ಬಾಲಕಿಗೆ ಲೈಂಗಿಕ ಕಿರುಕುಳ: ಬಂಟ್ವಾಳದ ಯುವಕನ ಬಂಧನ
ಮಂಜೇಶ್ವರ: 11 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಟ್ವಾಳ ಮೂಲದ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಸಜಿಪಮೂಡು ನಿವಾಸಿ ಅಬ್ದುಲ್ ರಹಿಮಾನ್ (26) ಎಂದು ಗುರುತಿಸಲಾಗಿದೆ. ಕಳೆದ ಭಾನುವಾರ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಗೆ ಕಿರುಕುಳ ನೀಡಿದ್ದಾಗಿ ದೂರು ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಜೇಶ್ವರ ಸಿಐ ಜಿಜೀಶ್ ನೇತೃತ್ವದ ತಂಡ ತಲಪ್ಪಾಡಿ ಪ್ರದೇಶದಲ್ಲಿ…