ಯುವ ಕಾರ್ಯಕರ್ತರು ಪಕ್ಷದ ಸಿದ್ಧಾಂತ ಅರಿತು ಮುನ್ನಡೆಯಬೇಕು – ಬಿಜೆಪಿ ನಾಯಕ ಕೆ. ರಂಜಿತ್
ಪೈವಳಿಕೆ: ರಾಜಕೀಯ ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು, ಯುವ ಕಾರ್ಯಕರ್ತರು ಪಕ್ಷದ ಸಿದ್ಧಾಂತ, ತತ್ವ, ಇತಿಹಾಸ ಹಾಗೂ ಭವಿಷ್ಯದ ಯೋಜನೆಗಳನ್ನು ಅರಿತು ಕಾರ್ಯನಿರ್ವಹಿಸಿದರೆ ನಾಯಕತ್ವ ಗುಣಗಳು ವೃದ್ಧಿಯಾಗುತ್ತವೆ ಎಂದು ಕೇರಳ ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ. ರಂಜಿತ್ ಹೇಳಿದರು. ಅವರು ಬಿಜೆಪಿ ಮಂಜೇಶ್ವರ ಮಂಡಲದ ಪ್ರಶಿಕ್ಷಣ ಶಿಬಿರವನ್ನು ಸಜಂಕಿಲ ಅವಲ ಮಠ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. “ಬಿಜೆಪಿ ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷವಾಗಿದ್ದು, ಅದರ ಸಿದ್ಧಾಂತಗಳನ್ನು ಅರಿತು ಕಾರ್ಯನಿರ್ವಹಿಸುವುದು ಅಗತ್ಯ” ಎಂದು ಅವರು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ…
