ಆ.9ರಂದು ಮಂಗಳೂರಿನಲ್ಲಿ ‘ಕುಂದಾಪ್ರ ಕನ್ನಡ ಹಬ್ಬ–2026’; ವಿಶ್ವ ಕುಂದಾಪ್ರ ದಿನಾಚರಣೆ ಆಚರಣೆ
ಮಂಗಳೂರು:ಕುಂದಾಪುರ ಮೂಲದವರು ವೃತ್ತಿ ನಿಮಿತ್ತ ಮಂಗಳೂರಿನಲ್ಲಿ ನೆಲೆಸಿದ್ದರೂ ತಮ್ಮ ಭಾಷೆ, ಸಂಸ್ಕೃತಿ, ಆಚರಣೆ ಹಾಗೂ ಸಂಪ್ರದಾಯವನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಕುಡ್ಲದಗಿಪ್ಪ ಕುಂದಾಪ್ರದರ್ ವಾಟ್ಸಪ್ ಬಳಗದ ಆಶ್ರಯದಲ್ಲಿ ‘ವಿಶ್ವ ಕುಂದಾಪ್ರ ದಿನಾಚರಣೆ’ ಹಾಗೂ ‘ಕುಂದಾಪ್ರ ಕನ್ನಡ ಹಬ್ಬ–2026’ ಅನ್ನು ಆಗಸ್ಟ್ 9ರಂದು ಮಂಗಳೂರಿನ ಉರ್ವಸ್ಟೋರ್‌ನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಆಯೋಜನಾ ಸಮಿತಿಯ ಅಧ್ಯಕ್ಷೆ ಮಾಲತಿ ಎಸ್. ಶೆಟ್ಟಿ ತಿಳಿಸಿದರು. ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 7.30ರಿಂದ…
