ಮೀಂಜ: ಪಟ್ಟತೂರು ಗದ್ದೆಯಲ್ಲಿ ಕುಟುಂಬಶ್ರೀ ಸಿಡಿಎಸ್ ನೇತೃತ್ವದಲ್ಲಿ ವಿಜೃಂಭಣೆಯ ‘ಮಳೆಪೊಲಿಮ 2026’ ಸಂಪನ್ನ
ಮಂಜೇಶ್ವರ : ಮೀಂಜ ಗ್ರಾಮ ಪಂಚಾಯತ್ ಹಾಗೂ ಕುಟುಂಬಶ್ರೀ ಮೀಂಜ ಸಿಡಿಎಸ್ ನೇತೃತ್ವದಲ್ಲಿ ಸ್ಥಳೀಯ ಪಟ್ಟತೂರು ಗದ್ದೆಯಲ್ಲಿ ‘ಮಳೆಪೊಲಿಮ 2026’ ಕಾರ್ಯಕ್ರಮವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಮಳೆಗಾಲದ ಕೃಷಿ ಸಂಸ್ಕೃತಿ ಮತ್ತು ಗ್ರಾಮೀಣ ಕ್ರೀಡೆಗಳನ್ನು ಬಿಂಬಿಸುವ ನಿಟ್ಟಿನಲ್ಲಿ ಈ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕೆ.ಎಂ. ಅಶ್ರಫ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೀಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಸಿ.ಎ. ತಾಜುದ್ದೀನ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಇರ್ಫಾನ…
