ಕನಿಲ ಶ್ರೀ ಭಗವತೀ ಕ್ಷೇತ್ರದಲ್ಲಿ ಅದ್ದೂರಿಯಾಗಿ ನಡೆದ ಬ್ರಹ್ಮಕಲಶಾಭಿಷೇಕೋತ್ಸವ – ಭರಣಿ ಮಹೋತ್ಸವಕ್ಕೆ ಸಜ್ಜು
ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕೇಂದ್ರ ಕನಿಲ ಶ್ರೀ ಭಗವತೀ ಕ್ಷೇತ್ರದಲ್ಲಿ ಶ್ರೀ ಭಗವತೀ ಮಾತೆ ಹಾಗೂ ಪರಿವಾರ ದೈವಗಳ ಪುನರ್‌ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕೋತ್ಸವವು ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ನೆರವೇರಿತು.ಬಡಾಜೆ ಬೂಡು ಶ್ರೀ ಮಹಾಗಣಪತಿ ದೇವರ ಅನುಗ್ರಹದಿಂದ ಹಾಗೂ ಬ್ರಹ್ಮಶ್ರೀ ಬಡಾಜೆ ಗೋಪಾಲಕೃಷ್ಣ ತಂತ್ರಿ ಅವರ ದಿವ್ಯಹಸ್ತದಿಂದ, ಡಾ ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ಏಪ್ರಿಲ್ 18ರಿಂದ 23ರವರೆಗೆ ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವವು ಜರುಗಿತು ಏಪ್ರಿಲ್ 18ರಂದು ಹಸಿರು ಹೊರೆಕಾಣಿಕೆ…
