ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ಹಕ್ಕು ಸಂರಕ್ಷಣೆಗೆ ಆಗ್ರಹಿಸಿ ಕೇರಳ ಶಿಕ್ಷಣ ಸಚಿವರಿಗೆ ಮನವಿ
ಕಾಸರಗೋಡು : ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ನಿಯೋಗವು ಕಾಸರಗೋಡಿನ ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ಶೈಕ್ಷಣಿಕ ಹಿತಾಸಕ್ತಿಯನ್ನು ರಕ್ಷಿಸುವಂತೆ ಆಗ್ರಹಿಸಿ ರಾಜ್ಯ ಶಿಕ್ಷಣ ಸಚಿವರು ಹಾಗೂ ಸಾರ್ವಜನಿಕ ಶಿಕ್ಷಣ ಕಾರ್ಯದರ್ಶಿಯವರನ್ನು ಭೇಟಿ ಮಾಡಿತು. ನಿಯೋಗವು ‘ಮಲಯಾಳಂ ಭಾಷಾ ಅಧಿನಿಯಮ 2025’ರ ಕಲಂ 6(1)ಕ್ಕೆ ತಿದ್ದುಪಡಿ ತರುವಂತೆ ಬಲವಾಗಿ ಪ್ರತಿಪಾದಿಸಿತು. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯವಾಗಿದ್ದರೂ, ಭಾಷಾ ಅಲ್ಪಸಂಖ್ಯಾತರಿಗೆ ಈ ನಿಬಂಧನೆಯಿಂದ ವಿನಾಯಿತಿ ನೀಡುವ ಸ್ಪಷ್ಟ ತಿದ್ದುಪಡಿಯ ಅಗತ್ಯವಿದೆ ಎಂದು ಮನವರಿಕೆ ಮಾಡಿಕೊಟ್ಟಿತು….
