ಜೂನ್ 7ರಂದು ಸುಂಕದಕಟ್ಟೆಯಲ್ಲಿ ಬಿಎಂಎಸ್ ವರ್ಕಾಡಿ ಪಂಚಾಯತ್ ಸಮ್ಮೇಳನ
ಉಪ್ಪಳ, ಜೂ. 6:ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ವರ್ಕಾಡಿ ಪಂಚಾಯತ್ ಸಮಿತಿಯ ವತಿಯಿಂದ ಜೂನ್ 7ರಂದು ಆದಿತ್ಯವಾರ ಸಂಜೆ 3 ಗಂಟೆಗೆ ಸುಂಕದಕಟ್ಟೆಯ ಬಿ.ಜೆ.ಪಿ. ಕಾರ್ಯಾಲಯದಲ್ಲಿ ಪಂಚಾಯತ್ ಸಮ್ಮೇಳನ ನಡೆಯಲಿದೆ. ಈ ಕುರಿತು ಸಂಘದ ಅಧ್ಯಕ್ಷೆ ವನಿತಾ ಜೆ. ನಾಯಕ್ ಹಾಗೂ ಕಾರ್ಯದರ್ಶಿ ರವೀಂದ್ರ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. “ಶ್ರಮವೇ ಆರಾಧನೆ” ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಮಜ್ದೂರ್ ಸಂಘವು ಕಾರ್ಮಿಕರು ತಮ್ಮ ಕರ್ತವ್ಯವನ್ನು ರಾಷ್ಟ್ರಸೇವೆಯೆಂದು ಭಾವಿಸಿ ಕಾರ್ಯನಿರ್ವಹಿಸುವ ಮನೋಭಾವ ಬೆಳೆಸುವ ಉದ್ದೇಶ ಹೊಂದಿದೆ. ಕಾರ್ಮಿಕರು, ಮಾಲಕರು…