ವರ್ಕಾಡಿಯಲ್ಲಿ ಭಕ್ತಿಭಾವ ಹಾಗೂ ಸಂಭ್ರಮದಿಂದ ನಡೆದ ಗಣಪತಿ ಜಲಸ್ತಂಭನ ಶೋಭಾಯಾತ್ರೆ
ವರ್ಕಾಡಿ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ (ರಿ.), ಸುಂಕದಕಟ್ಟೆ, ವರ್ಕಾಡಿ ವತಿಯಿಂದ ಆಯೋಜಿಸಲಾಗಿದ್ದ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಗಣಪತಿ ಮೂರ್ತಿಯ ಜಲಸ್ತಂಭನ ಶೋಭಾಯಾತ್ರೆ ಭಕ್ತಿಭಾವ ಹಾಗೂ ಸಂಭ್ರಮದಿಂದ ನಡೆಯಿತು. ಮೂರು ದಿನಗಳ ಕಾಲ ನಡೆದ ಗಣೇಶೋತ್ಸವದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸೆಪ್ಟೆಂಬರ್ 14ರಂದು ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಗಣೇಶೋತ್ಸವಕ್ಕೆ ಚಾಲನೆ ನೀಡಲಾಗಿದ್ದು, ವಿಶೇಷ ಪೂಜೆ, ಭಜನೆ, ಅನ್ನಸಂತರ್ಪಣೆ ಸೇರಿದಂತೆ ಹಲವು ಕಾರ್ಯಕ್ರಮಗಳು ನೆರವೇರಿದವು. ಸ್ತಬ್ಧಚಿತ್ರ, ಹುಲಿವೇಷ ಕುಣಿತ ಹಾಗೂ ಕುಣಿತ ಭಜನೆ…
