್ನೆಲೆಯಲ್ಲಿಸ್ಥಳಕ್ಕೆ ಬಬಲೇಶ್ವರ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳ, ಸೊಕೋ ತಂಡ ಶ್ವಾನದಳದಿಂದ ಸ್ಥಳ ಪರೀಕ್ಷೆ ನಡೆದಿದೆ.ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ.ತನಿಖೆಯ ಬಳಿಕವೇ ಸ್ಪೋಟಕ್ಕೆ ನಿಖರ ಕಾರಣ ತಿಳಿದು ಬರಲಿದೆ.

Read More

ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ

ಮಂಗಳೂರು, ಜೂ. 8: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಿಸಿರುವ ಕ್ರಮವನ್ನು ಖಂಡಿಸಿ ಸಿಪಿಐ(ಎಂ) ಮಂಗಳೂರು ನಗರ ಸಮಿತಿ ವತಿಯಿಂದ ಸೋಮವಾರ ಲಾಲ್‌ಬಾಗ್‌ನಲ್ಲಿರುವ ಮಹಾನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ(ಎಂ) ಮುಖಂಡ ಇಮ್ತಿಯಾಜ್, ಮನೆ ಬಾಡಿಗೆದಾರರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಕೆಲ ಮನೆ ಮಾಲೀಕರು ಯಾವುದೇ ಮುನ್ನೋಟಿಸ್ ನೀಡದೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಡಿತಗೊಳಿಸುವುದು, ಮನೆ ಖಾಲಿ ಮಾಡುವಂತೆ ಒತ್ತಡ…

Read More

ಪುತ್ತೂರಿನಲ್ಲಿ ಭಕ್ತಿಭಾವದಿಂದ ಸಾಮೂಹಿಕ ಸರಸ್ವತೀ ವಂದನೆ; 175 ವಿದ್ಯಾರ್ಥಿಗಳಿಂದ ವಿದ್ಯಾ ಸಂಕಲ್ಪ

ಪುತ್ತೂರು, ಜೂನ್ 7: ​ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ (ಪುತ್ತೂರು ತಾಲೂಕು ಮತ್ತು ಗ್ರಾಮಾಂತರ) ಮತ್ತು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು ಇವರ ಜಂಟಿ ಆಯೋಜಕತ್ವದಲ್ಲಿ,ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಕೇಂದ್ರಗಳ ಸಹಯೋಗದೊಂದಿಗೆ ಈ ವಿಶಿಷ್ಟ “ಸಾಮೂಹಿಕ ಸರಸ್ವತೀ ವಂದನೆ” ಮತ್ತು “ವಿದ್ಯಾ ಸಂಕಲ್ಪ” ಕಾರ್ಯಕ್ರಮವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಅತ್ಯಂತ ಭಕ್ತಿಭಾವದಿಂದ ಜರುಗಿತು. ಬೆಳಗ್ಗೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀ ಈಶ್ವರ ಭಟ್ ಪಂಜಿಗುಡ್ಡೆ ಸಹಿತವಾಗಿ…

Read More

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಾಮೆಂಟ್; ವ್ಯಕ್ತಿ ಬಂಧನಜಾತಿನಿಂದನೆ, ಜೀವ ಬೆದರಿಕೆ ಆರೋಪದಡಿ ಕಾರ್ಕಳ ಪೊಲೀಸರ ಕ್ರಮ

ಉಡುಪಿ, ಜೂ. 8: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹಾಗೂ ಜಾತಿನಿಂದನಾತ್ಮಕ ಕಾಮೆಂಟ್ ಮಾಡಿ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಕಾರ್ಕಳ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ಕೇರ್ವಾಶೆ ನಲ್ಕೆದಬೆಟ್ಟು ನಿವಾಸಿ ಸುಧೀರ ಬಂಗೇರ (48) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ‘ನಮ್ಮ ಕಾರ್ಲ’ ಎಂಬ ಫೇಸ್‌ಬುಕ್ ಖಾತೆಯಲ್ಲಿ ಪ್ರಕಟಗೊಂಡಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುರಿತ ಪೋಸ್ಟ್‌ಗೆ ಸುಧೀರ ಬಂಗೇರ ಅವಹೇಳನಕಾರಿ, ಜಾತಿನಿಂದನಾತ್ಮಕ…

Read More

ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಇಲ್ಲ: ಬಿಜೆಪಿ ಅಚ್ಚರಿಯ ನಿರ್ಧಾರ

ಬೆಂಗಳೂರು, ಜೂ. 8: ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಮರು ಅವಕಾಶ ನೀಡದೆ ಪ್ರೊ. ಎಂ. ನಾಗರಾಜ್ ಅವರನ್ನು ಕರ್ನಾಟಕದಿಂದ ಪಕ್ಷದ ಅಭ್ಯರ್ಥಿಯಾಗಿ ಘೋಷಿಸಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಹಿಂದುಳಿದ ವರ್ಗದ (ಒಬಿಸಿ) ನಾಯಕ ಪ್ರೊ. ಎಂ. ನಾಗರಾಜ್ ಅವರ ಹೆಸರನ್ನು ಅಂತಿಮಗೊಳಿಸಿದೆ. ಜೊತೆಗೆ ವಿಧಾನ ಪರಿಷತ್ ಚುನಾವಣೆಗೆ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರನ್ನು ಅಭ್ಯರ್ಥಿಗಳಾಗಿ ಘೋಷಿಸಲಾಗಿದೆ. ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಎಚ್.ಡಿ….

Read More

ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ನನ್ನ ಮೊದಲ ಆದ್ಯತೆ: ಆರೋಗ್ಯ ಸಚಿವ ಯು.ಟಿ. ಖಾದರ್ಆಸ್ಪತ್ರೆಗಳ ಲೋಪದೋಷ ಸರಿಪಡಿಸಲು ಕ್ರಮ;

ಮಂಗಳೂರು, ಜೂನ್ 8: ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಬರುವ ರೋಗಿಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಮಾಡುವುದು ತನ್ನ ಮೊದಲ ಆದ್ಯತೆಯಾಗಿದ್ದು, ಆಸ್ಪತ್ರೆಗಳಲ್ಲಿರುವ ಲೋಪದೋಷಗಳನ್ನು ಗುರುತಿಸಿ ಸರಿಪಡಿಸಲು ವಿಶೇಷ ಗಮನ ಹರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ರಾಜ್ಯದ ನೂತನ ಆರೋಗ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ ಅವರು, ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಹಿಂದಿನ ಆರೋಗ್ಯ ಸಚಿವರು ಆರಂಭಿಸಿರುವ ಯೋಜನೆಗಳನ್ನು…

Read More

ಜೂನ್ 11ರಂದು ಬೆಳ್ಳಿ ತೆರೆ ಮೇಲೆ ಅಪ್ಪಳಿಸಲಿದೆ “ಕಜ್ಜ” ತುಳು ಸಿನಿಮಾ ….. !

ಮಂಗಳೂರು, ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ಬಹುನಿರೀಕ್ಷಿತ ತುಳು ಚಲನಚಿತ್ರ “ಕಜ್ಜ” ಜೂನ್ 11ರಂದು ಕರಾವಳಿ ಜಿಲ್ಲೆಗಳಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಾಹಿತ್ಯ ರಚನೆಕಾರ ಮೋಹನ್ ರಾಜ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಷ್ಣು ಎಸ್. ಮೆನನ್ ಹಾಗೂ ಸಿದ್ದಾರ್ಥ್ ಶೆಟ್ಟಿ ಅವರ ನಿರ್ದೇಶನದಲ್ಲಿ, ವಿಶಾಂತ್ ಮಿನೆಜಿಸ್ ನಿರ್ಮಾಣ ಹಾಗೂ ಪ್ರವೀಣ್ ಸುವರ್ಣ ಅವರ ಸಹ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬಂದಿದೆ ಎಂದು ತಿಳಿಸಿದರು. ಚಿತ್ರವು ಮಂಗಳೂರು, ಸುರತ್ಕಲ್,…

Read More

ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಸಮಾಜಕ್ಕೆ ಪೂರಕ: ಗೃಹಲಕ್ಷ್ಮಿ ಕೋಟಿ ಸಂಭ್ರಮದಲ್ಲಿ ಗ್ರಾಮ ಸ್ವರಾಜ್ಯ ಪ್ರತಿಷ್ಠಾನದ ಜಿಲ್ಲಾಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ

ಮೂಡಬಿದ್ರೆ ಸಮಾಜ ಮಂದಿರದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಮೂಡಬಿದ್ರೆ ತಾಲ್ಲೂಕು, ಗ್ರಾಮ ಸ್ವರಾಜ್ಯ ಪ್ರತಿಷ್ಠಾನ ದ.ಕ. ಹಾಗೂ ಬಿಲ್ಲವ ಸಂಘ ಇರುವೈಲು ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ “ಗೃಹಲಕ್ಷ್ಮಿ ಕೋಟಿ ಸಂಭ್ರಮ” ಕಾರ್ಯಕ್ರಮ ಭಾನುವಾರ ಯಶಸ್ವಿಯಾಗಿ ನಡೆಯಿತು. ಮೂಡಬಿದ್ರೆ ತಾಲ್ಲೂಕಿಗೆ ಗೃಹಲಕ್ಷ್ಮಿ ಯೋಜನೆಯಡಿ ₹105 ಕೋಟಿ ಅನುದಾನ ಬಿಡುಗಡೆಯಾದ ಹಿನ್ನೆಲೆ ಸಂಭ್ರಮಾಚರಣೆಗೆ ವಿಶೇಷ ಮೆರುಗು ದೊರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು…

Read More

ಸೀಮಂತ ಕಾರ್ಯಕ್ರಮ ಮುಗಿಸಿ ಮರಳುತ್ತಿದ್ದ ಮಿನಿ ಬಸ್ ಪಲ್ಟಿ; ಗಾಯಾಳುಗಳಲ್ಲಿ ಓರ್ವ ಸಾವು

ಬಂಟ್ವಾಳ: ಸೀಮಂತ ಕಾರ್ಯಕ್ರಮ ಮುಗಿಸಿ ವಾಪಾಸು ಮನೆಗೆ ಹೋಗುತ್ತಿದ್ದ ಮಿನಿ ಬಸ್ ಪಲ್ಟಿಯಾಗಿ ಗಾಯಗೊಂಡಿದ್ದ ಪ್ರಯಾಣಿಕರ ಪೈಕಿ ಓರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾದ ಘಟನೆ ನಡೆದಿದೆ. ಮಂಗಳೂರು ಮೂಲದ ವಿಕಾಶ್ ಎಂಬಾತ ಮೃತಪಟ್ಟಿದ್ದು ಉಳಿದ ಸುಮಾರು 9 ಮಂದಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಎಂಬಲ್ಲಿಗೆ ಸೀಮಂತ ಕಾರ್ಯಕ್ರಮಕ್ಕೆ ಮಿನಿ ಬಸ್ ನಲ್ಲಿ ಬಂದವರು ವಾಪಸು ಮಂಗಳೂರಿಗೆ ತೆರಳುತ್ತಿದ್ದ ವೇಳೆ ಸುಮಾರು 4 ಗಂಟೆಗೆ ಮಂಗಳೂರು – ಬೆಂಗಳೂರು…

Read More

ದ.ಕ. ಜಿಲ್ಲಾ ಜೆಡಿಎಸ್ ಮಹಿಳಾ ಘಟಕ ಅಧ್ಯಕ್ಷೆಯಾಗಿ ರಮೀಝಾ ನಾಸೀರ್ ಆಯ್ಕೆ

ಮಂಗಳೂರು: ಜನತಾದಳ ಜಾತ್ಯತೀತ (ಜೆಡಿಎಸ್) ಪಕ್ಷದ ಮಹಿಳಾ ಘಟಕದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆಯಾಗಿ ರಮೀಝಾ ಭಾನು ಅವರನ್ನು ಆಯ್ಕೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಜಾಕೆ ಮಾಧವ ಗೌಡ ಅವರ ಶಿಫಾರಸಿನ ಮೇರೆಗೆ, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಅವರು ಬೆಂಗಳೂರಿನ ಜೆ.ಪಿ. ಭವನದಲ್ಲಿ ನಡೆದ ರಾಜ್ಯ ಮಹಿಳಾ ಕಾರ್ಯಕರ್ತೆಯರ ಸಭೆಯಲ್ಲಿ ರಮೀಜಾ ಭಾನು ಅವರಿಗೆ ನೇಮಕಾತಿ ಆದೇಶ ಪತ್ರವನ್ನು…

Read More
error: Content is protected !!