ಬ್ಯಾಂಕ್ ಸೆಕ್ಯೂರಿಟಿ ನೌಕರನ ಹತ್ಯೆ; ಇಬ್ಬರು ಆರೋಪಿಗಳ ಬಂಧನ
ಮಂಜೇಶ್ವರ: ಕುಂಬಡಾಜೆ ಸೇವಾ ಸಹಕಾರಿ ಬ್ಯಾಂಕಿನ ಮಾರ್ಪನಡ್ಕ ಶಾಖೆಯ ಭದ್ರತಾ ಸಿಬ್ಬಂದಿ ಸುರೇಶ್ ಬಿ.ಕೆ. (45) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರಣ್ (30) ಮತ್ತು ಅಖಿಲೇಷ್ (25) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಭಾನುವಾರ ರಾತ್ರಿ ಬ್ಯಾಂಕ್ ಪರಿಸರದಲ್ಲಿ ಈ ಕೃತ್ಯ ನಡೆದಿತ್ತು. ಕುಂದ್ಲಾಜೆ ಮೈದಾನದಲ್ಲಿ ನಡೆದಿದ್ದ ಕ್ರಿಕೆಟ್ ಪಂದ್ಯಾಟದ ವೇಳೆ ಉಂಟಾದ ಸಣ್ಣ ಮಾತಿನ ಚಕಮಕಿಯೇ ಈ ಹತ್ಯೆಗೆ ಮೂಲ ಕಾರಣ ಎನ್ನಲಾಗಿದೆ. ಕೃತ್ಯದ ಬಳಿಕ ಬೈಕ್ ಬಿಟ್ಟು ಪರಾರಿಯಾಗಿದ್ದ ಆರೋಪಿಗಳು, ಏತಡ್ಕ…
