ಸ್ತನ ಹಾಗೂ ಬಾಯಿ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣಾ ಶಿಬಿರ

ಉಪ್ಪಳ , ಮಾ.11: ಬೀಡಿ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗಾಗಿ ಸ್ತನ ಮತ್ತು ಬಾಯಿ ಕ್ಯಾನ್ಸರ್ ಜಾಗೃತಿ ಹಾಗೂ ತಪಾಸಣಾ ಶಿಬಿರವನ್ನು ಇಂದು ಬೇಕುರಿನಲ್ಲಿ ಆಯೋಜಿಸಲಾಯಿತು.ಬೇಕುರು ಸಮೀಪದ ಸುಬಾಶ್ ನಗರದಲ್ಲಿರುವ ಯುವಶಕ್ತಿ ಫ್ರೆಂಡ್ಸ್ ಸರ್ಕಲ್ ಲೈಬ್ರರಿಯಲ್ಲಿ ಮಧ್ಯಾಹ್ನ 1.30 ಕ್ಕೆ ಶಿಬಿರ ನಡೆಯಿತು.ಈ ಶಿಬಿರವನ್ನು ಬಿಡಬ್ಲ್ಯುಡಬ್ಲ್ಯುಎಫ್ (BWWF) ಡಿಸ್ಪೆನ್ಸರಿ ಮಂಜೇಶ್ವರ ಮತ್ತು ಎಲ್‌ಡಬ್ಲ್ಯುಒ ಕೇರಳಂ ವತಿಯಿಂದ, ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಡಾ. ನಿವೇದಾ ಬಿ.ಆರ್ (MBBS), ಎಂಎಸ್ ಜನರಲ್…

Read More

​ಪಿರಾರ ಮೂಲೆ: ಅಬೂಬಕ್ಕರ್ ಸಿದ್ದೀಖ್ ಮಸೀದಿ ಹಾಗೂ ನೂರುಲ್ ಹುದಾ ಮದ್ರಸ ಸಹಯೋಗದಲ್ಲಿ ಅದ್ದೂರಿ ಇಫ್ತಾರ್ ಸಂಗಮ

​ಮಂಜೇಶ್ವರ: ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂದೇಶ ಸಾರುವ ನಿಟ್ಟಿನಲ್ಲಿ, ಪಿರಾರ ಮೂಲೆಯ ಅಬೂಬಕ್ಕರ್ ಸಿದ್ದೀಖ್ ಜುಮಾ ಮಸೀದಿ ಹಾಗೂ ನೂರುಲ್ ಹುದಾ ಮದ್ರಸ ಗೌಸಿಯಾ ನಗರ ಇವುಗಳ ಜಂಟಿ ಆಶ್ರಯದಲ್ಲಿ ಸಾರ್ವಜನಿಕ ‘ಗ್ರ್ಯಾಂಡ್ ಇಪ್ತಾರ್ ಸಂಗಮ’ ಅತ್ಯಂತ ಯಶಸ್ವಿಯಾಗಿ ನಡೆಯಿತು. ​ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಂಜೇಶ್ವರ ಶಾಸಕ ಎ. ಕೆ. ಎಂ. ಅಶ್ರಫ್ ಅವರು ಮಾತನಾಡಿ, “ರಂಜಾನ್ ಮಾಸವು ತ್ಯಾಗ ಮತ್ತು ಸಮಾನತೆಯ ಸಂಕೇತವಾಗಿದೆ. ಇಂತಹ ಇಫ್ತಾರ್ ಕೂಟಗಳು ಸಮಾಜದಲ್ಲಿ ಪರಸ್ಪರ ಪ್ರೀತಿ ಮತ್ತು ವಿಶ್ವಾಸವನ್ನು…

Read More

ಕುಂಬಳೆ–ಮುಳ್ಳೇರಿಯಾ ಕೆಎಸ್‌ಟಿಪಿ ರಸ್ತೆಯಲ್ಲಿ ಭೀಕರ ಅಪಘಾತ: ಕಾರು–ಖಾಸಗಿ ಬಸ್ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

ಕಾಸರಗೋಡು: ಕುಂಬಳೆ–ಮುಳ್ಳೇರಿಯಾ ಕೆಎಸ್‌ಟಿಪಿ ರಸ್ತೆಯಲ್ಲಿ ಕಾರು ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಬಸ್ ಪ್ರಯಾಣಿಕರಲ್ಲೂ ಹಲವರಿಗೆ ಗಾಯಗಳಾಗಿವೆ.ಇಂದು ಬೆಳಗ್ಗೆ ಸುಮಾರು 8.30 ಗಂಟೆ ವೇಳೆಗೆ ಶಾಂತಿಪಳ್ಳದ ಎಕ್ಸೈಸ್ ಕಚೇರಿ ಸಮೀಪ ಈ ಅಪಘಾತ ಸಂಭವಿಸಿದೆ. ಬದಿಯಡ್ಕ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಕುಂಬಳೆಯ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಾಶಗೊಂಡಿದ್ದು, ಕಾರಿನೊಳಗಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕನ…

Read More

ಮಾ.28ರಂದು ತಾ| ಕಚೇರಿ ಮುಂಭಾಗ ಮಲಯಾಳ ಭಾಷಾ ಮಸೂದೆಯ ವಿರುದ್ಧ ಕನ್ನಡಿಗರ ಪ್ರತಿಭಟನೆ

ಕಾಸರಗೋಡು: ಕೇರಳ ಸರಕಾರದ ಮಲಯಾಳ ಭಾಷಾ ಮಸೂದೆಯನ್ನು ಪ್ರತಿಭಟಿಸಿ ಮಾ.28 ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ತಾಲೂಕು ಕಚೇರಿಯ ಮುಂಭಾಗದಲ್ಲಿ ಬೃಹತ್ ಧರಣಿ ಸತ್ಯಾಗ್ರಹ – ಪ್ರತಿಭಟನ ಸಭೆ ನಡೆಸಲು ಹಾಗೂ ಮಸೂದೆಯ ವಿರುದ್ಧ ಹೈಕೋರ್ಟ್‌ನಲ್ಲಿ ದಾವೆ ಹೂಡಲು ತೀರ್ಮಾನಿಸಲಾಗಿದೆ. ಕಾಸರಗೋಡಿನ ಕನ್ನಡ ಅಧ್ಯಾಪಕ ಭವನದಲ್ಲಿ ಕರ್ನಾ ಟಕ ಸಮಿತಿ ನೇತೃತ್ವದಲ್ಲಿ ಕಾಸರಗೋಡಿನ ಕನ್ನಡಿಗರ, ಅಧ್ಯಾಪಕರ, ವಿವಿಧ ಕನ್ನಡ ಪರ ಸಂಘಟನೆಗಳ ಪ್ರತಿನಿಧಿಗಳ ಸಮಾಲೋಚನಾ ಸಭೆಯಲ್ಲಿ ಪಂ. ಮಟ್ಟಗಳಲ್ಲೂ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.ಕರ್ನಾಟಕ ಸಮಿತಿ…

Read More

ಸಶಕ್ತ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು: ಶ್ರೀಕುಮಾರಿ ಟೀಚರ್

ಗುವೇದಪಡ್ಪು: ಪ್ರೇರಣಾ ಸಾರ್ವಜನಿಕ ಗ್ರಂಥಾಲಯ ಗುವೇದಪಡ್ಪು ಇದರ ನೇತೃತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ಅಧ್ಯಕ್ಷೆ ಶ್ರೀಕುಮಾರಿ ಟೀಚರ್ ಉದ್ಘಾಟಿಸಿ ಮಾತನಾಡಿ, ಸಶಕ್ತ ಹಾಗೂ ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುನ್ನಡೆಯುತ್ತಿದ್ದು, ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಮುಂದಕ್ಕೆ ಸಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು. ಗ್ರಂಥಾಲಯದ ಸದಸ್ಯೆ ಶ್ರೀಮತಿ ಸರಸ್ವತಿ ಕೊಣಿಬೈಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಂದ್ರಿಕಾ…

Read More

ಮಧ್ಯರಾತ್ರಿ ರಸ್ತೆಯಲ್ಲಿ ಕಾಡುಕೋಣ – ವಾಹನ ಸವಾರರಲ್ಲಿ ಆತಂಕ

​ಮಂಜೇಶ್ವರ: ಕುಂಬಳೆ-ಮುಳ್ಳೇರಿಯ ಕೆಎಸ್‌ಟಿಪಿ ರಸ್ತೆಯ ನೀರ್ಚಾಲು ಸಮೀಪದ ಕನ್ಯಪ್ಪಾಡಿಯಲ್ಲಿ ಸೋಮವಾರ ತಡರಾತ್ರಿ ಬೃಹತ್ ಗಾತ್ರದ ಕಾಡುಕೋಣವೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ತೀವ್ರ ಭೀತಿ ಮೂಡಿಸಿದೆ. ​ಸೋಮವಾರ ರಾತ್ರಿ ಸುಮಾರು 12 ಗಂಟೆಯ ವೇಳೆಗೆ ಕನ್ಯಪ್ಪಾಡಿಯ ಬಸ್ ತಂಗುದಾಣದ ಮುಂಭಾಗದಲ್ಲಿ ಈ ಕಾಡುಕೋಣ ದೀರ್ಘಕಾಲ ಬೀಡುಬಿಟ್ಟಿತ್ತು. ಈ ಮಾರ್ಗವಾಗಿ ಸಂಚರಿಸುತ್ತಿದ್ದ ವಾಹನ ಸವಾರರು ಅದರ ದೃಶ್ಯಗಳನ್ನು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಕೆಲ ದಿನಗಳ ಹಿಂದೆಯೂ ಇದೇ ಪ್ರದೇಶದಲ್ಲಿ ಕಾಡುಕೋಣ ಕಂಡಿರುವ ಬಗ್ಗೆ ಸುದ್ದಿಯಾಗಿತ್ತಾದರೂ, ಯಾವುದೇ ಆಧಾರವಿಲ್ಲದ ಕಾರಣ ಜನರು ಅದನ್ನು…

Read More

ಕಾಸರಗೋಡು ಬಿಜೆಪಿ ಕಾರ್ಯಾಗಾರ: ಚುನಾವಣಾ ಸಿದ್ಧತೆಗೆ ಕಾರ್ಯಕರ್ತರಿಗೆ ತರಬೇತಿ

ಕಾಸರಗೋಡು: ಚುನಾವಣಾ ಪೂರ್ವಭಾವಿ ಸಿದ್ಧತೆಗಳ ಅಂಗವಾಗಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಾಸರಗೋಡು ಮಂಡಲ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರಿಗೆ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮವು ಕಾಸರಗೋಡು ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಕಾಸರಗೋಡು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಕಾರ್ಯಕರ್ತರು ಸಂಘಟಿತವಾಗಿ ಕೆಲಸ ಮಾಡಬೇಕು ಎಂದು ಹೇಳಿದರು. ಬೂತ್ ಮಟ್ಟದಿಂದಲೇ ಪಕ್ಷದ ಸಂಘಟನೆಯನ್ನು ಬಲಪಡಿಸಿ ಜನಸಂಪರ್ಕವನ್ನು ಹೆಚ್ಚಿಸುವುದು ಅಗತ್ಯ ಎಂದು ಅವರು ತಿಳಿಸಿದರು. ಕಾರ್ಯಕ್ರಮದ…

Read More

ಕಾಸರಗೋಡು ಗೋ- ಕುಟೀರದ ನೀಲ ನಕ್ಷೆ (ಬ್ಲೂಪ್ರಿಂಟ್ )ರಚಿಸಿದ, ಖ್ಯಾತ ಕಲಾವಿದ ರಂಗ ನಿರ್ದೇಶಕ ಕಿರಣ್ ಕಲಾಂಜಲಿ ಕೂಡ್ಲು

ಕಾಸರಗೋಡು :- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ” ಕಟ್ಟಡದ ಸಮಗ್ರವಾದ ನೀಲ ನಕ್ಷೆ (ಬ್ಲೂಪ್ರಿಂಟ್) ಯನ್ನು ಖ್ಯಾತ ಕಲಾವಿದ, ರಂಗ ನಿರ್ದೇಶಕ, ಕಿರಣ್ ಕಲಾಂಜಲಿ ಕೂಡ್ಲು,ಕಾಸರಗೋಡು ಅವರು ರಚಿಸಿದ್ದಾರೆ. ಪ್ರಸ್ತುತ ಮಂಗಳೂರಿನಲ್ಲಿ ತನ್ನ ಕಲಾ ರಂಗಭೂಮಿ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೇರಳ- ಕರ್ನಾಟಕ ರಾಜ್ಯದಲ್ಲಿ ಕಲಾ, ರಂಗಭೂಮಿ ಕ್ಷೇತ್ರಗಳಲ್ಲಿ ಕಿರಣ್ ಕಲಾಂಜಲಿ ಕೂಡ್ಲು ತಮ್ಮ ಕಲಾ ಪ್ರಕಾರಗಳ ಮೂಲಕ ಗುರುತಿಸಿಕೊಂಡಿದ್ದಾರೆ.ಇವರು…

Read More

ಎಡನೀರು ಶ್ರೀ ಮಠದಲ್ಲಿ ಭವ್ಯವಾಗಿ ನಡೆದ “ವಿರಾಟ್ ಹಿಂದೂ ಸಂಗಮ”

ಎಡನೀರು: ಎಡನೀರು ಶ್ರೀ ಮಠದ ಪವಿತ್ರ ಪರಿಸರದಲ್ಲಿ ಮಾರ್ಚ್ 8ರಂದು ಭಾನುವಾರ “ವಿರಾಟ್ ಹಿಂದೂ ಸಂಗಮ” ಭಕ್ತಿ ಹಾಗೂ ಸಂಸ್ಕೃತಿಯ ಸಡಗರದಲ್ಲಿ ಭವ್ಯವಾಗಿ ನಡೆಯಿತು. ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ಜರುಗಿತು. ಮಧ್ಯಾಹ್ನ 2.30ಕ್ಕೆ ಚೆಂಗಳ ಪಂಚಾಯತ್ ವ್ಯಾಪ್ತಿಯ ವಿವಿಧ ಬಾಲಗೋಕುಲಗಳ ಮಕ್ಕಳಿಂದ ಕುಣಿತ ಭಜನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಹಿಳಾ ತಂಡಗಳಿಂದ ಕೈಕೊಟ್ಟಕಳಿ ಮತ್ತು ತಿರುವಾದಿರಕಳಿ ನೃತ್ಯ ಪ್ರದರ್ಶನಗಳು ಭಕ್ತರ ಗಮನ ಸೆಳೆದವು. ಸಂಜೆ 4 ಗಂಟೆಗೆ ಶ್ರೀ…

Read More

ಬಿಜೆಪಿ ಬದಿಯಡ್ಕ ಸಾಂಘಿಕ ಮಂಡಲ ಕಾರ್ಯಕರ್ತರ ಶಿಲ್ಪಶಾಲೆ ಉದ್ಘಾಟನೆ

ಬದಿಯಡ್ಕ: ಭಾರತೀಯ ಜನತಾ ಪಾರ್ಟಿ ಬದಿಯಡ್ಕ ಸಾಂಘಿಕ ಮಂಡಲದ ವತಿಯಿಂದ ಕಾರ್ಯಕರ್ತರ ಶಿಲ್ಪಶಾಲೆ ಮಾರ್ಪನಡ್ಕದ ಶ್ರೀ ಪಾಂಚಜನ್ಯ ಆಡಿಟೋರಿಯಂನಲ್ಲಿ ನಡೆಯಿತು. ಈ ಶಿಲ್ಪಶಾಲೆಯನ್ನು ಕಾಸರಗೋಡು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದು. ಗ್ರಾಮ ಮಟ್ಟದಿಂದಲೇ ಸಂಘಟನೆ ಬಲಿಷ್ಠವಾಗಬೇಕು. ಕಾರ್ಯಕರ್ತರು ಪಕ್ಷದ ತತ್ವ, ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು…

Read More
error: Content is protected !!