ಡಾ. ಕೊಲಚಪ್ಪೆ ಗೋವಿಂದ ಭಟ್‌ಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ’

ಕಾಸರಗೋಡು: ಸಾಹಿತಿ, ಸಾಹಿತ್ಯ ಪರಿಪೋಷಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಕೊಲಚಪ್ಪೆ ಗೋವಿಂದ ಭಟ್ ಅವರು ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026’ಗೆ ಆಯ್ಕೆಯಾಗಿದ್ದಾರೆ. ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಸಮಾರಂಭದ ಅಂಗವಾಗಿ ನಡೆಯಲಿರುವ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ…

Read More

ಜು. 26ರಂದು ಕಾಸರಗೋಡಿನಲ್ಲಿ ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನ; ಪೂರ್ವಭಾವಿ ಸಭೆಯಲ್ಲಿ ಸಿದ್ಧತೆಗಳ ಪರಿಶೀಲನೆ

ಕಾಸರಗೋಡು | ಜು. 9: ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.), ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕನ್ನಡ ಭವನ ಪ್ರಕಾಶನ ಹಾಗೂ ಕನ್ನಡ ಭವನ ಸಮೂಹ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಜುಲೈ 26ರಂದು ನಡೆಯಲಿರುವ ‘ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನ’ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸಮ್ಮೇಳನ ಸಮಿತಿಯ ಸಮಾಲೋಚನಾ ಸಭೆ ಕನ್ನಡ ಭವನ ಕೇಂದ್ರ ಕಚೇರಿಯಲ್ಲಿ ನಡೆಯಿತು. ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಅವರ…

Read More

ಕುಂಬಳೆ ಸೇವಾ ಸಹಕಾರಿ ಬ್ಯಾಂಕ್ ವಿರುದ್ಧ ಸಂಘ ಪರಿವಾರ ಕಾರ್ಯಕರ್ತರ ಬ್ಯಾನರ್; ರಾಜಕೀಯ ವಲಯದಲ್ಲಿ ಸಂಚಲನ

ಕುಂಬಳೆ | ಜು. 9: ಬಿಜೆಪಿ ಬೆಂಬಲಿತ ಸಂಘ ಪರಿವಾರ ಪೋಷಿತ ಸಹಕಾರ ಭಾರತಿ ಆಡಳಿತವಿರುವ ಕುಂಬಳೆ ಸೇವಾ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ವಿರುದ್ಧವೇ ಸಂಘ ಪರಿವಾರದ ಕಾರ್ಯಕರ್ತರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಕುಂಬಳೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕುಂಬಳೆ ಪೇಟೆಯಲ್ಲಿರುವ ಬ್ಯಾಂಕ್ ಕಚೇರಿ ಎದುರು ‘ಬಂಬ್ರಾಣದ ನೊಂದ ಸ್ವಯಂಸೇವಕರು ಹಾಗೂ ಬಿಜೆಪಿ ಕಾರ್ಯಕರ್ತರು’ ಎಂಬ ಹೆಸರಿನಲ್ಲಿ ಅಳವಡಿಸಲಾದ ಬ್ಯಾನರ್ ರಾಜಕೀಯ ಹಾಗೂ ಸಂಘ ಪರಿವಾರ ವಲಯದಲ್ಲಿ ಸಂಚಲನ ಮೂಡಿಸಿದೆ. ಬ್ಯಾನರ್‌ನಲ್ಲಿ ಮಾಡಲಾದ ಆರೋಪಗಳ ಪ್ರಕಾರ,…

Read More

ಕೇರಳ ಗ್ರಾಮೀಣ ಬ್ಯಾಂಕ್ 14ನೇ ವಾರ್ಷಿಕೋತ್ಸವ: ಪಾವೂರು ಶಾಖೆಯಲ್ಲಿ ಕೇಕ್ ಕತ್ತರಿಸಿ ಸಂಭ್ರಮಾಚರಣೆ

ಮಂಜೇಶ್ವರ, ಜುಲೈ 8: ಕೇರಳದ “ಕೃಷಿಕರ ಬ್ಯಾಂಕ್” ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕೇರಳ ಗ್ರಾಮೀಣ ಬ್ಯಾಂಕ್ ತನ್ನ 14ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಅಂಗವಾಗಿ ಪಾವೂರು ಶಾಖೆಯಲ್ಲಿ ಬುಧವಾರ ಸರಳ ಹಾಗೂ ಅರ್ಥಪೂರ್ಣ ಕಾರ್ಯಕ್ರಮದ ಮೂಲಕ ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಖಾ ವ್ಯವಸ್ಥಾಪಕಿ ಶ್ರುತಿ ಸಿ. ವಹಿಸಿದ್ದರು. ತೀಯಾ ವೆಲ್ಫೇರ್ ಅಸೋಸಿಯೇಷನ್ ಕಾಸರಗೋಡು ಜಿಲ್ಲಾ ಅಧ್ಯಕ್ಷ ಗಣೇಶ್ ಪಾವೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಕೇಕ್ ಕತ್ತರಿಸುವ ಮೂಲಕ ಬ್ಯಾಂಕಿನ 14ನೇ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ…

Read More

ಸ್ಕೂಟರ್ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾನಗರದ ಲಾಟರಿ ಏಜೆಂಟ್ ಸಾವು; ಇಂದು ಡಿಸ್ಚಾರ್ಜ್ ಆಗಿ ಮನೆಗೆ ಮರಳಬೇಕಿದ್ದ ವೇಳೆ ದುರ್ಘಟನೆ

ಕಾಸರಗೋಡು:* ಮಂಗಲ್ಪಾಡಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ ಸಮೀಪ ಸಂಭವಿಸಿದ ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟಿದ್ದಾರೆ. ಚೌಕ್ಕಿ, ಕಾವುಗೋಳಿ ಶ್ವೇತಾ ನಿವಾಸದ ದಿವಂಗತ ಆನಂದ ಅವರ ಪುತ್ರ ಲೋಕೇಶ್ (42) ಇಂದು (ಬುಧವಾರ) ಬೆಳಿಗ್ಗೆ ನುಳ್ಳಿಪ್ಪಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ವಿದ್ಯಾನಗರ ಜಿಲ್ಲಾ ಕೈಗಾರಿಕಾ ಕೇಂದ್ರದ ಸಮೀಪ ಲಾಟರಿ ಮಳಿಗೆ ನಡೆಸುತ್ತಿದ್ದ ಲೋಕೇಶ್, ಸುಮಾರು ಒಂದು ತಿಂಗಳ ಹಿಂದೆ ಅಪಘಾತಕ್ಕೀಡಾಗಿದ್ದರು. ಅವರು ಚಲಾಯಿಸುತ್ತಿದ್ದ ಸ್ಕೂಟರ್ ಮಂಗಲ್ಪಾಡಿ ಶಾಲೆ ಸಮೀಪ ನಿಯಂತ್ರಣ ತಪ್ಪಿ…

Read More

ಮಂಗಳೂರು-ಚೆನ್ನೈ ಮಧ್ಯೆ ವಿಶೇಷ ರೈಲು: ಓಣಂ ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ

ಮಂಜೇಶ್ವರ: ಓಣಂ ಹಬ್ಬದ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಮಂಗಳೂರು-ಚೆನ್ನೈ ನಡುವೆ ರೈಲ್ವೆ ಇಲಾಖೆಯು ಹೊಸ ವಿಶೇಷ ರೈಲನ್ನು ಘೋಷಿಸಿದೆ. ಈ ರೈಲು ಜುಲೈ 13 ರಿಂದ ಆಗಸ್ಟ್ 31ರವರೆಗೆ ಕಾರ್ಯನಿರ್ವಹಿಸಲಿದೆ. ಪ್ರತಿ ಸೋಮವಾರ ಸಂಜೆ 4 ಗಂಟೆಗೆ ಮಂಗಳೂರಿನಿಂದ ಹೊರಡುವ ರೈಲು, ಮರುದಿನ ಬೆಳಗ್ಗೆ 10.55ಕ್ಕೆ ಚೆನ್ನೈ ತಲುಪಲಿದೆ. ವಾಪಸ್ ಚೆನ್ನೈನಿಂದ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಹೊರಟು, ಬುಧವಾರ ಬೆಳಗ್ಗೆ 8.40ಕ್ಕೆ ಮಂಗಳೂರು ತಲುಪಲಿದೆ. ಈ ರೈಲಿನಲ್ಲಿ 2 ಸೆಕೆಂಡ್ ಎಸಿ, 8 ಥರ್ಡ್ ಎಸಿ,…

Read More

ಎಟಿಎಂ ಗ್ಲಾಸ್ ಮೈಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬ್ಯಾಂಕ್ ಉದ್ಯೋಗಿ ಸಾವು

​ ಕಾಸರಗೋಡು: ಎಟಿಎಂ ಕೇಂದ್ರದ ಗಾಜಿನ ಬಾಗಿಲು ಮೈಮೇಲೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಕಾಸರಗೋಡು ಜಿಲ್ಲೆಯ ಕಾಂಞಂಗಾಡ್ ಮೂಲದ ಬ್ಯಾಂಕ್ ಉದ್ಯೋಗಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಾಂಞಂಗಾಡ್ ನಿತ್ಯಾನಂದ ಆಶ್ರಮದ ಸಮೀಪದ ನಿವಾಸಿ ಬಾಲಕೃಷ್ಣ (56) ಮೃತ ದುರ್ದೈವಿ. ಇವರು ಮಂಗಳೂರಿನ ಕರ್ನಾಟಕ ಕೋ-ಆಪರೇಟಿವ್ ಬ್ಯಾಂಕ್ ಶಾಖೆಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು.​ ಬಾಲಕೃಷ್ಣ ಅವರು ವಾರದಲ್ಲಿ ಒಂದು ದಿನ ಮಾತ್ರ ಕಾಂಞಂಗಾಡ್‌ಗೆ ತೆರಳುತ್ತಿದ್ದು, ಉಳಿದ ದಿನಗಳಲ್ಲಿ ಮಂಗಳೂರಿನಲ್ಲೇ ವಾಸ್ತವ್ಯ ಹೂಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ…

Read More

ಡಾ. ಎಸ್. ಬಾಲಾಜಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’

ಕಾಸರಗೋಡು: ಕನ್ನಡ ಜಾನಪದ ಕಲೆ ಮತ್ತು ಸಂಸ್ಕೃತಿಯ ಸಂರಕ್ಷಣೆ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಪರಿಗಣಿಸಿ, ಕನ್ನಡ ಜಾನಪದ ಪರಿಷತ್‌ನ ಸ್ಥಾಪಕರಾದ ಡಾ. ಎಸ್. ಬಾಲಾಜಿ ಅವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನ ನೀಡುವ ಪ್ರತಿಷ್ಠಿತ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’ಗೆ ಆಯ್ಕೆ ಮಾಡಲಾಗಿದೆ. ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಅಂಗವಾಗಿ ನಡೆಯಲಿರುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಡಾ. ಎಸ್. ಬಾಲಾಜಿ ಅವರಿಗೆ…

Read More

ಮಂಜೇಶ್ವರ ರೈಲ್ವೇ ನಿಲ್ದಾಣದ ಸಂಪರ್ಕ ರಸ್ತೆ ನಿರ್ಲಕ್ಷ್ಯ: ತಿಂಗಳಾದರೂ ತೆರವಾಗದ ಬೃಹತ್ ಮರ; ಪೊದೆಗಳಿಂದ ಕೂಡಿದ ದಾರಿಯಲ್ಲಿ ಸಂಚಾರಕ್ಕೆ ತೊಂದರೆ

ಮಂಜೇಶ್ವರ, ಜು. 8: ಮಂಜೇಶ್ವರ ರೈಲ್ವೇ ನಿಲ್ದಾಣವನ್ನು ಶಾಲಾ-ಕಾಲೇಜುಗಳು, ಸ್ಥಳೀಯಾಡಳಿತ ಕಚೇರಿ, ಮೃಗಾಸ್ಪತ್ರೆ ಸೇರಿದಂತೆ ಪ್ರಮುಖ ಸ್ಥಳಗಳಿಗೆ ಸಂಪರ್ಕಿಸುವ ಪ್ರಮುಖ ಕಾಲ್ನಡಿಗೆ ರಸ್ತೆ ಇದೀಗ ಸಂಪೂರ್ಣವಾಗಿ ಬಳಕೆಗೆ ಅಯೋಗ್ಯವಾಗಿದೆ. ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಬೃಹತ್ ಮರವನ್ನು ತೆರವುಗೊಳಿಸಲು ತಿಂಗಳು ಕಳೆದರೂ ಸಂಬಂಧಪಟ್ಟ ಇಲಾಖೆಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು, ಸರ್ಕಾರಿ ಕಚೇರಿ ಸಿಬ್ಬಂದಿಗಳು ಹಾಗೂ ರೈಲ್ವೇ ಪ್ರಯಾಣಿಕರು ಸೇರಿದಂತೆ ನೂರಾರು ಮಂದಿ ಪ್ರತಿದಿನ ಬಳಸುವ ಈ ಕಿರುದಾರಿ, ಬಿದ್ದಿರುವ ಮರದಿಂದಾಗಿ ಸಂಚಾರಕ್ಕೆ…

Read More

ಕುಂಬಳೆ ಟ್ರಾಫಿಕ್ ವಿವಾದ: ಆರೋಪಗಳು ಆಧಾರರಹಿತ ಎಂದ ಪಂಚಾಯಿತಿ

ಕುಂಬಳೆ, ಜು. 8: ಕುಂಬಳೆ ಪಟ್ಟಣದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲರೊಂದಿಗೆ ಸಮಾಲೋಚನೆ ನಡೆಸಿದ ಬಳಿಕವೇ ಸಂಚಾರ ವ್ಯವಸ್ಥೆ (ಟ್ರಾಫಿಕ್) ಪರಿಷ್ಕರಣೆಯನ್ನು ಜಾರಿಗೊಳಿಸಲಾಗಿದೆ. ಈ ಕುರಿತು ಮಾಡಲಾಗುತ್ತಿರುವ ಆರೋಪಗಳು ಆಧಾರರಹಿತವಾಗಿವೆ ಎಂದು ಕುಂಬಳೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಕುಂಬಳೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಡಳಿತ ಮಂಡಳಿಯ ಸದಸ್ಯರು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ವ್ಯಾಪಾರಿಗಳ ಸಂಘದ ಮುಖಂಡರು ಹಾಗೂ ಮೋಟಾರ್ ಕಾರ್ಮಿಕರ ಪ್ರತಿನಿಧಿಗಳು ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಪ್ರಸ್ತುತ ಸಂಚಾರ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು…

Read More
error: Content is protected !!