ವಾಕಿಂಗ್ ಟುಗೆದರ್ ಫೌಂಡೇಶನ್–ಆಸ್ಟರ್ ಮಿಮ್ಸ್ ಸಹಯೋಗದಲ್ಲಿ ಕ್ಯಾನ್ಸರ್ ಸ್ಕ್ರೀನಿಂಗ್ ಶಿಬಿರ
ಉಪ್ಪಳ–ಬೇಕೂರು ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿರುವ ವಾಕಿಂಗ್ ಟುಗೆದರ್ ಫೌಂಡೇಶನ್, ಕಾಸರಗೋಡು ಆಸ್ಟರ್ ಮಿಮ್ಸ್ ಜೊತೆಗೂಡಿ ಕ್ಯಾನ್ಸರ್ ಸ್ಕ್ರೀನಿಂಗ್ ಟೆಸ್ಟ್ ಶಿಬಿರವನ್ನು ಆಯೋಜಿಸುತ್ತಿದೆ. ಉದ್ಯೋಗ, ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ ಫೌಂಡೇಶನ್ ವಿಶೇಷ ಗಮನ ನೀಡುತ್ತಿದೆ. ಕಳೆದ ಎರಡು ವರ್ಷಗಳಿಂದ ಮಂಜೇಶ್ವರ ಪ್ರದೇಶದ ವಿವಿಧ ಸಮಸ್ಯೆಗಳ ಕುರಿತು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ . ಇತರ ಸ್ವಯಂಸೇವಾ ಸಂಸ್ಥೆಗಳು ಹಾಗೂ ಆಸ್ಪತ್ರೆಗಳೊಂದಿಗೆ ಸಹಕಾರ ಮಾಡಿಕೊಂಡು ಇನ್ನೂ ಹಲವು ಕಾರ್ಯಕ್ರಮಗಳನ್ನು ನಡೆಸುವ ಯೋಜನೆಯೂ ಇದೆ. ಫೆಬ್ರವರಿ 10ರಂದು ಮಂಗಳವಾರ ಬೇಕೂರು ಸುಭಾಷ್ ನಗರದಲ್ಲಿರುವ ಸೀ…