ಅಡೂರಿನಲ್ಲಿ ಮಣ್ಣುಕುಸಿತ ದುರಂತ: ಇಬ್ಬರು ಬಾಲಕರ ಜೀವಬಲಿ
ಕಾಸರಗೋಡು, ಜೂನ್ 8: ಆದೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಡೂರು ಸಮೀಪದ ಸಂಚಕ್ಕಡವು ಪ್ರದೇಶದಲ್ಲಿ ಸಂಭವಿಸಿದ ಭೀಕರ ಮಣ್ಣುಕುಸಿತ ದುರಂತದಲ್ಲಿ ಇಬ್ಬರು ಬಾಲಕರು ಸಾವನ್ನಪ್ಪಿದ್ದು, ಮತ್ತೋರ್ವ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಸಾವನ್ನಪ್ಪಿದವರನ್ನು ಅಬೂಬಕ್ಕರ್ ಅವರ ಪುತ್ರರಾದ ಮುನ್ಸೀರ್ (10) ಹಾಗೂ ಮುಜಮ್ಮಿಲ್ (14) ಎಂದು ಗುರುತಿಸಲಾಗಿದೆ. ಗಾಯಗೊಂಡ ಬಾಲಕನನ್ನು ತಕ್ಷಣವೇ ಚೆಂಗಳ ಇಂದಿರಾನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇತ್ತೀಚೆಗೆ ಗೃಹಪ್ರವೇಶ ನಡೆದ ಮನೆಯ ಸಮೀಪ…