ಕುಂಭಮೇಳ ವೈರಲ್ ಗರ್ಲ್ ಮೊನಾಲಿಸಾ ಮದುವೆ: ಕೇರಳದಲ್ಲಿ ಪ್ರೇಮ ವಿವಾಹ

ತಿರುವನಂತಪುರಂ: ಮಹಾಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿ ಮೊನಾಲಿಸಾ ಭೋಸ್ಲೆ ಮತ್ತೆ ಸುದ್ದಿಯಲ್ಲಿದ್ದು, ತಮ್ಮ ಪ್ರೇಮಿ ಫಾರ್ಮನ್ ಖಾನ್ ಅವರೊಂದಿಗೆ ಕೇರಳದಲ್ಲಿ ವಿವಾಹವಾಗಿದ್ದಾರೆ. ಮೊನಾಲಿಸಾ 2025ರ ಪ್ರಯಾಗರಾಜ್ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರಾಟ ಮಾಡುತ್ತಿದ್ದಾಗ ತೆಗೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಅವರು ಜನಪ್ರಿಯರಾಗಿದ್ದರು. ಇತ್ತೀಚೆಗೆ ಅವರು ಕೇರಳದ ತಿರುವನಂತಪುರಂ ಸಮೀಪದ ದೇವಸ್ಥಾನದಲ್ಲಿ ಫಾರ್ಮನ್ ಖಾನ್ ಜೊತೆ ಮದುವೆಯಾದರು. ಮದುವೆ ಕಾರ್ಯಕ್ರಮಕ್ಕೆ ಭಾರೀ ಜನಸ್ತೋಮ ಕೂಡ ಸೇರಿದ್ದರಿಂದ ಪೊಲೀಸರು ಭದ್ರತೆ ಒದಗಿಸಿದ್ದರು ಎಂದು ವರದಿಯಾಗಿದೆ. ಈ ಜೋಡಿ…

Read More

ಕಾರಿನಲ್ಲಿ ಸಾಗಿಸುತ್ತಿದ್ದ 103 ಲೀಟರ್ ಗೋವಾ ಮದ್ಯ ವಶ: ಕುಂಜತ್ತೂರು ನಿವಾಸಿ ಬಂಧನ

ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವಾ ಮೂಲದ ಮದ್ಯವನ್ನು ಕಾಸರಗೋಡು ಎಕ್ಸೈಸು ಅಧಿಕಾರಿಗಳು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ .ಕಾಸರಗೋಡು ರೇಂಜ್ ಎಕ್ಸೈಸ್ ತಂಡ ಹಾಗು ಕಾಸರಗೋಡು ಎಕ್ಸೈಸು ಇಂಟೆಲಿಜೆನ್ಸ್ ಬ್ಯೂರೋ ಸಂಯುಕ್ತವಾಗಿ ನಡೆಸಿದ ಪರಿಶೀಲನೆಯಲ್ಲಿ, ನೀರ್ಚಾಲ್ ಭಾಗದತ್ತ ಮದ್ಯ ಸಾಗಿಸುತ್ತಿದ್ದ KL 57 A 5775 ಸಂಖ್ಯೆಯ ಸ್ವಿಫ್ಟ್ ಕಾರನ್ನು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಕಾರಿನಲ್ಲಿ ಸಾಗಿಸುತ್ತಿದ್ದ 103.68 ಲೀಟರ್ ಗೋವಾ ಮೂಲದ ಅನ್ಯ ರಾಜ್ಯದ IMFL ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಮಂಜೇಶ್ವರಂ…

Read More

ಕಾಸರಗೋಡು: ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯದ ರಜತ ಮಹೋತ್ಸವ ಅಂಗವಾಗಿ ಸಾಹಿತ್ಯೋತ್ಸವ

ಕಾಸರಗೋಡು: ಕಾಸರಗೋಡು ಕನ್ನಡ ಗ್ರಾಮದಲ್ಲಿರುವ ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯದ ರಜತ ಮಹೋತ್ಸವ ವರ್ಷ (2000–2026) ಅಂಗವಾಗಿ “25 ಸರಣಿ ದತ್ತಿ ಉಪನ್ಯಾಸ ಮಾಲಿಕೆ” ಹಾಗೂ “ಕಾಸರಗೋಡು ಸಾಹಿತ್ಯೋತ್ಸವ – ಕನ್ನಡೋತ್ಸವ” ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಖಾಸಗಿ ನೆಲೆಯಲ್ಲಿ ಬೃಹತ್ ಕನ್ನಡ ಪುಸ್ತಕಗಳ ಸಂಗ್ರಹವನ್ನು ಹೊಂದಿರುವ ಈ ಗ್ರಂಥಾಲಯವು ಲೇಖಕರು, ಸಾಹಿತಿಗಳು, ಕವಿಗಳು, ಮಾಧ್ಯಮದವರು, ಶಿಕ್ಷಣ ತಜ್ಞರು, ಸಂಶೋಧಕರು ಮತ್ತು ಕಲಾವಿದರಿಗೆ ಅಧ್ಯಯನಕ್ಕೆ ಅಗತ್ಯವಾದ ವಿವಿಧ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಇತಿಹಾಸಕ್ಕೆ ಸಂಬಂಧಿಸಿದ…

Read More

ಕಣ್ವತೀರ್ಥದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಆಯುರ್ವೇದ ಚಿಕಿತ್ಸಾ ಶಿಬಿರ

ಬೆಂಗ್ರೆ ಕಣ್ವತೀರ್ಥ: ಶ್ರೀ ದೇವಿ ಕೃಪಾ ಫ್ರೆಂಡ್ಸ್ ಕ್ಲಬ್ (ರಿ) ಬೆಂಗ್ರೆ ಕಣ್ವತೀರ್ಥ, ಶ್ರೀ ಭಗವತಿ ಕೃಪಾ ಬಾಲಾಂಜನೇಯ ವ್ಯಾಯಾಮ ಶಾಲೆ (ರಿ) ಬೆಂಗ್ರೆ ಕಣ್ವತೀರ್ಥ, ಜಗದ್ಗುರು ಶ್ರೀ ನಿತ್ಯಾನಂದ ಮಹಾ ಪೀಠಮ್ ಚಾರಿಟೇಬಲ್ ಟ್ರಸ್ಟ್ (ರಿ) ಕೊಂಡೇವೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರಕ್ಕೆ ಒನ್ ಸೈಟ್ ಎಸ್ಪಿಲೋರ್ ಲಕೋಟಿಕಾ ಫೌಂಡೇಶನ್, ಬೆಂಗಳೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಮಂಗಳೂರು,…

Read More

ಸ್ತನ ಹಾಗೂ ಬಾಯಿ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣಾ ಶಿಬಿರ

ಉಪ್ಪಳ , ಮಾ.11: ಬೀಡಿ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗಾಗಿ ಸ್ತನ ಮತ್ತು ಬಾಯಿ ಕ್ಯಾನ್ಸರ್ ಜಾಗೃತಿ ಹಾಗೂ ತಪಾಸಣಾ ಶಿಬಿರವನ್ನು ಇಂದು ಬೇಕುರಿನಲ್ಲಿ ಆಯೋಜಿಸಲಾಯಿತು.ಬೇಕುರು ಸಮೀಪದ ಸುಬಾಶ್ ನಗರದಲ್ಲಿರುವ ಯುವಶಕ್ತಿ ಫ್ರೆಂಡ್ಸ್ ಸರ್ಕಲ್ ಲೈಬ್ರರಿಯಲ್ಲಿ ಮಧ್ಯಾಹ್ನ 1.30 ಕ್ಕೆ ಶಿಬಿರ ನಡೆಯಿತು.ಈ ಶಿಬಿರವನ್ನು ಬಿಡಬ್ಲ್ಯುಡಬ್ಲ್ಯುಎಫ್ (BWWF) ಡಿಸ್ಪೆನ್ಸರಿ ಮಂಜೇಶ್ವರ ಮತ್ತು ಎಲ್‌ಡಬ್ಲ್ಯುಒ ಕೇರಳಂ ವತಿಯಿಂದ, ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಡಾ. ನಿವೇದಾ ಬಿ.ಆರ್ (MBBS), ಎಂಎಸ್ ಜನರಲ್…

Read More

​ಪಿರಾರ ಮೂಲೆ: ಅಬೂಬಕ್ಕರ್ ಸಿದ್ದೀಖ್ ಮಸೀದಿ ಹಾಗೂ ನೂರುಲ್ ಹುದಾ ಮದ್ರಸ ಸಹಯೋಗದಲ್ಲಿ ಅದ್ದೂರಿ ಇಫ್ತಾರ್ ಸಂಗಮ

​ಮಂಜೇಶ್ವರ: ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂದೇಶ ಸಾರುವ ನಿಟ್ಟಿನಲ್ಲಿ, ಪಿರಾರ ಮೂಲೆಯ ಅಬೂಬಕ್ಕರ್ ಸಿದ್ದೀಖ್ ಜುಮಾ ಮಸೀದಿ ಹಾಗೂ ನೂರುಲ್ ಹುದಾ ಮದ್ರಸ ಗೌಸಿಯಾ ನಗರ ಇವುಗಳ ಜಂಟಿ ಆಶ್ರಯದಲ್ಲಿ ಸಾರ್ವಜನಿಕ ‘ಗ್ರ್ಯಾಂಡ್ ಇಪ್ತಾರ್ ಸಂಗಮ’ ಅತ್ಯಂತ ಯಶಸ್ವಿಯಾಗಿ ನಡೆಯಿತು. ​ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಂಜೇಶ್ವರ ಶಾಸಕ ಎ. ಕೆ. ಎಂ. ಅಶ್ರಫ್ ಅವರು ಮಾತನಾಡಿ, “ರಂಜಾನ್ ಮಾಸವು ತ್ಯಾಗ ಮತ್ತು ಸಮಾನತೆಯ ಸಂಕೇತವಾಗಿದೆ. ಇಂತಹ ಇಫ್ತಾರ್ ಕೂಟಗಳು ಸಮಾಜದಲ್ಲಿ ಪರಸ್ಪರ ಪ್ರೀತಿ ಮತ್ತು ವಿಶ್ವಾಸವನ್ನು…

Read More

ಕುಂಬಳೆ–ಮುಳ್ಳೇರಿಯಾ ಕೆಎಸ್‌ಟಿಪಿ ರಸ್ತೆಯಲ್ಲಿ ಭೀಕರ ಅಪಘಾತ: ಕಾರು–ಖಾಸಗಿ ಬಸ್ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

ಕಾಸರಗೋಡು: ಕುಂಬಳೆ–ಮುಳ್ಳೇರಿಯಾ ಕೆಎಸ್‌ಟಿಪಿ ರಸ್ತೆಯಲ್ಲಿ ಕಾರು ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಬಸ್ ಪ್ರಯಾಣಿಕರಲ್ಲೂ ಹಲವರಿಗೆ ಗಾಯಗಳಾಗಿವೆ.ಇಂದು ಬೆಳಗ್ಗೆ ಸುಮಾರು 8.30 ಗಂಟೆ ವೇಳೆಗೆ ಶಾಂತಿಪಳ್ಳದ ಎಕ್ಸೈಸ್ ಕಚೇರಿ ಸಮೀಪ ಈ ಅಪಘಾತ ಸಂಭವಿಸಿದೆ. ಬದಿಯಡ್ಕ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಕುಂಬಳೆಯ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಾಶಗೊಂಡಿದ್ದು, ಕಾರಿನೊಳಗಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕನ…

Read More

ಮಾ.28ರಂದು ತಾ| ಕಚೇರಿ ಮುಂಭಾಗ ಮಲಯಾಳ ಭಾಷಾ ಮಸೂದೆಯ ವಿರುದ್ಧ ಕನ್ನಡಿಗರ ಪ್ರತಿಭಟನೆ

ಕಾಸರಗೋಡು: ಕೇರಳ ಸರಕಾರದ ಮಲಯಾಳ ಭಾಷಾ ಮಸೂದೆಯನ್ನು ಪ್ರತಿಭಟಿಸಿ ಮಾ.28 ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ತಾಲೂಕು ಕಚೇರಿಯ ಮುಂಭಾಗದಲ್ಲಿ ಬೃಹತ್ ಧರಣಿ ಸತ್ಯಾಗ್ರಹ – ಪ್ರತಿಭಟನ ಸಭೆ ನಡೆಸಲು ಹಾಗೂ ಮಸೂದೆಯ ವಿರುದ್ಧ ಹೈಕೋರ್ಟ್‌ನಲ್ಲಿ ದಾವೆ ಹೂಡಲು ತೀರ್ಮಾನಿಸಲಾಗಿದೆ. ಕಾಸರಗೋಡಿನ ಕನ್ನಡ ಅಧ್ಯಾಪಕ ಭವನದಲ್ಲಿ ಕರ್ನಾ ಟಕ ಸಮಿತಿ ನೇತೃತ್ವದಲ್ಲಿ ಕಾಸರಗೋಡಿನ ಕನ್ನಡಿಗರ, ಅಧ್ಯಾಪಕರ, ವಿವಿಧ ಕನ್ನಡ ಪರ ಸಂಘಟನೆಗಳ ಪ್ರತಿನಿಧಿಗಳ ಸಮಾಲೋಚನಾ ಸಭೆಯಲ್ಲಿ ಪಂ. ಮಟ್ಟಗಳಲ್ಲೂ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.ಕರ್ನಾಟಕ ಸಮಿತಿ…

Read More

ಸಶಕ್ತ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು: ಶ್ರೀಕುಮಾರಿ ಟೀಚರ್

ಗುವೇದಪಡ್ಪು: ಪ್ರೇರಣಾ ಸಾರ್ವಜನಿಕ ಗ್ರಂಥಾಲಯ ಗುವೇದಪಡ್ಪು ಇದರ ನೇತೃತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ಅಧ್ಯಕ್ಷೆ ಶ್ರೀಕುಮಾರಿ ಟೀಚರ್ ಉದ್ಘಾಟಿಸಿ ಮಾತನಾಡಿ, ಸಶಕ್ತ ಹಾಗೂ ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುನ್ನಡೆಯುತ್ತಿದ್ದು, ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಮುಂದಕ್ಕೆ ಸಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು. ಗ್ರಂಥಾಲಯದ ಸದಸ್ಯೆ ಶ್ರೀಮತಿ ಸರಸ್ವತಿ ಕೊಣಿಬೈಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಂದ್ರಿಕಾ…

Read More

ಮಧ್ಯರಾತ್ರಿ ರಸ್ತೆಯಲ್ಲಿ ಕಾಡುಕೋಣ – ವಾಹನ ಸವಾರರಲ್ಲಿ ಆತಂಕ

​ಮಂಜೇಶ್ವರ: ಕುಂಬಳೆ-ಮುಳ್ಳೇರಿಯ ಕೆಎಸ್‌ಟಿಪಿ ರಸ್ತೆಯ ನೀರ್ಚಾಲು ಸಮೀಪದ ಕನ್ಯಪ್ಪಾಡಿಯಲ್ಲಿ ಸೋಮವಾರ ತಡರಾತ್ರಿ ಬೃಹತ್ ಗಾತ್ರದ ಕಾಡುಕೋಣವೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ತೀವ್ರ ಭೀತಿ ಮೂಡಿಸಿದೆ. ​ಸೋಮವಾರ ರಾತ್ರಿ ಸುಮಾರು 12 ಗಂಟೆಯ ವೇಳೆಗೆ ಕನ್ಯಪ್ಪಾಡಿಯ ಬಸ್ ತಂಗುದಾಣದ ಮುಂಭಾಗದಲ್ಲಿ ಈ ಕಾಡುಕೋಣ ದೀರ್ಘಕಾಲ ಬೀಡುಬಿಟ್ಟಿತ್ತು. ಈ ಮಾರ್ಗವಾಗಿ ಸಂಚರಿಸುತ್ತಿದ್ದ ವಾಹನ ಸವಾರರು ಅದರ ದೃಶ್ಯಗಳನ್ನು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಕೆಲ ದಿನಗಳ ಹಿಂದೆಯೂ ಇದೇ ಪ್ರದೇಶದಲ್ಲಿ ಕಾಡುಕೋಣ ಕಂಡಿರುವ ಬಗ್ಗೆ ಸುದ್ದಿಯಾಗಿತ್ತಾದರೂ, ಯಾವುದೇ ಆಧಾರವಿಲ್ಲದ ಕಾರಣ ಜನರು ಅದನ್ನು…

Read More
error: Content is protected !!