ಮನೆಗಳ್ಳತನ: 110 ಗ್ರಾಂ ಚಿನ್ನಾಭರಣ ಮತ್ತು ನಗದು ಕಳವು; ತನಿಖೆ ಚುರುಕು

ಮಂಜೇಶ್ವರ: ಮನೆಯವರು ದೇವಸ್ಥಾನದ ಭೇಟಿ ಮತ್ತು ಶಾಲಾ-ಕಾಲೇಜುಗಳಿಗೆ ತೆರಳಿದ್ದ ಸಮಯವನ್ನು ಬಳಸಿಕೊಂಡು, ಮನೆ ಬಾಗಿಲು ಮುರಿದು ಭಾರಿ ಕಳ್ಳತನ ನಡೆಸಿರುವ ಘಟನೆ ನಡೆದಿದೆ. ಪೈವಳಿಕೆ ಕುರುಡಪದವಿನ ಸುಬ್ರಾಯ ಸಾಯ ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದ್ದು, ಸುಮಾರು 110 ಗ್ರಾಂ ಚಿನ್ನಾಭರಣಗಳು ಹಾಗೂ 20,000 ರೂ. ನಗದು ಕಳವಾಗಿದೆ. ಈ ತಿಂಗಳ 9 ರಿಂದ 23ರ ನಡುವಿನ ಅವಧಿಯಲ್ಲಿ ಈ ಕಳ್ಳತನ ನಡೆದಿರಬಹುದು ಎಂದು ಶಂಕಿಸಲಾಗಿದೆ. ಸುಬ್ರಾಯ ಸಾಯ ಮತ್ತು ಅವರ ಪತ್ನಿ ಕರ್ನಾಟಕದ ಕುಕ್ಕೆ ಸುಬ್ರಹ್ಮಣ್ಯ…

Read More

ಕೇರಳದಲ್ಲಿ ವಿ.ಡಿ. ಸತೀಶನ್ ಪೊಲೀಸ್ ಕೂಡ ಪಿಣರಾಯಿ ಪೊಲೀಸರ ಹಾದಿಯಲ್ಲಿ: ಎಂ.ಎಲ್. ಅಶ್ವಿನಿ

ಕಾಸರಗೋಡು: ಕೇರಳದಲ್ಲಿ ಪ್ರಸ್ತುತ ವಿ.ಡಿ. ಸತೀಶನ್ ಅವರ ಪೊಲೀಸರು ಸಹ ಪಿಣರಾಯಿ ಪೊಲೀಸರ ಹಾದಿಯಲ್ಲೇ ಸಾಗುತ್ತಿದ್ದಾರೆ. ಧಾರ್ಮಿಕ ಉಗ್ರಗಾಮಿಗಳಿಗೆ, ಮಾವೋವಾದಿಗಳಿಗೆ ಮತ್ತು ಭಯೋತ್ಪಾದಕರಿಗೆ ಕೇರಳವು ಸುರಕ್ಷಿತ ತಾಣವಾಗಿ ಮಾರ್ಪಟ್ಟಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಹೇಳಿದ್ದಾರೆ. ಕರ್ನಾಟಕದ ಬಿಜೆಪಿ ಯುವಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೊಚ್ಚಿಯಿಂದ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆ ನಡೆದು ನಾಲ್ಕು ವರ್ಷಗಳು…

Read More

ಖಾಸಗಿ ಬಸ್ ಮಾಲಿಕರ ಸಂಕಷ್ಟ: ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆ

ಕಾಸರಗೋಡು : ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿರುವುದರಿಂದ ಖಾಸಗಿ ಬಸ್ ಮಾಲೀಕರು ಎದುರಿಸುತ್ತಿರುವ ನಷ್ಟದ ಬಗ್ಗೆ ಅಧ್ಯಯನ ನಡೆಸಲು ರಾಜ್ಯ ಸರ್ಕಾರವು ಮಾಜಿ ಸಾರಿಗೆ ಆಯುಕ್ತ ಕೆ. ಪದ್ಮಕುಮಾರ್ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ರಚಿಸಿದೆ. ​ತಿರುವನಂತಪುರದಲ್ಲಿ ಸಚಿವ ಸಿ.ಪಿ. ಜೋನ್ ಅವರು ಖಾಸಗಿ ಬಸ್ ಮಾಲೀಕರ ಸಂಘಟನೆಗಳೊಂದಿಗೆ ನಡೆಸಿದ ಸಭೆಯಲ್ಲಿ, ಬಸ್ ಮಾಲೀಕರ ಸಮಸ್ಯೆಗಳನ್ನು ಪರಿಹರಿಸಲು ಹಲವು ಕ್ರಮಗಳ ಭರವಸೆ ನೀಡಿದರು. ತೆರಿಗೆ ಪಾವತಿಯಲ್ಲಿ ಸರಳೀಕರಣ ಮತ್ತು ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅನುಮತಿ…

Read More

ಸರ್ಕಾರಿ ಪರೀಕ್ಷೆಯಲ್ಲಿ ಮೊಬೈಲ್ ಚೀಟಿಂಗ್; ಕೆಎಸ್‌ಇಬಿ ಸಿಬ್ಬಂದಿ ಅರೆಸ್ಟ್

​ಮಂಜೇಶ್ವರ: ಮಟ್ಟನ್ನೂರು ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಕೇರಳ ಸರ್ಕಾರಿ ಪ್ರಮಾಣಪತ್ರ ಪರೀಕ್ಷೆಯಲ್ಲಿ, ಮೊಬೈಲ್ ಫೋನ್ ಬಳಸಿ ನಕಲು ಮಾಡುತ್ತಿದ್ದ ಆರೋಪದಡಿ ಕೆಎಸ್‌ಇಬಿ ತಾತ್ಕಾಲಿಕ ನೌಕರ ಎಸ್. ಜನಾರ್ಧನ (34) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ಕುರುಡಪದವು ಸಾದಂಗಯ ನಿವಾಸಿಯಾದ ಈತ, ಖಾಯಂ ಉದ್ಯೋಗ ಪಡೆಯುವ ಉದ್ದೇಶದಿಂದ ಪರೀಕ್ಷೆಗೆ ಹಾಜರಾಗಿದ್ದನೆನ್ನಲಾಗಿದೆ. ​ಪರೀಕ್ಷಾ ಕೇಂದ್ರದ ಮೇಲ್ವಿಚಾರಕರ ದೂರಿನ ಮೇರೆಗೆ ಕೂತುಪರಂಬ ಎಸಿಪಿ ಸಿಬಿ ಟೋಮ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ತಾತ್ಕಾಲಿಕ ನೌಕರರ ವಾಟ್ಸಪ್ ಗ್ರೂಪ್‌ನ ಅಡ್ಮಿನ್ ಆಗಿರುವ ವಡಗರ ನಿವಾಸಿ ಸುರೇಶ್…

Read More

ಕಾಸರಗೋಡಿನಲ್ಲಿ ಭೀಕರ ಕಾರು ಅಪಘಾತ – ಏರ್‌ಬ್ಯಾಗ್‌ಗಳಿಂದ ಪ್ರಯಾಣಿಕರ ಜೀವ ಉಳಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಾಸರಗೋಡಿನಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಕಾರೊಂದು ಏಕಾಏಕಿ ನಿಯಂತ್ರಣ ತಪ್ಪಿ ಮೊದಲು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಹಲವು ಬಾರಿ ಉರುಳಿ ರಸ್ತೆಯ ಬದಿಯಲ್ಲಿ ನಿಂತಿದೆ. ಅಪಘಾತದ ತೀವ್ರತೆ ಭಾರೀ ಆಗಿದ್ದರೂ, ಕಾರಿನಲ್ಲಿದ್ದ ಏರ್‌ಬ್ಯಾಗ್‌ಗಳು ಕ್ಷಣಾರ್ಧದಲ್ಲಿ ತೆರೆದುಕೊಂಡ ಪರಿಣಾಮ ಒಳಗಿದ್ದ ಪ್ರಯಾಣಿಕರು ಗಂಭೀರ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಸಂಪೂರ್ಣ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಪಘಾತದ ಭೀಕರತೆ…

Read More

ತಳಕಲ್ ಜೂನಿಯರ್ ಕಾಲೇಜಿನ ಪ್ರಾಂಶುಪಾಲ ಡಾ. ಪಕ್ಕೀರಪ್ಪ ವಜ್ರಬಂಡಿಗೆ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026

ಕಾಸರಗೋಡು, ಜು.15:* ತಳಕಲ್ ಜೂನಿಯರ್ ಕಾಲೇಜಿನ ಪ್ರಾಂಶುಪಾಲರು, ಸಾಹಿತಿ ಹಾಗೂ ಕೃತಿಕರ್ತರಾದ ಡಾ. ಪಕ್ಕೀರಪ್ಪ ವಜ್ರಬಂಡಿ ಅವರಿಗೆ ಪ್ರತಿಷ್ಠಿತ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026” ಪ್ರದಾನ ಮಾಡಲಾಗುತ್ತಿದೆ. ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯಲಿರುವ “ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ” ಹಾಗೂ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ”ದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಸಾಹಿತ್ಯ, ಶಿಕ್ಷಣ ಹಾಗೂ ಕನ್ನಡ ನಾಡು-ನುಡಿ ಸೇವೆಯಲ್ಲಿ ಡಾ. ಪಕ್ಕೀರಪ್ಪ ವಜ್ರಬಂಡಿ ಸಲ್ಲಿಸಿರುವ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ…

Read More

ದಾರವಾಡದ ಸಂಜನಾ ಕುಲಿಗೋಡ ಅವರಿಗೆ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್’

ಕಾಸರಗೋಡು, ಜು. 15: ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ದಾರವಾಡ–ಹುಬ್ಬಳ್ಳಿಯ ಸಮಾಜ ಸೇವಾ ನಿರತೆ ಸಂಜನಾ ಕುಲಿಗೋಡ ಅವರಿಗೆ ಪ್ರತಿಷ್ಠಿತ ಅಂತರ್ ರಾಜ್ಯ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026’ ಘೋಷಿಸಲಾಗಿದೆ. ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ರಜತ ಸಂಭ್ರಮ ಸಮಾರೋಪದ ಅಂಗವಾಗಿ ನಡೆಯಲಿರುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ…

Read More

ಪ್ರಥಮ ಶ್ರೇಣಿಯ ನವ ಕವಯತ್ರಿ ರಮ್ಯ ರಘುಪತಿ ಕೊಕ್ಕಡ ಅವರಿಗೆ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026’

ಕಾಸರಗೋಡು, ಜು. 15: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಪ್ರಥಮ ಶ್ರೇಣಿಯ ನವ ಕವಯತ್ರಿ ರಮ್ಯ ರಘುಪತಿ ಕೊಕ್ಕಡ ಅವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026’ ಘೋಷಿಸಲಾಗಿದೆ. ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ರಜತ ಸಂಭ್ರಮ ಸಮಾರೋಪದ ಅಂಗವಾಗಿ ಆಯೋಜಿಸಲಾಗಿರುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಸಾಹಿತ್ಯ ಕ್ಷೇತ್ರದಲ್ಲಿ ರಮ್ಯ ರಘುಪತಿ ಕೊಕ್ಕಡ ಅವರು ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ಈ…

Read More

ದಕ್ಷಿಣ ಗೋವಾ ಕ.ಸಾ.ಪ. ಅಧ್ಯಕ್ಷ ಬಸವರಾಜ್ ಬನ್ನಿಕೊಪ್ಪಗೆ ‘ಕನ್ನಡ ಪಯಸ್ವಿನಿ’ ಅಂತರ್ ರಾಜ್ಯ ಪ್ರಶಸ್ತಿ-2026

ಕಾಸರಗೋಡು : ಸಾಹಿತ್ಯ, ಸಮಾಜಸೇವೆ ಹಾಗೂ ಸಂಘಟನಾ ಕ್ಷೇತ್ರದಲ್ಲಿನ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ, ದಕ್ಷಿಣ ಗೋವಾ ಕನ್ನಡ ಸಾಹಿತ್ಯ ಪರಿಷತ್ (ಕ.ಸಾ.ಪ.) ಅಧ್ಯಕ್ಷ ಶ್ರೀ ಬಸವರಾಜ್ ಬನ್ನಿಕೊಪ್ಪ ಅವರಿಗೆ ‘ಕನ್ನಡ ಪಯಸ್ವಿನಿ’ ಅಂತರ್ ರಾಜ್ಯ ಪ್ರಶಸ್ತಿ-2026 ಪ್ರದಾನ ಮಾಡಲಾಗುತ್ತಿದೆ. ಮೂಲತಃ ಕೊಪ್ಪಳ ಜಿಲ್ಲೆಯವರಾದ ಬಸವರಾಜ್ ಬನ್ನಿಕೊಪ್ಪ ಅವರು ಸಾಹಿತ್ಯ, ಸಮಾಜಸೇವೆ ಹಾಗೂ ಕನ್ನಡದ ಸಂಘಟನಾ ಚಟುವಟಿಕೆಗಳಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ, ಗಡಿನಾಡು ಕಾಸರಗೋಡಿನ ಪ್ರತಿಷ್ಠಿತ ಕನ್ನಡ ಸಂಸ್ಥೆಯಾದ ಕನ್ನಡ ಭವನ ಮತ್ತು ಗ್ರಂಥಾಲಯ ಈ ಗೌರವವನ್ನು…

Read More

​ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಜುಲೈ 16ರಂದು ‘ಸಮೃದ್ಧಿ-2026 ಉದ್ಯೋಗ ಮೇಳ

​ ಕಾಸರಗೋಡು/ಮಂಗಳೂರು: ನಗರದ ಗಾಂಧಿನಗರದಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಐಕ್ಯೂಎಸಿ ವತಿಯಿಂದ, ಕರಾವಳಿ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಮಂಗಳೂರು ಇವರ ಸಹಯೋಗದೊಂದಿಗೆ ಜುಲೈ 16, ಗುರುವಾರದಂದು ‘ಸಮೃದ್ಧಿ-2026’ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ​ಕಾಲೇಜು ಆವರಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ನಡೆಯಲಿದೆ. ಈ ಮೇಳವು ಉದ್ಯೋಗಾಕಾಂಕ್ಷಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆಯಾಗಿದ್ದು, ನೇರ ನೇಮಕಾತಿ, ಅರೆಕಾಲಿಕ ಉದ್ಯೋಗಗಳು, ಹಾಗೂ ಇಂಟರ್ನ್‌ಶಿಪ್‌ಗಳಂತಹ ವಿವಿಧ ಅವಕಾಶಗಳನ್ನು ಒಂದೇ ಸೂರಿನಡಿ ಅನ್ವೇಷಿಸಲು ಸಹಾಯ…

Read More
error: Content is protected !!