ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ
ಪುತ್ತೂರು ತಾಲೂಕಿನ ಸಾರ್ವಜನಿಕರು ಎದುರಿಸುತ್ತಿರುವ ಅಕ್ರಮ–ಸಕ್ರಮ ಹಾಗೂ 94C ಅರ್ಜಿಗಳ ವಿಲೇವಾರಿ ವಿಳಂಬ, ಜೊತೆಗೆ ಪೌತಿ ಖಾತೆ ಬದಲಾವಣೆಯಲ್ಲಿನ ಸಮಸ್ಯೆಗಳ ಕುರಿತು ಪುತ್ತೂರು ತಾಲೂಕಿನ ತಹಶೀಲ್ದಾರ್‌ರನ್ನು ಭೇಟಿ ಮಾಡಿ ಚರ್ಚಿಸಲಾಯಿತು. ಅಕ್ರಮ–ಸಕ್ರಮ ಯೋಜನೆಯಡಿ ಹಲವು ವರ್ಷಗಳಿಂದ ಅರ್ಜಿ ಸಲ್ಲಿಸಿರುವ ಅರ್ಜಿದಾರರು ತಮ್ಮ ಅರ್ಜಿಗಳ ವಿಲೇವಾರಿಗಾಗಿ ಕಾಯುತ್ತಿರುವ ಪರಿಸ್ಥಿತಿ ಇದೆ. ಅದೇ ರೀತಿ, ಕರ್ನಾಟಕ ಭೂ ಕಂದಾಯ ಕಾಯ್ದೆಯ 94C ಅಡಿಯಲ್ಲಿ ಸಲ್ಲಿಸಿರುವ ಅರ್ಜಿಗಳೂ ಹಲವು ಕಡೆಗಳಲ್ಲಿ ಬಾಕಿ ಉಳಿದಿದ್ದು, ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಅಗತ್ಯ ದಾಖಲೆಗಳ…
