ಮಂಗಳೂರಿನಲ್ಲಿ ದಾರುಣ ಘಟನೆ: ಗಲ್ಫ್‌ನಿಂದ ಬಂದ ಯುವಕ ಲಾಡ್ಜ್‌ನಲ್ಲಿ ಶವವಾಗಿ ಪತ್ತೆ

ಮಂಗಳೂರು: ಸಹೋದರಿ ಆತ್ಮಹತ್ಯೆ ಮಾಡಿಕೊಂಡ ದುರಂತ ಮಾಸುವ ಮುನ್ನವೇ, ಆಕೆಯ ಸಹೋದರನೂ ಮಂಗಳೂರಿನ ಲಾಡ್ಜ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಕೇರಳದ ಬೇಕಲ್ ಪಳ್ಳಿಕ್ಕರ ಮುಕೂಡ್ ನಿವಾಸಿ ಮಹೇಶ್ ಅವರ ಪುತ್ರ ಅರ್ಜುನ್ ಮಹೇಶ್ (24) ಮೃತ ಯುವಕ. ಕಳೆದ ಜೂನ್‌ನಲ್ಲಿ ಅರ್ಜುನ್ ಅವರ ಸಹೋದರಿ ಐಜಾ ಆರ್. ಮಹೇಶ್ ಅವರು ತರಬೇತಿ ಕೇಂದ್ರದ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನೀಟ್ ಮರು ಪರೀಕ್ಷೆಯ ಸಿದ್ಧತೆಯಲ್ಲಿದ್ದ ಐಜಾ ಮಾನಸಿಕ ಒತ್ತಡದಿಂದ ಈ ನಿರ್ಧಾರ ಕೈಗೊಂಡಿದ್ದರು ಎನ್ನಲಾಗಿತ್ತು. ತಂಗಿಯ ಸಾವಿನ…

Read More

ಮಾನವತೆ ಸಂದೇಶ ಸಾರುವ ಸಂತ ರವಿ ದಾಸರ ಚಿಂತನೆ

ಸಂತ ರವಿದಾಸರ 650ನೇ ಜನ್ಮ ಜಯಂತಿ ಅಂಗವಾಗಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘವು (KRMSS), ದಕ್ಷಿಣ ಕನ್ನಡ ಜಿಲ್ಲೆ ಘಟಕ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಬೈಕಂಪಾಡಿ (ಮುಸ್ಲಿಂ), ಅಂಗಾರ್ಗುಂಡಿ ಕ್ಲಸ್ಟರ್ ಸಂಯುಕ್ತ ಆಶ್ರಯದಲ್ಲಿ 2026 ಆಗಸ್ಟ್ ಹತ್ತರಂದು ಬೆಳಿಗ್ಗೆ 11 ಗಂಟೆಗೆ ಶಾಲೆಯ ಸಭಾಂಗಣದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಸಲಾಯಿತು. ಭಾರತೀಯ ಸಂತ ಪರಂಪರೆ ಉಪನ್ಯಾಸಮಾಲೆಯ 12ನೇ ಕಾರ್ಯಕ್ರಮವು ಯಶಸ್ವಿಯಾಗಿ ಆಯೋಜಿಸಲಾಯಿತು. ಮುನ್ನುಡಿಯಾಗಿ ಪ್ರೊಫೆಸರ್ ನಾಗರತ್ನ ರಾವ್ ಅವರು ಭಾರತೀಯ ಸಂತ ಪರಂಪರೆಯಲ್ಲಿ…

Read More

ಕಾಸರಗೋಡಿನಲ್ಲಿ ವಿಎಚ್‌ಪಿ ನೇತೃತ್ವದಲ್ಲಿ ರಾಮಾಯಣ ಸತ್ಸಂಗ

ಕಾಸರಗೋಡು: ಆಷಾಡ ಮಾಸದಲ್ಲಿ ಪ್ರತಿವರ್ಷದಂತೆ ವಿಶ್ವ ಹಿಂದೂ ಪರಿಷತ್ ಕಾಸರಗೋಡು ಪ್ರಖಂಡ ನೇತೃತ್ವದಲ್ಲಿ ರಾಮಾಯಣ ಸತ್ಸಂಗ ಕಾರ್ಯಕ್ರಮ ಕಾಸರಗೋಡು ಹೃದಯ ಭಾಗದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಜರಗಿತು. ಹಿರಿಯ ವೈದ್ಯ ಧಾರ್ಮಿಕ ಮುಂದಾಳು ಡಾ| ಅನಂತ ಕಾಮತ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ, ವಿಎಚ್ ಪಿ ಕಾಸರಗೋಡು ಪ್ರಖಂಡ ಗೌರವಾಧ್ಯಕ್ಷ ಡಾl ಕೆ.ಎನ್.ವೆಂಕಟ್ರಮಣ ಹೊಳ್ಳ, ಉಪಾಧ್ಯಕ್ಷ ಗುಣಪಾಲ ಅಮೈ ಉಪಸ್ಥಿತರಿದ್ದರು. ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕರಾದ ಡಾ|…

Read More

ಬಡ ಮಹಿಳೆಯರಿಗೆ ಬಸ್ ನಿಲ್ಲಿಸದಿರುವುದು ಸರಿಯಲ್ಲ: ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಪುತ್ತೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ ಅವರ ಅಧ್ಯಕ್ಷತೆಯಲ್ಲಿ ‌ತಾ.ಪಂ.ಸಭಾಂಗಣದಲ್ಲಿ ನಡೆಯಿತು.ಕೆಯ್ಯೂರು ಗ್ರಾಮದ ಮುಂಡೂರಿನಲ್ಲಿ ಮಹಿಳೆಗೆ ಬಸ್ಸು ನಿಲ್ಲಿಸದಿರುವುದಕ್ಕೆ ಸಂಬಂಧಿಸಿ ಚಾಲಕನಿಗೆ ನೋಟಿಸ್ ನೀಡಲಾಗಿದೆ ಎಂದು ಕೆಎಸ್ಆರ್ ಟಿಸಿ ಪುತ್ತೂರು ಡಿಪೋ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಕಾಶ್ ಮಾಹಿತಿ ನೀಡಿದ್ದು, ಈ ವೇಳೆ ಅಧ್ಯಕ್ಷರು ಪ್ರತಿಕ್ರಿಯಿಸಿ ಕೇವಲ ನೋಟಿಸ್ ನೀಡಿದರೆ ಸಾಲುವುದಿಲ್ಲ. ಆ ರೀತಿ ಗ್ರಾಮೀಣ ಭಾಗದಲ್ಲಿ ಬಡ ಮಹಿಳೆಯರು ಕೂಲಿ ಕೆಲಸಕ್ಕೆ ಬಂದು ಮನೆಗೆ ಹಿಂದಿರುಗುವ…

Read More

ಪುನರ್ವಸತಿ ಕಾರ್ಯಕರ್ತರ ಬೇಡಿಕೆ; ಅಧಿವೇಶನದಲ್ಲಿ ಧ್ವನಿಯಾಗುವುದಾಗಿ ಶಾಸಕ ಅಶೋಕ್ ರೈ ಭರವಸೆ

ಪುತ್ತೂರು: ರಾಜ್ಯದ ವಿವಿಧೋದ್ದೇಶ ಹಾಗೂ ಗ್ರಾಮೀಣ-ನಗರ ಪುನರ್ವಸತಿ ಕಾರ್ಯಕರ್ತರ ಕನಿಷ್ಠ ವೇತನದ ಬೇಡಿಕೆಗೆ ಸಂಬಂಧಿಸಿದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು. ಆಗಸ್ಟ್ 10ರಂದು ಪುತ್ತೂರು ಶಾಸಕರ ಕಚೇರಿಯಲ್ಲಿ ತಾಲೂಕಿನ MRW, VRW ಹಾಗೂ URW ಕಾರ್ಯಕರ್ತರು ಶಾಸಕರನ್ನು ಭೇಟಿ ಮಾಡಿ, ಕಾರ್ಮಿಕ ಇಲಾಖೆಯಿಂದ ಅನುಮೋದನೆಗೊಂಡು ಸದ್ಯ ಆರ್ಥಿಕ ಇಲಾಖೆಯಲ್ಲಿ ಬಾಕಿ ಉಳಿದಿರುವ ಪುನರ್ವಸತಿ ಕಾರ್ಯಕರ್ತರ ಕನಿಷ್ಠ ವೇತನದ ಕಡತದ ಕುರಿತು ಚರ್ಚಿಸಿದರು. ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಈ ವಿಚಾರವನ್ನು…

Read More

ಒಂದೇ ಕುಟುಂಬದ ಆರು ಮಂದಿಗೆ ಇರಿತ : ನಾಲ್ಕು ಮಂದಿ ಬಂಧನ

​ಕಾಸರಗೋಡು: ಕೊರಕೋಡು ಬಿಲಾಲ್ ಮಸೀದಿ ಬಳಿ ನಡೆದ ಭೀಕರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್, ಸನಾಫ್, ಅಹಮ್ಮದ್ ಹಾಗೂ ಬಾಸಿತ್ ಬಂಧಿತ ಆರೋಪಿಗಳಾಗಿದ್ದು, ಇವರ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ​ಗಲ್ಫ್‌ನಿಂದ ಕಳುಹಿಸಿದ್ದ ಚಿನ್ನದ ಒಡವೆಗಳ ಪೈಕಿ 30 ಗ್ರಾಂ ಉಂಗುರವನ್ನು ಹಿಂದಿರುಗಿಸದ ವಿಚಾರವಾಗಿ ಉಂಟಾದ ವಿವಾದವೇ ಈ ಕೃತ್ಯಕ್ಕೆ ಕಾರಣವೆನ್ನಲಾಗಿದೆ. ಅಂಗಡಿ ಬಳಿ ನಡೆದ ಮಾತಿನ ಚಕಮಕಿಯ ವೇಳೆ ಆರೋಪಿಗಳು 15 ವರ್ಷದ ಬಾಲಕ ಸೇರಿದಂತೆ ಜಾಫರ್…

Read More

ಪುತ್ತೂರು: ವಿಮೆನ್ ಇಂಡಿಯಾ ಮೂಮೆಂಟ್ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ವಿಮೆನ್ ಇಂಡಿಯಾ ಮೂಮೆಂಟ್ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಎಂ.ಡಿ.ಎಸ್ ಪಡೀಲ್ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷೆಯಾಗಿ ಝುಹರಾ ಬನ್ನೂರು, ಉಪಾಧ್ಯಕ್ಷೆಯಾಗಿ ಶಹನಾಝ್ , ಕಾರ್ಯದರ್ಶಿಯಾಗಿ ಸಾಬಿರಾ ಉಸ್ಮಾನ್ , ಜೊತೆ ಕಾರ್ಯದರ್ಶಿಯಾಗಿ ರಶೀದ ರಫೀಕ್, ಕೋಶಾಧಿಕಾರಿಯಾಗಿ ಇಫ್ತಾನ ಹಾಗೂ ಸಮಿತಿ ಸದಸ್ಯೆಯರಾಗಿ ಆಶಿಫಾ, ಅಸ್ಮ, ಸಾಜಿದಾ, ಸಾಬಿರಾ ಆಯ್ಕೆಯಾದರು.ಚುನಾವಣಾ ಪ್ರಕ್ರಿಯೆಯನ್ನು ವಿಮ್ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಝಹನಾ ಹಾಗೂ ಜಿಲ್ಲಾ ಸಮಿತಿ ಸದಸ್ಯೆ ಝೀನತ್ ಗೂಡಿನಬಳಿ ನಡೆಸಿಕೊಟ್ಟರು….

Read More

ಈಶ ಗ್ರಾಮೋತ್ಸವ 2026: 300ಕ್ಕೂ ಹೆಚ್ಚು ಗ್ರಾಮೀಣ ಆಟಗಾರರ ಸಮಾಗಮದೊಂದಿಗೆ ಮೂಡುಬಿದಿರೆಯಲ್ಲಿ ಕರ್ನಾಟಕ ವಿಭಾಗೀಯ ಪಂದ್ಯಗಳ ಸಮಾಪಣೆ

ಆಗಸ್ಟ್ 9, 2026: 18ನೇ ಆವೃತ್ತಿಯ ಈಶ ಗ್ರಾಮೋತ್ಸವ 2026ರ ಕರ್ನಾಟಕ ವಿಭಾಗೀಯ ಪಂದ್ಯಗಳು ದಕ್ಷಿಣ ಕನ್ನಡದ ಮೂಡುಬಿದಿರೆಯಲ್ಲಿ ನಡೆದಿದ್ದು, ಈ ಭಾಗದ 300ಕ್ಕೂ ಹೆಚ್ಚು ಗ್ರಾಮೀಣ ಆಟಗಾರರು ಭಾಗವಹಿಸಿದ್ದರು. ಈಶ ಔಟ್‌ರೀಚ್ ಆಯೋಜಿಸಿದ್ದ ಈ ವಿಭಾಗೀಯ ಪಂದ್ಯಗಳಲ್ಲಿ 18 ಪುರುಷರ ವಾಲಿಬಾಲ್ ತಂಡಗಳು ಮತ್ತು 12 ಮಹಿಳೆಯರ ಥ್ರೋಬಾಲ್ ತಂಡಗಳು ಪಾಲ್ಗೊಂಡಿದ್ದವು. ರಾಷ್ಟ್ರೀಯ ಹಂತದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಹಂಬಲವಿರುವ ತಂಡಗಳಿಗೆ ಈ ಪಂದ್ಯಾವಳಿಯು ಪ್ರಮುಖ ಅರ್ಹತಾ ಸುತ್ತಾಗಿತ್ತು. ತೀವ್ರ ಪೈಪೋಟಿಯಿಂದ ಕೂಡಿದ ಸರಣಿ ಪಂದ್ಯಗಳ ನಂತರ…

Read More

ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ; ಒಂದು ತಿಂಗಳಲ್ಲಿ ಸಮಸ್ಯೆ ಪರಿಹರಿಸದಿದ್ದರೆ ಉಗ್ರ ಹೋರಾಟ

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆ ಸೇರಿದಂತೆ ಜಿಲ್ಲೆಯ ದಲಿತರ ಭೂ ಸಮಸ್ಯೆಗಳನ್ನು ಒಂದು ತಿಂಗಳೊಳಗೆ ಪರಿಹರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿ ಬಳಗ ಎಚ್ಚರಿಸಿದೆ. ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾಗಿದ್ದ ದಿವಂಗತ ಎಂ. ದೇವದಾಸ್ ಅವರ ಸ್ಮರಣಾರ್ಥ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ನುಡಿನಮನ ಕಾರ್ಯಕ್ರಮದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ರಾಜ್ಯ ಸಂಚಾಲಕ ಸೋಮಶೇಖರ್ ಮಾತನಾಡಿ, ದೇವದಾಸ್ ಅವರು ಡಿಸಿ ಮನ್ನಾ ಭೂಮಿಯನ್ನು…

Read More

ರೈತ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗಾಗಿ ದೇಶಾದ್ಯಂತ ಜೈಲ್ ಭರೋ ಚಳುವಳಿ – ನಗರದಲ್ಲಿ ಪ್ರತಿಭಟನೆ – ಸಾಮೂಹಿಕ ಬಂಧನ – ಬಿಡುಗಡೆ

ರೈತ ಕಾರ್ಮಿಕರ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಹಾಗೂ ವಿವಿಧ ಜನವಿಭಾಗಗಳ ಪ್ರಶ್ನೆಗಳ ಆಧಾರದಲ್ಲಿ ಇಂದು(10-08-2026) ದೇಶಾದ್ಯಂತ ಜೈಲ್ ಭರೋ ಚಳುವಳಿ ನಡೆದಿದ್ದು,ಅದರ ಭಾಗವಾಗಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ, ಸಂಯುಕ್ತ ರೈತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಜನಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ಜರುಗಿತು. ಪ್ರತಿಭಟನಾಕಾರರು ಸಾಮೂಹಿಕ ಬಂಧನಕ್ಕೊಳಗಾಗಿ ಬಳಿಕ ಬಿಡುಗಡೆಗೊಂಡರು. ಕ್ವಿಟ್ ಇಂಡಿಯಾ ಚಳುವಳಿಯ ನೆನಪಿನಲ್ಲಿ ಜರುಗಿದ ಪ್ರತಿಭಟನಾ ಪ್ರದರ್ಶನವನ್ನುದ್ದೇಶಿಸಿ ಮಾತನಾಡಿದ CITU ದ.ಕ.ಜಿಲ್ಲಾ ಪ್ರಧಾನ…

Read More
error: Content is protected !!