ಮಂಪಾಡ್ ಕಾಲೇಜು ಶಿಕ್ಷಕ ಸೇರಿರುವ ಎಂಡಿಎಂಎ ಪ್ರಕರಣ: ಮತ್ತೆ ಮಾದಕ ವಸ್ತು ಪತ್ತೆ

ಮಲಪ್ಪುರಂ : ಮಂಪಾಡ್ ಎಂಇಎಸ್ ಕಾಲೇಜಿನ ಅಧ್ಯಾಪಕರೊಬ್ಬರು ಸೇರಿದಂತೆ ನಾಲ್ವರು ಆರೋಪಿಗಳ ಬಂಧನಕ್ಕೆ ಕಾರಣವಾದ ಎಂಡಿಎಂಎ ಪ್ರಕರಣದಲ್ಲಿ ಪೊಲೀಸರು ಮತ್ತೆ ಮಾದಕ ವಸ್ತುವನ್ನು ಪತ್ತೆಹಚ್ಚಿದ್ದಾರೆ. ಬಂಧಿತ ರೀನಾ ಅವರ ಮನೆಗೆ ತೆರಳಿದ ಪೊಲೀಸರು, ಗೋಡೆಗೆ ಡಿಕ್ಕಿ ಹೊಡೆದ ಸ್ಥಿತಿಯಲ್ಲಿದ್ದ ಕಾರಿನಲ್ಲಿ ಎಂಡಿಎಂಎ ಪತ್ತೆ ಮಾಡಿದ್ದಾರೆ. ಮಂಪಾಡ್ ಎಂಇಎಸ್ ಕಾಲೇಜಿನ ಅಧ್ಯಾಪಕ ಸುಹೈಲ್ ಪೆರಿಂಗೋಡನ್ ಹಾಗೂ ಅವರ ಮೂವರು ಸ್ನೇಹಿತರಾದ ರೀನಾ ಟಿ.ಎನ್., ವಿವೇಕ್ ವಿಜಯನ್ ಮತ್ತು ಸುಬ್ರಹ್ಮಣ್ಯನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಿಲಂಬೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ…

Read More

ಮನೆಯಲ್ಲೇ 67 ಲೀಟರ್ ಮದ್ಯ ಸಂಗ್ರಹ ಪ್ರಕರಣ: ಆಂಟೋ ಅಗಸ್ಟಿನ್ ಜಾಮೀನು ಅರ್ಜಿ ಹೈಕೋರ್ಟ್‌ಗೆ

ಕಲ್ಪೆಟ್ಟ:ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಮನೆಯಲ್ಲಿ ಮದ್ಯ ಸಂಗ್ರಹಿಸಿದ್ದ ಪ್ರಕರಣದಲ್ಲಿ ಬತ್ತೇರಿ ಜುಡಿಷಿಯಲ್ ಫಸ್ಟ್ ಕ್ಲಾಸ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಆಂಟೋ ಅಗಸ್ಟಿನ್ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣದ ಮುಂದಿನ ಕ್ರಮಗಳನ್ನು ತಡೆಹಿಡಿಯುವಂತೆಯೂ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಮುಂದಿನ ತನಿಖೆಗೆ ತಮ್ಮ ಕಸ್ಟಡಿ ಅಗತ್ಯವಿಲ್ಲ ಎಂದು ಆಂಟೋ ಅರ್ಜಿಯಲ್ಲಿ ತಿಳಿಸಿದ್ದಾರೆ. ಬಂಧನ ಪ್ರಕ್ರಿಯೆಯಲ್ಲಿ ಲೋಪಗಳಾಗಿವೆ ಎಂದೂ ಅವರು ಆರೋಪಿಸಿದ್ದಾರೆ. ಮನೆಯಲ್ಲಿ ಸಂಗ್ರಹಿಸಿದ್ದ ಮದ್ಯವನ್ನು ಮಾರಾಟಕ್ಕಾಗಿ ಇಟ್ಟಿರಲಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ. ಅರ್ಜಿಯನ್ನು…

Read More

ಮಂಜೇಶ್ವರ ಬ್ಲಾಕ್ ಪಂ.ನಲ್ಲಿ ಏಕದಿನ ತರಬೇತಿ ಶಿಬಿರ

ಮಂಜೇಶ್ವರ ಉದ್ಯೋಗಕ್ಕಾಗಿ ಅಲೆದಾಡುವ ಬದಲು ಉದ್ಯೋಗ ಸೃಷ್ಟಿಸುವ ಉದ್ಯಮಗಳಿಗೆ ಯುವಕರು ಮೊದಲ ಆದ್ಯತೆ ನೀಡಬೇಕೆಂಬ ಉದ್ದೇಶದೊಂದಿಗೆ ಅದೇ ರೀತಿ ವಿವಿಧ ಕ್ಷೇತ್ರಗಳಲ್ಲಿ ಹೊಸ ಉದ್ಯಮಗಳನ್ನು ಆರಂಭಿಸಲು ಆಸಕ್ತಿ ಹೊಂದಿರುವವರಿಗೂ, ಈಗಾಗಲೇ ನಡೆಸುತ್ತಿರುವ ಉದ್ಯಮಗಳನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸುತ್ತಿರುವವರಿಗೂ ಸರ್ಕಾರದಿಂದ ಲಭ್ಯವಾಗುವ ವಿವಿಧ ಆರ್ಥಿಕ ನೆರವುಗಳು, ಸಾಲಗಳು, ಸಬ್ಸಿಡಿಗಳು ಹಾಗೂ ಇತರ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ನೀಡಲು ಮಂಜೇಶ್ವರ ಬ್ಲಾಕ್ ಪಂಚಾಯತ್ ವತಿಯಿಂದ ಏಕದಿನ ತರಬೇತಿ ಶಿಬಿರ ಆಯೋಜಿಸಲಾಯಿತು. ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಹನೀಫ್ ಕುಚ್ಚಿಕ್ಕಾಡ್ ರವರ…

Read More

ಆಸ್ಪತ್ರೆಯಲ್ಲಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಆರೋಗ್ಯ ವಿಚಾರಿಸಿದ ಸಚಿವ ಯು.ಟಿ. ಖಾದರ್

ಬೆಂಗಳೂರು, ಸೆ. 18: ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಟರ್ ಸಿಎಂಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬುಧವಾರ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಯು.ಟಿ….

Read More

ಸೂರಂಬೈಲು ಸರ್ಕಾರಿ ಪ್ರೌಢಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳ ಸಂಗಮ

ಸೂರಂಬೈಲು: ಸರ್ಕಾರಿ ಪ್ರೌಢಶಾಲೆ ಸೂರಂಬೈಲು ವತಿಯಿಂದ ಹಳೇ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ‘ಹಳೇ ವಿದ್ಯಾರ್ಥಿ ಸಂಗಮ’ ಹೆಸರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಿ ತಮ್ಮ ಶಾಲಾ ದಿನಗಳ ನೆನಪುಗಳನ್ನು ಮೆಲುಕು ಹಾಕಲಿದ್ದಾರೆ. ಜೊತೆಗೆ ಶಾಲೆಯೊಂದಿಗೆ ತಮ್ಮ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 20ರಂದು ಆದಿತ್ಯವಾರ ಮಧ್ಯಾಹ್ನ 3 ಗಂಟೆಗೆ ಶಾಲಾ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು…

Read More

ಉದ್ಯಾವರ ಸರ್ಕಾರಿ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

ಉದ್ಯಾವರ: ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಉದ್ಯಾವರ್ ಸರ್ಕಾರಿ ಪ್ರೌಢಶಾಲೆಯ 2026–27ನೇ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಉತ್ಸಾಹಭರಿತ ಚಾಲನೆ ದೊರೆಯಿತು. ಸೆಪ್ಟೆಂಬರ್ 18 ಮತ್ತು 19ರಂದು ನಡೆಯಲಿರುವ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡಾ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಶುಕ್ರವಾರ ಬೆಳಿಗ್ಗೆ 9.30ಕ್ಕೆ ಶಾಲಾ ಆವರಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶೀಬಾ ಬಿ. ಕ್ರೀಡಾಕೂಟವನ್ನು ಉದ್ಘಾಟಿಸಿದರು. PTA ಅಧ್ಯಕ್ಷ ರಹೀಂ ಪುಚ್ಚತ್ತ್‌ವಯಲ್ ಅಧ್ಯಕ್ಷತೆ ವಹಿಸಿದ್ದರು. ಕ್ರೀಡಾ ಕಾರ್ಯದರ್ಶಿ ಜಯರಾಜ್ ಸರ್ ಸ್ವಾಗತಿಸಿದರು….

Read More

ಶ್ರೀಮತಿ ಪುಷ್ಪ ಪ್ರಸಾದ್ ಉಡುಪಿಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ -2026.ಕ್ಕೆ ಆಯ್ಕೆ

ಕಾಸರಗೋಡು : 11.10.2026 ಭಾನುವಾರದಿಂದ 20.10.2026ರ ವರೆಗೆ ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಸಾರಥ್ಯದಲ್ಲಿ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ನಡೆಯಲಿರುವ “ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ “2026.ರ ಅಂಗವಾಗಿ 18.10.2026 ಭಾನುವಾರ ಬೆಳಿಗ್ಗಿನ 11 ಗಂಟೆಯಿಂದ ಉದ್ಘಾಟನೆ ಗೊಳ್ಳುವ “ಕಾಸರಗೋಡು ದಸರಾ ಕವಿ ಸಮ್ಮೇಳನ “ದಲ್ಲಿ ಶ್ರೀಮತಿ ಪುಷ್ಪ ಪ್ರಸಾದ್ ಉಡುಪಿ ಇವರೀಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ಪ್ರಶಸ್ತಿ “ನೀಡಿ ಗೌರವಿಸಲಾಗುವದು. ಸಾಹಿತ್ಯ ಸಂಘಟಕ, ಬಿ. ಶ್ರೀನಿವಾಸ್…

Read More

ಗಣೇಶೋತ್ಸವ ಮೆರವಣಿಗೆಗೆ ಆಟೋ ಚಾಲಕರಿಂದ ತಂಪು ಪಾನೀಯ ಸೇವೆ

ಮಂಜೇಶ್ವರ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಮಂಜೇಶ್ವರ ಇದರ 46ನೇ ವರ್ಷದ ಗಣೇಶೋತ್ಸವದ ಜಲಸ್ಥಂಭನ ಮೆರವಣಿಗೆ ಮಂಜೇಶ್ವರ ತಲುಪಿದ ಸಂದರ್ಭದಲ್ಲಿ ಮಾನವೀಯತೆ ಹಾಗೂ ಸೌಹಾರ್ದತೆಗೆ ಸಾಕ್ಷಿಯಾದ ಘಟನೆ ನಡೆಯಿತು. ಮಂಜೇಶ್ವರ ರೈಲ್ವೆ ನಿಲ್ದಾಣದ ಸಮೀಪದ ಆಟೋ ಚಾಲಕರ ಸಂಘದ ವತಿಯಿಂದ ಮೆರವಣಿಗೆಯಲ್ಲಿ ಭಾಗವಹಿಸಿದ ಎಲ್ಲರಿಗೂ ತಂಪು ಪಾನೀಯ ವಿತರಿಸಲಾಯಿತು. ಸುಮಾರು 2 ಸಾವಿರಕ್ಕೂ ಅಧಿಕ ಗ್ಲಾಸ್ ಪಾನೀಯ ವಿತರಿಸಿ ಆಟೋ ಚಾಲಕರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು. ಮೆರವಣಿಗೆಯಲ್ಲಿ ಪಾಲ್ಗೊಂಡ ಭಕ್ತರು ಹಾಗೂ ಸಾರ್ವಜನಿಕರಿಗೆ ಯಾವುದೇ ಭೇದಭಾವವಿಲ್ಲದೆ ಪಾನೀಯ ವಿತರಿಸುವ…

Read More

ಖ್ಯಾತ ಸಾಹಿತಿ, ಕವಿ ಸತ್ಯವತಿ ಭಟ್ ಕೊಳಚಪ್ಪು ದಕ್ಷಿಣ ಕನ್ನಡ ಜಿಲ್ಲೆ ಇವರೀಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ -2026.ಕ್ಕೆ ಆಯ್ಕೆ

ಕಾಸರಗೋಡು: ದಕ್ಷಿಣ ಕನ್ನಡ ಜಿಲ್ಲೆಯ ಖ್ಯಾತ ಸಾಹಿತಿ ಹಾಗೂ ಕವಿ ಸತ್ಯವತಿ ಭಟ್ ಕೊಳಚಪ್ಪು ಅವರಿಗೆ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ–2026’ ನೀಡಿ ಗೌರವಿಸಲು ಆಯ್ಕೆ ಮಾಡಲಾಗಿದೆ. ಅಕ್ಟೋಬರ್ 11ರಿಂದ 20ರವರೆಗೆ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ‘ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026’ ನಡೆಯಲಿದೆ. ಉತ್ಸವದ ಅಂಗವಾಗಿ ಅಕ್ಟೋಬರ್ 18ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾಸರಗೋಡು ದಸರಾ ಕವಿ ಸಮ್ಮೇಳನದಲ್ಲಿ ಸತ್ಯವತಿ ಭಟ್ ಕೊಳಚಪ್ಪು ಅವರಿಗೆ ಕವಿ ಶ್ರೇಷ್ಠ…

Read More

ಚಿತ್ರಾಪುರದ ಅಂಗಳದಿಂದ ದಾದಾಸಾಹೇಬ್ ಫಾಲ್ಕೆ ಗೌರವದವರೆಗೆ…ಭಟ್ಕಳದ ನೆಲದ ಹೆಮ್ಮೆಯ ಅನಂತ ನಾಗ್ ಅವರ ಅಪೂರ್ವ ಕಲಾಯಾನ

ಕನ್ನಡ ಚಿತ್ರರಂಗದ ಸಹಜ ಅಭಿನಯದ ಹಿರಿಯ ಕಲಾವಿದ ಶ್ರೀ ಅನಂತ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿರುವುದು ಕನ್ನಡಿಗರಿಗಷ್ಟೇ ಅಲ್ಲ, ಉತ್ತರ ಕನ್ನಡದ ಕಲಾಭಿಮಾನಿಗಳಿಗೂ ಹೆಮ್ಮೆಯ ಹಾಗೂ ಸಂತಸದ ಕ್ಷಣ. ಐದು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಈ ಗೌರವ ನೀಡಲಾಗುತ್ತಿದೆ. ಈ ಸಂದರ್ಭದಲ್ಲಿ ಭಟ್ಕಳ, ಚಿತ್ರಾಪುರ, ಶಿರಾಲಿ ಹಾಗೂ ಮಲ್ಲಾಪುರದ ನೆಲದೊಂದಿಗೆ ಅನಂತ ನಾಗ್ ಅವರಿಗಿರುವ ಆಪ್ತ ನಂಟು ವಿಶೇಷವಾಗಿ ನೆನಪಾಗುತ್ತದೆ.ಚಿತ್ರಾಪುರದ ಮಣ್ಣಿನಲ್ಲಿ ಅರಳಿದ…

Read More
error: Content is protected !!