ಯುಡಿಎಫ್ ಬಜೆಟ್: ಕಾಸರಗೋಡಿಗೆ ವಿಶೇಷ ಪ್ಯಾಕೇಜ್; ಎಂಡೋಸಲ್ಫಾನ್ ಸಂತ್ರಸ್ತರಿಗೆ ಭರವಸೆ
ಕಾಸರಗೋಡು : ಹತ್ತು ವರ್ಷಗಳ ಬಳಿಕ ಅಧಿಕಾರಕ್ಕೆ ಮರಳಿದ ಯುಡಿಎಫ್ ಸರ್ಕಾರ, ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರ ನೇತೃತ್ವದಲ್ಲಿ ಮಹತ್ವಾಕಾಂಕ್ಷೆಯ ಚೊಚ್ಚಲ ಬಜೆಟ್ ಮಂಡಿಸಿದೆ. ರಾಜ್ಯದ ಹಿಂದುಳಿದ ಜಿಲ್ಲೆಗಳಾದ ಕಾಸರಗೋಡು, ವಯನಾಡು ಮತ್ತು ಇಡುಕ್ಕಿಯ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. ವಿಶೇಷವಾಗಿ ಕಾಸರಗೋಡಿನ ಎಂಡೋಸಲ್ಫಾನ್ ಸಂತ್ರಸ್ತರ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಲಿದ್ದು, ವೈದ್ಯಕೀಯ ಕಾಲೇಜು ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಸಾಮಾಜಿಕ ಭದ್ರತೆಗೆ ಒತ್ತು ನೀಡಿದ ಬಜೆಟ್‌ನಲ್ಲಿ, ‘ಉಮ್ಮನ್ ಚಾಂಡಿ ಆರೋಗ್ಯ ವಿಮೆ’…
