20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಜೇಶ್ವರ, ಜೂ.12: ಸುಮಾರು ಎರಡು ದಶಕಗಳ ಕಾಲ ಕಾನೂನಿನ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕುಂಬಳೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಹೊಸಂಗಡಿ ನಿವಾಸಿ ಪ್ರಶಾಂತ್ (44) ಬಂಧಿತ ಆರೋಪಿ. 2006ರ ಅಬಕಾರಿ ಪ್ರಕರಣದಲ್ಲಿ ಭಾಗಿಯಾಗಿದ್ದ ಪ್ರಶಾಂತ್, ಜಾಮೀನು ಪಡೆದು ಬಿಡುಗಡೆಯಾದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಕರ್ನಾಟಕಕ್ಕೆ ಪರಾರಿಯಾಗಿದ್ದನು. ಈ ಹಿನ್ನೆಲೆಯಲ್ಲಿ 2010ರಲ್ಲಿ ನ್ಯಾಯಾಲಯ ಆತನನ್ನು ಘೋಷಿತ ಆರೋಪಿಯಾಗಿ ಘೋಷಿಸಿತ್ತು. ಖಚಿತ ಮಾಹಿತಿ ಆಧರಿಸಿ ಕುಂಬಳೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಬೈಜು ಕೆ. ಜೋಸ್ ನೇತೃತ್ವದಲ್ಲಿ ಚಂದ್ರನ್,…

Read More

ಕಾಸರಗೋಡಿನ ಮಣ್ಣಿನ ಮಗನಿಗೆ ಜಿಲ್ಲೆಯ ‘ಖಾಕಿ’ ಕಿರೀಟ: ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಪಿ. ನಿತಿನ್ ರಾಜ್

ಕಾಸರಗೋಡು: ಕಾಸರಗೋಡು ಜಿಲ್ಲೆ ರಚನೆಯಾಗಿ 44 ವರ್ಷಗಳ ಸುದೀರ್ಘ ಅವಧಿಯ ನಂತರ, ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಕಾಸರಗೋಡಿನವರೇ ಆದ ಐಪಿಎಸ್ ಅಧಿಕಾರಿಯೊಬ್ಬರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಅಪರೂಪದ ವಿದ್ಯಮಾನ ಕಾಸರಗೋಡಿನ ಜನತೆಯಲ್ಲಿ ವಿಶೇಷ ಸಂಭ್ರಮ ಹಾಗೂ ಹೆಮ್ಮೆಯನ್ನು ಮೂಡಿಸಿದೆ. ​ಕಾಞಂಗಾಡಿನ ರಾವಣೇಶ್ವರಂನ ಕಳರಿಕಾಲ್ ನಿವಾಸಿ ಪಿ. ನಿತಿನ್ ರಾಜ್, ಈಗ ಕಾಸರಗೋಡಿನ ನೂತನ ಪೊಲೀಸ್ ಮುಖ್ಯಸ್ಥ. 2018ರ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ 210ನೇ ರ‍್ಯಾಂಕ್ ಗಳಿಸಿ ಐಪಿಎಸ್ ಪಡೆದ ಇವರು, ಈ…

Read More

ಉಚಿತ ಬಸ್ ಸೇವೆ ಮಂಜೇಶ್ವರ ವ್ಯಾಪ್ತಿಗೆ ಇಲ್ಲ: ಶಾಸಕರ ವಿರುದ್ಧ ಬಿಜೆಪಿ ವಾಗ್ದಾಳಿ

ಮಿಯಪದವು, ಜೂ.12: ಕೇರಳ ಸರ್ಕಾರದ ಉಚಿತ ಬಸ್ ಸೇವೆ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಜನರಿಗೆ ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ ಎಂದು ಆರೋಪಿಸಿರುವ ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ, ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸ್ಥಳೀಯ ಶಾಸಕರು ಬೇಜವಾಬ್ದಾರಿ ತೋರಿದ್ದಾರೆ ಎಂದು ಟೀಕಿಸಿದೆ. ಮಂಡಲ ಸಭೆಯಲ್ಲಿ ಮಾತನಾಡಿದ ಬಿಜೆಪಿ ಮುಖಂಡರು, ಅಧಿಕಾರಕ್ಕೆ ಬರಲು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಶಾಸಕರು ವಿಫಲರಾಗಿದ್ದು, ಮಂಜೇಶ್ವರ ಜನತೆಗೆ ಮತ್ತೊಮ್ಮೆ ನಿರಾಸೆ ಮೂಡಿಸಿದ್ದಾರೆ ಎಂದು ಆರೋಪಿಸಿದರು. ಪ್ರಾದೇಶಿಕ ಬಸ್‌ಗಳಲ್ಲಿ ಮಾತ್ರ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಾಸರಗೋಡು–ಮಂಗಳೂರು…

Read More

ಶಿವರಾಮ ಕಾಸರಗೋಡು ಅವರಿಗೆ ಪ್ರತಿಷ್ಠಿತ ಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿ ಪ್ರದಾನ

ಕಾಸರಗೋಡು/ಬೆಂಗಳೂರು, ಜೂ.12: ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಮೂರುವರೆ ದಶಕಕ್ಕೂ ಹೆಚ್ಚು ಕಾಲ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಅಧ್ಯಕ್ಷ ಶಿವರಾಮ ಕಾಸರಗೋಡು ಅವರಿಗೆ ಪ್ರತಿಷ್ಠಿತ “ಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿ” ಪ್ರದಾನ ಮಾಡಲಾಗಿದೆ. ಬೆಂಗಳೂರು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಜೂನ್ 8ರಿಂದ 10ರವರೆಗೆ ವಿ.ಕೆ.ಎಂ. ಕಲಾವಿದರು (ರಿ.) ಬೆಂಗಳೂರು ನೇತೃತ್ವದಲ್ಲಿ, ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ…

Read More

ಅಪಾಯದ ಸ್ಥಿತಿಯಲ್ಲಿದ್ದ ಶಾಲೆ, ಅಂಗನವಾಡಿ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಆದೇಶ

​ಮಂಜೇಶ್ವರ: ಅಪಾಯದ ಸ್ಥಿತಿಯಲ್ಲಿರುವ ಉದ್ಯಾವರ ತೊಟ್ಟ ಸರಕಾರಿ ಮುಸ್ಲಿಂ ಎಲ್.ಪಿ. ಶಾಲೆ ಮತ್ತು ಅಂಗನವಾಡಿಯ ಮಕ್ಕಳನ್ನು ಸುರಕ್ಷತೆಯ ದೃಷ್ಟಿಯಿಂದ ಸಮೀಪದ ಕಟ್ಟಡಕ್ಕೆ ಸ್ಥಳಾಂತರಿಸಿ, ಅಲ್ಲಿ ತರಗತಿಗಳನ್ನು ಪ್ರಾರಂಭಿಸಲು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅವರ ಅಧ್ಯಕ್ಷತೆಯಲ್ಲಿ ಶಾಲೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.ಈ ಬಗ್ಗೆ ಕೆಲ ದಿನಗಳ ಹಿಂದೆ ನಮ್ಮ ಮೀಡಿಯಾ ಸಮಗ್ರ ವರದಿಯನ್ನು ಬಿತ್ತರಿಸಿ ಸಂಬಂದಪಟ್ಟವರ ಗಮನ ಸೆಳೆಯುವ ಪ್ರಯತ್ನ ನಡೆಸಿತ್ತು. ​ಅಸುರಕ್ಷಿತ ಕಟ್ಟಡದಲ್ಲಿ ಶಾಲೆ ನಡೆಯುತ್ತಿರುವ ಕುರಿತಾದ ದೂರಿನ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ಶಿಕ್ಷಣ ಇಲಾಖೆಯಿಂದ ವರದಿ ಪಡೆದಿದ್ದರು….

Read More

ನಾಡೋಜ ಕವಿ ಡಾ. ಕಯ್ಯಾರ ಕಿನ್ಹಣ್ಣ ರೈ ಸ್ಮಾರಕ ಸಾಂಸ್ಕೃತಿಕ ಭವನ ವೀಕ್ಷಿಸಿದ ಶಾಸಕ ಕಲ್ಲಟ್ರ ಮಾಹಿನ್ ಹಾಜಿ

ಕಾಸರಗೋಡು, ಜೂ.11: ಕರ್ನಾಟಕ ಏಕೀಕರಣ ಹೋರಾಟಗಾರ, ನಾಡೋಜ ಕವಿ ಡಾ. ಕಯ್ಯಾರ ಕಿನ್ಹಣ್ಣ ರೈ ಅವರ ಸ್ಮರಣಾರ್ಥ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಕಾಸರಗೋಡು ಜಿಲ್ಲೆಯ ಪೆರಡಾಳದಲ್ಲಿ ನಿರ್ಮಿಸಿರುವ ಸಾಂಸ್ಕೃತಿಕ ಭವನಕ್ಕೆ ಕಾಸರಗೋಡಿನ ನೂತನ ಶಾಸಕ ಕಲ್ಲಟ್ರ ಮಾಹಿನ್ ಹಾಜಿ ಭೇಟಿ ನೀಡಿ ವೀಕ್ಷಿಸಿದರು. ಭವನದ ನಿರ್ಮಾಣ, ಸೌಲಭ್ಯಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪೂರಕವಾದ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದ ಶಾಸಕ ಕಲ್ಲಟ್ರ ಮಾಹಿನ್ ಹಾಜಿ, ಭವನದ ನಿರ್ಮಾಣ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ…

Read More

ಮಂಜೇಶ್ವರ ಸರ್ಕಾರಿ ಹೋಮಿಯೋಪತಿ ಡಿಸ್ಪೆನ್ಸರಿಯಲ್ಲಿ ಎನ್‌ಎಬಿಎಚ್ ಪರಿಶೀಲನೆ

​ಮಂಜೇಶ್ವರ: ಮಂಜೇಶ್ವರ ಸರ್ಕಾರಿ ಹೋಮಿಯೋಪತಿ ಡಿಸ್ಪೆನ್ಸರಿಯಲ್ಲಿ ‘ಎನ್‌ಎಬಿಎಚ್’ ನ್ಯಾಷನಲ್ ಎಂಟ್ರಿ ಲೆವೆಲ್ ಸರ್ಟಿಫಿಕೇಶನ್ ಪಡೆಯುವ ನಿಟ್ಟಿನಲ್ಲಿ ಇನ್ಸ್‌ಪೆಕ್ಷನ್ (ಪರಿಶೀಲನೆ) ನಡೆಯಿತು. ​ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಗುಣಮಟ್ಟದ ಸೇವೆಯನ್ನು ಖಾತ್ರಿಪಡಿಸುವ ಈ ಮಹತ್ವದ ಪ್ರಕ್ರಿಯೆಯನ್ನು ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಬಶೀರ್ ಕನಿಲ ಅವರು ಉದ್ಘಾಟಿಸಿದರು. ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ರೆಹಮಾನ್ ಕಡಪ್ಪುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ​ ಈ ಸಂದರ್ಭದಲ್ಲಿ ಎನ್‌ಎಬಿಎಚ್‌ನ ನ್ಯಾಷನಲ್ ಅಸೆಸ್ಸರ್‌ ಆಗಿ ಆಗಮಿಸಿದ್ದ ಡಾ. ಜಿತಿನ್ ಕೆ. ನಾಯರ್ ಅವರು…

Read More

ಮಂಜೇಶ್ವರ ರೈಲು ನಿಲ್ದಾಣದಲ್ಲಿ ದುರಂತ: ಎರಡು ಗಂಟೆಯ ಅಂತರದಲ್ಲಿ ಇಬ್ಬರು ಸಾವು

​ಮಂಜೇಶ್ವರ: ಮಂಜೇಶ್ವರ ರೈಲು ನಿಲ್ದಾಣದ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಪ್ರತ್ಯೇಕ ರೈಲು ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಕೇವಲ ಎರಡು ಗಂಟೆಗಳ ಅಂತರದಲ್ಲಿ ಈ ಎರಡು ದುರ್ಘಟನೆಗಳು ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಂಗಳವಾರ ಸಂಜೆ ಸುಮಾರು 6:30ರ ಸುಮಾರಿಗೆ ಮೊಗ್ರಾಲ್ ನಿವಾಸಿ ಉಮೇಶನ್ ಎಂಬವರು ರೈಲು ಹಳಿಗಳ ಬಳಿ ಬಂದು, ರೈಲಿನ ಎದುರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದೇ ರೀತಿ, ರಾತ್ರಿ 8:50ರ ಸುಮಾರಿಗೆ ಮಂಜೇಶ್ವರ ಕೀರ್ತೇಶ್ವರ ನಿವಾಸಿ, 22 ವರ್ಷದ ಮನೀಶ್ ಎಂಬವರು ಹಳಿ…

Read More

ಪೊಸೋಟು ಪ್ರದೇಶದಲ್ಲಿ ಜಲಾವೃತ ಭೀತಿ; ಶಾಶ್ವತ ಪರಿಹಾರಕ್ಕೆ ಒತ್ತಾಯ: ಒಳಚರಂಡಿ ವ್ಯವಸ್ಥೆ ಇಲ್ಲದೆ ಮಳೆಗಾಲದಲ್ಲಿ ಮತ್ತೆ ಜಲಾವೃತ ಭೀತಿ

ಮಂಜೇಶ್ವರ : ನೂತನವಾಗಿ ಕಾಮಗಾರಿ ಪೂರ್ಣಗೊಂಡ ಷಟ್ಪಥ ರಸ್ತೆಯ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿರುವ ಗುತ್ತಿಗೆದಾರರ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕೆಲಸದ ವೈಖರಿಯಿಂದಾಗಿ ಸ್ಥಳೀಯ ನಿವಾಸಿಗಳು ಮತ್ತು ವಿದ್ಯಾರ್ಥಿಗಳು ಮತ್ತೊಮ್ಮೆ ಆತಂಕದ ದಿನಗಳನ್ನು ಎದುರಿಸುತ್ತಿದ್ದಾರೆ. ಮಳೆಗಾಲದ ಆರಂಭದಲ್ಲೇ ಸುರಿಯುತ್ತಿರುವ ಮಳೆಗೆ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ, ಪೊಸೋಟು ಮಲ್ಹರ್ ವಿದ್ಯಾಸಂಸ್ಥೆ ಮತ್ತು ಪರಿಸರದ ಮನೆಗಳು ಜಲಾವೃತವಾಗುವ ಭೀತಿಯಲ್ಲಿವೆ. ಪ್ರಮುಖ ಹೆದ್ದಾರಿ ಕಾಮಗಾರಿಯನ್ನು ನಿರ್ವಹಿಸುತ್ತಿರುವ ‘ಯುಲ್ ಸಿಸಿ’ ಕಂಪನಿಯು ರಸ್ತೆಯ ಇಕ್ಕೆಲಗಳಲ್ಲಿ ಮಳೆ ನೀರು ಸರಾಗವಾಗಿ…

Read More

ಕಾಸರಗೋಡು ಕನ್ನಡ ಗ್ರಾಮದಲ್ಲಿ 8ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ-2026

ನವೆಂಬರ್ 7 ಮತ್ತು 8ರಂದು ಕೇರಳ-ಕರ್ನಾಟಕ ಉತ್ಸವ, ಕನ್ನಡ ರಾಜ್ಯೋತ್ಸವ ಸಂಭ್ರಮ ಕಾಸರಗೋಡು, ಜೂನ್ 9: ಕೇರಳ ರಾಜ್ಯದ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ, ಕಾಸರಗೋಡು ಇದರ ನೇತೃತ್ವದಲ್ಲಿ 2026ರ ನವೆಂಬರ್ 7 ಮತ್ತು 8ರಂದು ಕಾಸರಗೋಡಿನ ಮೀಪುಗುರಿ-ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ಐತಿಹಾಸಿಕ 8ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ-2026, ಕೇರಳ-ಕರ್ನಾಟಕ ಉತ್ಸವ ಹಾಗೂ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವವನ್ನು ಆಯೋಜಿಸಲಾಗಿದೆ. ಕಳೆದ 36 ವರ್ಷಗಳಿಂದ…

Read More
error: Content is protected !!