ವಿಕಸಿತ ಭಾರತ 2047 ಗುರಿ ಸಾಧನೆಗೆ ತಂತ್ರಜ್ಞಾನವೇ ಶಕ್ತಿ: ಅಶ್ವಿನಿ ಎಂ.ಎಲ್.

ಕಾಸರಗೋಡು: ನರೇಂದ್ರ ಮೋದಿ ಸರ್ಕಾರದ 12ನೇ ವಾರ್ಷಿಕೋತ್ಸವದ ಅಂಗವಾಗಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ಆಶ್ರಯದಲ್ಲಿ “ನವ ಭಾರತ ಸದಸ್” ಹೆಸರಿನಲ್ಲಿ ವಿಕಸಿತ ಭಾರತ ಕನ್ವೆನ್ಷನ್ ಆಯೋಜಿಸಲಾಯಿತು. ಡಾ. ಶ್ಯಾಮಪ್ರಸಾದ್ ಮುಖರ್ಜಿ ಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನು ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷ ಅಶ್ವಿನಿ ಎಂ.ಎಲ್. ಉದ್ಘಾಟಿಸಿದರು. ವಿಶ್ವದ ಹತ್ತನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿದ್ದ ಭಾರತವನ್ನು ಕೇವಲ 12 ವರ್ಷಗಳಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿಸಲು ನರೇಂದ್ರ ಮೋದಿ ಅವರಿಗೆ ಸಾಧ್ಯವಾಗಿದೆ ಎಂದು ಅಶ್ವಿನಿ ಹೇಳಿದರು. ಭ್ರಷ್ಟಾಚಾರ ಮತ್ತು…

Read More

ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪೂರ್ವಭಾವಿ ಮಹಾಸಭೆ

ಅನಂತಪುರ, ಜೂನ್ 23: ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಮುಂಬರುವ ಬ್ರಹ್ಮಕಲಶೋತ್ಸವದ ಸಿದ್ಧತೆಗಳು ಆರಂಭಗೊಂಡಿವೆ. ಇದರ ಅಂಗವಾಗಿ ಭಕ್ತರು ಹಾಗೂ ಸೇವಾ ಸಮಿತಿಯ ಸದಸ್ಯರ ಮಹಾಸಭೆಯನ್ನು ಆಯೋಜಿಸಲಾಗಿದೆ. ಮಹಾಸಭೆಯು ಜೂನ್ 28, 2026ರಂದು ಬೆಳಿಗ್ಗೆ 10 ಗಂಟೆಗೆ ಅನಂತಪುರ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವು ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಮಾಣಿಲ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹಾಗೂ ಒಡಿಯೂರು…

Read More

ಎಸ್‌ಡಿಪಿಐ 18ನೇ ಸಂಸ್ಥಾಪನಾ ದಿನಾಚರಣೆ: ಕೊಪ್ಪಳದಲ್ಲಿ ಬ್ರಾಂಚ್ ಕಚೇರಿ ಉದ್ಘಾಟನೆ

“ಹಸಿವಿಲ್ಲದ, ಭಯವಿಲ್ಲದ ಭಾರತ ನಿರ್ಮಾಣವೇ ಪಕ್ಷದ ಗುರಿ” – ನಾಸರ್ ಬಂಬ್ರಾಣ ಮಂಜೇಶ್ವರ, ಜೂನ್ 21: ಎಸ್‌ಡಿಪಿಐಯ 18ನೇ ಸಂಸ್ಥಾಪನಾ ದಿನದ ಅಂಗವಾಗಿ ಮಂಜೇಶ್ವರ ಮಂಡಲ ವ್ಯಾಪ್ತಿಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭದಲ್ಲಿ ಕೊಪ್ಪಳದಲ್ಲಿ ನೂತನ ಬ್ರಾಂಚ್ ಕಚೇರಿಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಸ್‌ಡಿಪಿಐ ಮಂಜೇಶ್ವರ ಮಂಡಲ ಅಧ್ಯಕ್ಷ ನಾಸರ್ ಬಂಬ್ರಾಣ, ಕಳೆದ ಹದಿನೆಂಟು ವರ್ಷಗಳಿಂದ ಪಕ್ಷವು ದೇಶದ ದಲಿತ, ಹಿಂದುಳಿದ ಹಾಗೂ ಅಂಚಿನಲ್ಲಿರುವ ಸಮುದಾಯಗಳ ರಾಜಕೀಯ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದೆ…

Read More

ವಿಶ್ವ ಯೋಗ ದಿನಾಚರಣೆ: ಪರಂಬಳ ಕಯ್ಯಾರಿನಲ್ಲಿ 75 ವಿದ್ಯಾರ್ಥಿಗಳಿಗೆ ಯೋಗ ತರಬೇತಿ

ದುರ್ಗಾ ಶಕ್ತಿ ಕುಣಿತ ಭಜನಾ ತಂಡದ ಆಶ್ರಯದಲ್ಲಿ ಕಾರ್ಯಕ್ರಮ ಉಪ್ಪಳ, ಜೂನ್ 21: ದುರ್ಗಾ ಶಕ್ತಿ ಕುಣಿತ ಭಜನಾ ತಂಡ, ಪರಂಬಳ ಕಯ್ಯಾರು ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಭಾರತ ಮಾತಾ ಸೇವಾ ಟ್ರಸ್ಟ್ ಸಭಾಂಗಣದಲ್ಲಿ ವಿಶೇಷ ಯೋಗ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಮಂಜೇಶ್ವರ ತಾಲೂಕು ಪ್ರಧಾನ ಕಾರ್ಯದರ್ಶಿ ಶ್ರೀ ರಾಮಕೃಷ್ಣ ಸಂತಡ್ಕ ಹಾಗೂ ಸಾಮಾಜಿಕ ಕಾರ್ಯಕರ್ತ ಸುರೇಶ್ ಶೆಟ್ಟಿ ಹೇರೂರು ದೀಪ ಬೆಳಗಿಸುವ…

Read More

ಹೊಸಂಗಡಿಯಲ್ಲಿ ಬೈಕ್ ಸವಾರರ ಕೈಚಳಕ; ಎರಡು ಪವನ್ ಸರ ಎಳೆದು ಪರಾರಿ

ಹೊಸಂಗಡಿ, ದಾರಿ ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗೆಯಿಂದ ಎರಡು ಪವನ್ ತೂಕದ ಚಿನ್ನದ ಸರ ಎಳೆದೊಯ್ದ ಘಟನೆ ಹೊಸಂಗಡಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಪೈವಳಿಕೆ ಬಾಯಿಕಟ್ಟೆ ನಿವಾಸಿ ಎ. ನಯನಾ (30) ಅವರು ಸೋಮವಾರ ಸಂಜೆ ಸುಮಾರು 4 ಗಂಟೆಯ ವೇಳೆಗೆ ಹೊಸಂಗಡಿ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯ ಎಸ್‌ಬಿಐ ಬ್ಯಾಂಕ್ ಸಮೀಪ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ದಾರಿ ಕೇಳುವ ನೆಪದಲ್ಲಿ ಅವರನ್ನು ಸಮೀಪಿಸಿ, ಕ್ಷಣಾರ್ಧದಲ್ಲಿ ಅವರ ಕುತ್ತಿಗೆಯಲ್ಲಿದ್ದ ಎರಡು…

Read More

ಪೈವಳಿಕೆ ಗ್ರಾಮ ಪಂಚಾಯತ್‌ನಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ವಿಫಲ: DYFI ಆರೋಪ

MCF ಕೇಂದ್ರಗಳಲ್ಲಿ ತ್ಯಾಜ್ಯ ರಾಶಿ; ದುರ್ವಾಸನೆ, ಸಾಂಕ್ರಾಮಿಕ ರೋಗದ ಭೀತಿ – ತಕ್ಷಣ ಕ್ರಮಕ್ಕೆ ಆಗ್ರಹ ಪೈವಳಿಕೆ, ಜುಲೈ 23: ಪೈವಳಿಕೆ ಗ್ರಾಮ ಪಂಚಾಯತ್ ಆಡಳಿತ ಸಮಿತಿಯು ನಿರಂತರವಾಗಿ ಅವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ನಡೆಸುತ್ತಿದ್ದು, ಇದರಿಂದ ಸಾರ್ವಜನಿಕ ಆರೋಗ್ಯಕ್ಕೆ ಗಂಭೀರ ಅಪಾಯ ಉಂಟಾಗಿದೆ ಎಂದು DYFI ಮಂಜೇಶ್ವರ ಬ್ಲೋಕ್ ಸಮಿತಿ ಆರೋಪಿಸಿದೆ. ಮನೆಮನೆಗಳಿಂದ ಹರಿತ ಕರ್ಮ ಸೇನೆ ಸಂಗ್ರಹಿಸುವ ಪ್ಲಾಸ್ಟಿಕ್ ತ್ಯಾಜ್ಯವನ್ನು MCF ಕೇಂದ್ರಗಳಿಗೆ ತಂದು ಸುರಿಯಲಾಗುತ್ತಿದ್ದು, ಕಿಲೋಗಟ್ಟಲೆ ತ್ಯಾಜ್ಯವು MCF ಒಳಗೆ ಮತ್ತು ಹೊರಗೆ…

Read More

ಪ್ರಿಯದರ್ಶಿನಿ ಯೋಜನೆಯ ಪರಿಣಾಮ: ಖಾಸಗಿ ಬಸ್ ಉದ್ಯಮ ಕುಸಿತದ ಅಂಚಿನಲ್ಲಿ

ಕಾಸರಗೋಡು: ಕೇರಳ ಸರ್ಕಾರ ಜಾರಿಗೆ ತಂದಿರುವ ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಯ ಪರಿಣಾಮವಾಗಿ ಖಾಸಗಿ ಬಸ್ ಉದ್ಯಮ ಗಂಭೀರ ಸಂಕಷ್ಟವನ್ನು ಎದುರಿಸುತ್ತಿದೆ ಎಂಬ ಆತಂಕ ಸಾರಿಗೆ ವಲಯದಲ್ಲಿ ವ್ಯಕ್ತವಾಗುತ್ತಿದೆ. ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಜಾರಿಗೊಂಡಿರುವ ಈ ಯೋಜನೆಯು ಖಾಸಗಿ ಬಸ್ ಮಾಲೀಕರ ಜೀವನೋಪಾಯದ ಮೇಲೆಯೂ ಪರಿಣಾಮ ಬೀರಿದೆ ಎಂಬ ಅಭಿಪ್ರಾಯ ಕೇಳಿಬರುತ್ತಿದೆ. ಉಚಿತ ಪ್ರಯಾಣ ಯೋಜನೆ ಆರಂಭವಾದ ಬಳಿಕ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕುಸಿದಿದೆ ಎಂದು ಬಸ್ ನಿರ್ವಾಹಕರು ಅಳಲು ತೋಡಿಕೊಂಡಿದ್ದಾರೆ. ದಿನದ…

Read More

ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಸಾವು, ಒಬ್ಬ ಗಂಭೀರ

​ಕಾಸರಗೋಡು : ಜಿಲ್ಲೆಯಲ್ಲಿ ಸೋಮವಾರ ಸಂಜೆ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ದುರ್ಮರಣವನ್ನಪ್ಪಿದ್ದಾರೆ. ​ಮೊದಲನೆಯ ಘಟನೆಯು ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಿಯ ಸೇತುವೆ ಬಳಿ ನಡೆದಿದೆ. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ, ಉದುಮ ಪಾಕ್ಯಾರ ನಿವಾಸಿ ಪ್ರಜೀಶ್ (26) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜೊತೆಗಿದ್ದ ಅಮೀನ್ (25) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ​ಮತ್ತೊಂದು ಘಟನೆಯು…

Read More

ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್‌ಗೆ ಕೊಂಕಣಿ ಕ್ರಿಶ್ಚಿಯನ್ ಡೆವಲಪ್ಮೆಂಟ್ ಫಾರಂ ವತಿಯಿಂದ ಅದ್ದೂರಿ ಸನ್ಮಾನ

ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯ ಹರಿಕಾರರಾಗಿ ಹಾಗೂ ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಎ.ಕೆ.ಎಂ. ಅಶ್ರಫ್ ಅವರನ್ನು ಕಾಸರಗೋಡು ಕೊಂಕಣಿ ಕ್ರಿಶ್ಚಿಯನ್ ಡೆವಲಪ್ಮೆಂಟ್ ಫಾರಂ ವತಿಯಿಂದ ವರ್ಕಾಡಿಯ ಗಾಂಧಿನಗರದ ಎ.ಎಚ್. ಪ್ಯಾಲೇಸ್‌ನಲ್ಲಿ ಅದ್ದೂರಿಯಾಗಿ ಸನ್ಮಾನಿಸಲಾಯಿತು. ಸಂಘಟನೆಯ ಅಧ್ಯಕ್ಷ ಯೇಸು ಪ್ರಸಾದ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜದ ಗಣ್ಯರು ಹಾಗೂ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿ ಶಾಸಕರ ಜನಪರ ಕಾರ್ಯಗಳು ಹಾಗೂ ಅಭಿವೃದ್ಧಿ ಚಟುವಟಿಕೆಗಳನ್ನು ಶ್ಲಾಘಿಸಿದರು. ಸನ್ಮಾನ ಸ್ವೀಕರಿಸಿದ ಶಾಸಕ ಎ.ಕೆ.ಎಂ. ಅಶ್ರಫ್ ಮಾತನಾಡಿ, “ಸಮಾಜದ…

Read More

ಬಂಗ್ರ ಮಂಜೇಶ್ವರ ಪೊಯ್ಯೆಕಂಡ ಮಲರಾಯ ದೈವಸ್ಥಾನ ನವೀಕರಣಕ್ಕೆ ಚಾಲನೆ

ಮಂಜೇಶ್ವರ: ಹಿತಿಹಾಸ ಪ್ರಸಿದ್ಧ ಪುರಾತನ ದೈವ ಸಾನ್ನಿಧ್ಯವಾಗಿರುವ ಬಂಗ್ರಮಂಜೇಶ್ವರ ಪೊಯ್ಯೆಕಂಡ ಮಲರಾಯ ದೈವಸ್ಥಾನದ ನವೀಕರಣ ಕಾರ್ಯಕ್ಕೆ ಭಕ್ತರು ತೀರ್ಮಾನಿಸಿ ಜೂನ್ 21ರಂದು ಬಡಾಜೆ ತಂತ್ರಿಯವರ ದಿವ್ಯ ಉಪಸ್ಥಿತಿಯಲ್ಲಿ ಬಾಲಾಲಯ ಪ್ರತಿಷ್ಠಾಪನೆ ನೆರವೇರಿತುಮಲರಾಯ ,ಬಬ್ಬರ್ಯ ,ನಾಗದೇವರ ಸಾನಿಧ್ಯ ವಿರುವ ಈ ದೈವಸ್ಥಾನವನ್ನು ಸುಮಾರು ನಾಲ್ಕು ಕೋಟಿ ರೂಪಾಯಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಳಿಸಿ , ಮುಂದಿನ ಮಾರ್ಚ್ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ಯೋಜನೇ ಹಾಕಲಾಗಿದೆ, ಮೊಗವೀರ ಸಮುದಾಯಕ್ಕೆ ಸೇರಿದ ಈಕ್ಷೇತ್ರ ಇದಾಗಿದ್ದು ಮೀನು ವ್ಯಾಪಾರ ಮಾಡುತ್ತಿದ್ದ ನಾಗಮ್ಮ ಹಾಗೂ ಬಾಳಮ್ಮ…

Read More
error: Content is protected !!