ಮಹಿಳಾ ಮೀಸಲಾತಿ ಮಸೂದೆ ವಿರೋಧದಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯ: ಕೆ. ರಂಜಿತ್ ಆರೋಪ
ಕಾಸರಗೋಡು: ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ವ್ಯಕ್ತಪಡಿಸುವ ಮೂಲಕ ದಕ್ಷಿಣ ಭಾರತದ ರಾಜ್ಯಗಳ ಜನತೆ ತಮ್ಮ ಹಕ್ಕಿನ ಪ್ರತಿನಿಧಿತ್ವವನ್ನು ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ. ರಂಜಿತ್ ಆರೋಪಿಸಿದರು. ಬಿಜೆಪಿ ಜಿಲ್ಲಾ ಸಮಿತಿ ವತಿಯಿಂದ ಹೊಸ ಬಸ್ ನಿಲ್ದಾಣದ ಬಳಿ ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ವಿರುದ್ಧ ಆಯೋಜಿಸಿದ್ದ ಪ್ರತಿಭಟನಾ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಸೂದೆ ಅಂಗೀಕಾರವಾಗಿದ್ದರೆ ಕೇರಳಕ್ಕೆ ಲೋಕಸಭೆಯಲ್ಲಿ 30 ಸ್ಥಾನಗಳು ದೊರೆಯಬಹುದಾಗಿತ್ತು. ಆದರೆ…
