ಮಂಜೇಶ್ವರಾಧ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ
ಮಂಜೇಶ್ವರ: ಪವಿತ್ರ ರಮಝಾನ್ ತಿಂಗಳ ಉಪವಾಸ ವ್ರತಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಮಂಜೇಶ್ವರದ ಮುಸ್ಲಿಂ ಬಾಂಧವರು ಇಂದು ಭಕ್ತಿಭಾವ ಹಾಗೂ ಸಂಭ್ರಮದಿಂದ ಈದುಲ್ ಫಿತ್ರ್ ಹಬ್ಬವನ್ನು ಆಚರಿಸಿದರು. ತಾಲೂಕಿನಾದ್ಯಂತ ಜುಮಾ ಮಸೀದಿಗಳು ಹಾಗೂ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಧಾರ್ಮಿಕ ಪ್ರವಚನಗಳು ಮತ್ತು ಶುಭಾಶಯ ವಿನಿಮಯ ಕಾರ್ಯಕ್ರಮಗಳು ನಡೆದವು. ಹಬ್ಬದ ಅಂಗವಾಗಿ ನೆರೆಮನೆಯವರ ಹಾಗೂ ಬಂಧುಗಳ ಮನೆಗಳಿಗೆ ಭೇಟಿ ನೀಡಿ ಪರಸ್ಪರ ಸೌಹಾರ್ದತೆ ಪ್ರದರ್ಶಿಸಲಾಯಿತು. ಶುಕ್ರವಾರ ಮುಂಜಾನೆಯೇ ಹೊಸ ವಸ್ತ್ರ ಧರಿಸಿದ ಭಕ್ತಾದಿಗಳು ಉದ್ಯಾವರ ಜುಮಾ…
