ಮಂಜೇಶ್ವರ ರೈಲು ನಿಲ್ದಾಣದಲ್ಲಿ ಮಳೆಗಾಲದ ಸಂಕಷ್ಟ: ಮೇಲ್ಛಾವಣಿ ಕೊರತೆಯಿಂದ ಶೌಚಾಲಯದಲ್ಲಿ ಆಶ್ರಯ ಪಡೆಯುತ್ತಿರುವ ಪ್ರಯಾಣಿಕರು
ಮಂಜೇಶ್ವರ, ಜು. 7: ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಮಂಜೇಶ್ವರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ. ಪ್ಲಾಟ್‌ಫಾರ್ಮ್‌ನಲ್ಲಿ ಸಮರ್ಪಕ ಮೇಲ್ಛಾವಣಿ (ಶೀಟ್ ಹೊದಿಕೆ) ಇಲ್ಲದ ಕಾರಣ ಮಳೆ ಸುರಿದಾಗ ಪ್ರಯಾಣಿಕರು ಶೌಚಾಲಯದೊಳಗೆ ಆಶ್ರಯ ಪಡೆಯಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಸ್ತುತ ಪ್ಲಾಟ್‌ಫಾರ್ಮ್‌ನ ಮಧ್ಯಭಾಗದಲ್ಲಿ ಮಾತ್ರ ಭಾಗಶಃ ಮೇಲ್ಛಾವಣಿ ಅಳವಡಿಸಲಾಗಿದ್ದು, ಉಳಿದ ಭಾಗ ಸಂಪೂರ್ಣ ಬಯಲಾಗಿಯೇ ಉಳಿದಿದೆ. ಪರಿಣಾಮ ಮಳೆ ಬಂದಾಗ ಪ್ರಯಾಣಿಕರು ನೆನೆಯುವುದನ್ನು ತಪ್ಪಿಸಿಕೊಳ್ಳಲು ಶೌಚಾಲಯ ಅಥವಾ ಇತರೆ ಸಣ್ಣ ಆಶ್ರಯ ಸ್ಥಳಗಳತ್ತ ಧಾವಿಸಬೇಕಾದ ಪರಿಸ್ಥಿತಿ ಎದುರಾಗುತ್ತಿದೆ….
