ಡಾ. ವಹೀದಾ ಸುಲ್ತಾನ ನಿಧನ
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್, ಮೈಸೂರು ಕಲ್ಯಾಣಗಿರಿ ನಿವಾಸಿ ಡಾ.ವಹೀದಾ ಸುಲ್ತಾನಾ (70) ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಅಪರಾಹ್ನ ನಿಧನರಾದರು. ಅವರು ಸುಮಾರು 3 ದಶಕಗಳ ಕಾಲ ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಾಗಿದ್ದು, ವಿಭಾಗ ಮುಖ್ಯಸ್ಥರಾಗಿ ನಿವೃತ್ತಿ ಹೊಂದಿದ್ದರು. ಅವರು ಪತಿ, ಇಬ್ಬರು ಸಹೋದರರು, ಮೂವರು ಸಹೋದರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಶುಕ್ರವಾರ ಅಪರಾಹ್ನ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು…
