ಅನಂತಪುರ ಕೈಗಾರಿಕಾ ಪಾರ್ಕ್ ದುರ್ವಾಸನೆ ವಿರುದ್ಧ ಜನರ ಆಕ್ರೋಶ: ಜೂನ್ 8ರಂದು ಪ್ರತಿಭಟನೆ
ಕುಂಬಳೆ, ಜೂನ್ 4: ಅನಂತಪುರ ಕೈಗಾರಿಕಾ ಪಾರ್ಕ್‌ನ ಕಾರ್ಖಾನೆಗಳಿಂದ ಹೊರಹೊಮ್ಮುತ್ತಿರುವ ದುರ್ವಾಸನೆಯನ್ನು ತಕ್ಷಣ ನಿಯಂತ್ರಿಸಲು ಸಂಬಂಧಿತ ಅಧಿಕಾರಿಗಳು ಮಧ್ಯಪ್ರವೇಶಿಸಬೇಕು ಹಾಗೂ ಮಾನವ ಜೀವ ಮತ್ತು ಆಸ್ತಿಗೆ ಅಪಾಯಕಾರಿಯಾಗಿರುವ ಕೈಗಾರಿಕೆಗಳನ್ನು ಮುಚ್ಚಬೇಕು ಎಂದು ಹೋರಾಟ ಸಮಿತಿ ಒತ್ತಾಯಿಸಿದೆ. ಕುಂಬಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಪದಾಧಿಕಾರಿಗಳು, ಅನಂತಪುರ ಕೈಗಾರಿಕಾ ಪಾರ್ಕ್‌ನಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯದಿಂದ ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು. ಹೊಸದಾಗಿ ಆರಂಭಗೊಳ್ಳಲಿರುವ ಕೈಗಾರಿಕೆಗಳಿಗೆ ಅನುಮತಿ ನೀಡಬಾರದು. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಾಲಿನ್ಯಯುಕ್ತ…