33 ಬೂತ್‌ಗಳಲ್ಲಿ ಕಳ್ಳಮತದಾನ ಯತ್ನ ಆರೋಪ: ಕೆ. ಸುರೇಂದ್ರನ್

ಮಂಜೇಶ್ವರ: ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಯುಡಿಎಫ್ ಹಾಗೂ ಮುಸ್ಲಿಂ ಲೀಗ್ ವ್ಯಾಪಕವಾಗಿ ಕಳ್ಳಮತದಾನಕ್ಕೆ ಯತ್ನಿಸುತ್ತಿವೆ ಎಂದು ಎನ್‌ಡಿಎ ಅಭ್ಯರ್ಥಿ ಕೆ. ಸುರೇಂದ್ರನ್ ಆರೋಪಿಸಿದ್ದಾರೆ. ಮಂಜೇಶ್ವರದಲ್ಲಿ ಮಾತನಾಡಿದ ಅವರು, ವಿದೇಶದಲ್ಲಿರುವ ಮತದಾರರ ಸ್ಲಿಪ್‌ಗಳನ್ನು ಸಂಗ್ರಹಿಸಿ ಕಳ್ಳಮತದಾನ ಮಾಡಲು ಯತ್ನ ನಡೆಯುತ್ತಿದೆ ಎಂದು ದೂರಿದರು. ಲೀಗ್‌ನ ಬಿಎಲ್‌ಒಗಳ ಮೂಲಕ ಈ ಸ್ಲಿಪ್‌ಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಆರೋಪಿಸಿದರು. ಮುಸ್ಲಿಂ ಲೀಗ್ ಪ್ರಭಾವವಿರುವ ಸುಮಾರು 33 ಬೂತ್‌ಗಳಲ್ಲಿ ಇಂತಹ ಯತ್ನ ನಡೆಯುತ್ತಿದ್ದು, ಮಹಿಳೆಯರನ್ನು ಬಳಸಿಕೊಂಡು ಕಳ್ಳಮತದಾನ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು….

Read More

“ಕಾಸರಗೋಡು ಗೋ- ಕುಟೀರ”ದ ನಿರ್ಮಾಣಕ್ಕೆ ಗೋ- ಭಕ್ತರು,ಗೋ- ಪೋಷಕರು ದಾನಿಗಳಿಂದ ಸಹಕಾರದ ನಿರೀಕ್ಷೆಯಲ್ಲಿ

ಕಾಸರಗೋಡು :- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ”ದ ಕಾಮಗಾರಿಗೆ ಗೋ- ಭಕ್ತರು, ಗೋ -ಪೋಷಕರು, ದಾನಿಗಳಿಂದ ಆರ್ಥಿಕ ಸಹಾಯ,ಸಹಕಾರ ಪ್ರೋತ್ಸಾಹವನ್ನು ನೀಡುವಂತೆ ಮನವಿ ಮಾಡಲಾಗಿದೆ.ದೇಸಿ ಗೋವುಗಳನ್ನು ಉಳಿಸಿ ಬೆಳೆಸುವುದಕ್ಕಾಗಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಸರಗೋಡು ಗೋ -ಕುಟೀರವನ್ನು ಜಗಜ್ಜನನಿ ಗೋಮಾತೆಯ ಆಶೀರ್ವಾದವನ್ನು ಪಡೆಯುವ ಉದ್ದೇಶದಿಂದ ಒಂದು ಧಾರ್ಮಿಕ ಶ್ರದ್ಧಾ ಕೇಂದ್ರವನ್ನಾಗಿ ರೂಪುಗೊಳಿಸುವುದಕ್ಕಾಗಿ ದೈವಾರ್ಷಿಕ ಕಾರ್ಯ ಯೋಜನೆಯನ್ನು…

Read More

ಮಂಜೇಶ್ವರದಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ: ಅಂತಿಮ ಹಂತಕ್ಕೆ ಚುನಾವಣೆ ಸಿದ್ಧತೆ

ಮಂಜೇಶ್ವರ:ವಿಧಾನಸಭಾ ಚುನಾವಣೆಯ ಅಬ್ಬರದ ಬಹಿರಂಗ ಪ್ರಚಾರಕ್ಕೆ ಮಂಗಳವಾರ ಸಂಜೆ 6 ಗಂಟೆಗೆ ಅಧಿಕೃತವಾಗಿ ತೆರೆ ಬಿದ್ದಿದೆ. ಇದರೊಂದಿಗೆ ಮಂಜೇಶ್ವರ ಕ್ಷೇತ್ರದಲ್ಲಿ ಕಳೆದ ಕೆಲವು ದಿನಗಳಿಂದ ಜೋರಾಗಿ ನಡೆದ ರೋಡ್ ಶೋಗಳು, ಸಾರ್ವಜನಿಕ ಸಭೆಗಳು ಹಾಗೂ ಮೈಕ್ ಅನೌನ್ಸ್‌ಮೆಂಟ್‌ಗಳು ಅಂತ್ಯಗೊಂಡಿವೆ. ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಿಸಿರುವ ಯುಡಿಎಫ್, ಎಲ್‌ಡಿಎಫ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಮಂಗಳವಾರ ಬೆಳಿಗ್ಗೆಯಿಂದಲೇ ಮತದಾರರನ್ನು ಸೆಳೆಯಲು ಅಂತಿಮ ಕಸರತ್ತು ನಡೆಸಿದರು.ಪ್ರಮುಖ ನಾಯಕರು ಮತ್ತು ಕಾರ್ಯಕರ್ತರ ದಂಡಿನೊಂದಿಗೆ ನಡೆದ ಈ ಅಂತಿಮ ಹಂತದ ಪ್ರಚಾರದಲ್ಲಿ ಅಭ್ಯರ್ಥಿಗಳು ತಮ್ಮ…

Read More

ಚುನಾವಣಾ ಸಿದ್ಧತೆ ಪರಿಶೀಲನೆ: ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಭೇಟಿ

ಮಂಜೇಶ್ವರ:ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅವರು ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಇವಿಎಂ ಮತ್ತು ವಿವಿಪ್ಯಾಟ್ ಭದ್ರತಾ ಕೊಠಡಿಗಳನ್ನು ಪರಿಶೀಲಿಸಿದ ಅವರು, ಭದ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ರಾಜ್ಯದ ಪ್ರಥಮ ಸಂಖ್ಯೆಯ ಬೂತ್ ಆಗಿರುವ ಕುಂಜತ್ತೂರು ಸರ್ಕಾರಿ ಶಾಲೆ ಹಾಗೂ ಸೂಕ್ಷ್ಮ ಮತಗಟ್ಟೆಗಳಾದ ಕಣ್ವತೀರ್ಥ, ಆಲಂಪಾಡಿ ಮತ್ತು ಚೆರ್ಕಳ ಶಾಲೆಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಅವಲೋಕಿಸಿದರು. ಭಾಷಾ ಅಲ್ಪಸಂಖ್ಯಾತ…

Read More

ಆದಿಶಕ್ತಿ ಶ್ರೀ ಮಹಮ್ಮಾಯಿ ದೇವಸ್ಥಾನ, ಪರಂಬಳ: ಮಹಮ್ಮಾಯಿ ದೇವಿಯ ವಾರ್ಷಿಕ ಮಹಾಪೂಜೆ ಹಾಗೂ ಗೋಂದೋಳು ಪೂಜೆ

ಮಂಜೇಶ್ವರ (ಕಯ್ಯಾರು):ಆದಿಶಕ್ತಿ ಶ್ರೀ ಮಹಮ್ಮಾಯಿ ದೇವಸ್ಥಾನ, ಪರಂಬಳ, ಕಯ್ಯಾರುವಿನಲ್ಲಿ ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಮಹಾಪೂಜೆ ಹಾಗೂ ಗೋಂದೋಳು ಪೂಜಾ ಮಹೋತ್ಸವವನ್ನು ಏಪ್ರಿಲ್ 9 ಮತ್ತು 10ರಂದು ಭಕ್ತಿಭಾವದಿಂದ ನಡೆಸಲು ನಿರ್ಧರಿಸಲಾಗಿದೆ. ಏಪ್ರಿಲ್ 9ರಂದು ಗಣಹೋಮ, ನಾಗಾರಾಧನೆ ಹಾಗೂ ಪರಿವಾರ ದೈವಗಳ ಆರಾಧನೆ ನಡೆಯಲಿದ್ದು, ಏಪ್ರಿಲ್ 10ರಂದು ಮಹಮ್ಮಾಯಿ ದೇವಿಯ ವಾರ್ಷಿಕ ಮಹಾಪೂಜೆ ಮತ್ತು ಗೋಂದೋಳು ಪೂಜಾ ಮಹೋತ್ಸವವು ವಿಧಿವತ್ತಾಗಿ ಜರುಗಲಿದೆ. ಈ ಮಹೋತ್ಸವವನ್ನು ಊರ ಮತ್ತು ಪರವೂರ ಸಮಾಜ ಬಾಂಧವರು ಹಾಗೂ ಭಕ್ತರ ಸಹಕಾರದೊಂದಿಗೆ ವರ್ಷಂಪ್ರತಿಯಂತೆ…

Read More

ಕಾಸರಗೋಡಿನಲ್ಲಿ ಎನ್‌ಡಿಎ ಭರ್ಜರಿ ರೋಡ್ ಶೋ: ಕಾರ್ಯಕರ್ತರಿಂದ ಉತ್ಸಾಹಭರಿತ ಮತಯಾಚನೆ

ಕಾಸರಗೋಡು:ನಗರವನ್ನು ಕಂಗೊಳಿಸುತ್ತಾ ಚುನಾವಣಾ ಪ್ರಚಾರಕ್ಕೆ ತೆರೆ ಎಳೆದಂತೆ, ಕಾಸರಗೋಡು ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಂ.ಎಲ್ ಅಶ್ವಿನಿ ಅವರ ಪರವಾಗಿ ಭರ್ಜರಿ ರೋಡ್ ಶೋ ಹಾಗೂ ಕೊಟ್ಟಿಕಲಾಶ ಕಾರ್ಯಕ್ರಮವು ಕಾರ್ಯಕರ್ತರ ಉತ್ಸಾಹಭರಿತ ಭಾಗವಹಿಸುವಿಕೆಯಿಂದ ನಡೆಯಿತು. ಕಾಸರಗೋಡು ತಾಳಿಪಡ್ಪು ಮೈದಾನದಿಂದ ಆರಂಭವಾದ ರೋಡ್ ಶೋನಲ್ಲಿ ಅಭ್ಯರ್ಥಿಯ ಪ್ಲಕಾರ್ಡ್‌ಗಳು ಹಾಗೂ ಪಕ್ಷದ ಧ್ವಜಗಳನ್ನು ಹಿಡಿದು ನೂರಾರು ಕಾರ್ಯಕರ್ತರು ಭಾಗವಹಿಸಿದರು. ಈ ರೋಡ್ ಶೋನಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪನ್‌ವೆಲ್ ಶಾಸಕ ಪ್ರಶಾಂತ್ ಠಾಕೂರ್, ಸಿನೆಮಾ…

Read More

ಸಂಧ್ಯಾರಾಣಿ ಟೀಚರ್ ಅವರಿಗೆ ‘ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ’ ಘೋಷಣೆ

ಕಾಸರಗೋಡು:ಗಡಿನಾಡು ಕಾಸರಗೋಡಿನ ಕನ್ನಡ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕನ್ನಡ ಭವನ ಸಮೂಹ ಸಂಸ್ಥೆಗಳ ಮುಖ್ಯಸ್ಥೆ ಶ್ರೀಮತಿ ಸಂಧ್ಯಾರಾಣಿ ಟೀಚರ್ ಅವರಿಗೆ 2026ನೇ ಸಾಲಿನ ‘ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ’ ಪ್ರದಾನ ಮಾಡಲು ನಿರ್ಧರಿಸಲಾಗಿದೆ. ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಶಿರೂರು ಮಠ ಹಾಗೂ ಮಂಗಳೂರಿನ ಕಥಾಬಿಂದು ಪ್ರಕಾಶನ ಮತ್ತು ಕಥಾಬಿಂದು ಸಾಹಿತ್ಯ ವೇದಿಕೆಯ ಆಶ್ರಯದಲ್ಲಿ ಏಪ್ರಿಲ್ 12ರಂದು ಉಡುಪಿಯ ರಾಜಾಂಗಣದಲ್ಲಿ ನಡೆಯಲಿರುವ ‘ಕಥಾಬಿಂದು ಸಾಹಿತ್ಯ ಸಮ್ಮೇಳನ 2026’ ಸಂದರ್ಭದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ಸಮ್ಮೇಳನವನ್ನು ಶಿರೂರು…

Read More

ಚುನಾವಣಾ ಜಾಗೃತಿಗೆ ಬಾಲಕಿಯ ವಿಶಿಷ್ಟ ಪ್ರಯತ್ನ: ಮತದಾನದ ಮಹತ್ವ ಸಾರಿದ ಸನ್ನಿಧಿ

ಬಂಟ್ವಾಳ/ಕಾಸರಗೋಡು:ಮತದಾರರನ್ನು ಚುನಾವಣಾ ಪ್ರಕ್ರಿಯೆಯ ಭಾಗವಾಗಿಸಲು ಹನ್ನೊಂದು ವರ್ಷದ ಬಾಲಕಿ ಸನ್ನಿಧಿ ಕಶೆಕೋಡಿ ವಿಶಿಷ್ಟ ಜಾಗೃತಿ ಮೂಡಿಸುತ್ತಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ಪಡೆಯುತ್ತಿದ್ದಾರೆ. ಮಂಗಳೂರು ಬಂಟ್ವಾಳ ಮೂಲದ ಸನ್ನಿಧಿ, ಮಂಜೇಶ್ವರ ಹಾಗೂ ಕಾಸರಗೋಡು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಂಚರಿಸಿ ಮತದಾನದ ಮಹತ್ವವನ್ನು ಜನಸಾಮಾನ್ಯರಿಗೆ ತಿಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಐದು ಭಾಷೆಗಳಲ್ಲಿ ಮಾತನಾಡುವ ಸಾಮರ್ಥ್ಯ ಹೊಂದಿರುವ ಈ ಬಾಲಕಿ, ದೆಹಲಿ, ಗೋವಾ, ಕೇರಳ ಹಾಗೂ ಕರ್ನಾಟಕ ರಾಜ್ಯಗಳಲ್ಲಿಯೂ ಇದೇ ರೀತಿಯ ಜಾಗೃತಿ ಕಾರ್ಯ ನಡೆಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇಂದು ಕಾಸರಗೋಡು ಜಿಲ್ಲಾ…

Read More

ಶಬರಿಮಲೆ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ವಿಚಾರಣೆ ಆರಂಭ

ಹೊಸದಿಲ್ಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಗಳ ಅಂತಿಮ ವಿಚಾರಣೆ ಮಂಗಳವಾರ ಸುಪ್ರೀಂ ಕೋರ್ಟ್ನಲ್ಲಿ ಆರಂಭವಾಯಿತು. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಒಂಬತ್ತು ನ್ಯಾಯಾಧೀಶರ ಸಂವಿಧಾನ ಪೀಠವು ಈ ಮಹತ್ವದ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಂಡಿದೆ. ವಿಚಾರಣೆಯ ಮೊದಲ ದಿನ ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಧಾರ್ಮಿಕ ನಂಬಿಕೆಗಳು ಮತ್ತು ಸಂಪ್ರದಾಯಗಳ ಪರವಾಗಿ ವಾದ ಮಂಡಿಸಿದರು. “ಭಾರತದಂತಹ…

Read More

ಪೆರ್ಲ ಪೇಟೆಯಲ್ಲಿ ಬಿಜೆಪಿ ಭರ್ಜರಿ ರೋಡ್ ಶೋ: ಕೆ. ಸುರೇಂದ್ರನ್ ಪರ ಅಣ್ಣಾಮಲೈ ಪ್ರಚಾರ

ಪೆರ್ಲ (ಮಂಜೇಶ್ವರ):ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರ ಬಹಿರಂಗ ಪ್ರಚಾರದ ಅಂತಿಮ ದಿನದ ಅಂಗವಾಗಿ ಇಂದು ಬೆಳಿಗ್ಗೆ 10 ಗಂಟೆಗೆ ಪೆರ್ಲ ಪೇಟೆಯಲ್ಲಿ ಭರ್ಜರಿ ರೋಡ್ ಶೋ ನಡೆಯಿತು. ಶ್ರೀಮಾತಾ ಆರ್ಕೇಡ್ ಚೆಕ್ ಪೋಸ್ಟ್ ಪ್ರದೇಶದಿಂದ ಆರಂಭವಾದ ಮೆರವಣಿಗೆ ಪೆರ್ಲದ ಪ್ರಮುಖ ರಾಜ ರಸ್ತೆಗಳಲ್ಲಿ ಸಂಚರಿಸಿ ಗಮನ ಸೆಳೆಯಿತು. ಈ ರೋಡ್ ಶೋಗೆ ಮುಖ್ಯ ಅತಿಥಿಯಾಗಿ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ನಾಯಕ ಕೆ. ಅಣ್ಣಾಮಲೈ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಣ್ಣಾಮಲೈ, ಬಿಜೆಪಿ ಅಭ್ಯರ್ಥಿ…

Read More
error: Content is protected !!