5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದರೋಡೆ ಆರೋಪಿ ಬೆಂಗಳೂರಿನಲ್ಲಿ ಬಂಧನ
ಮಂಗಳೂರು : ಬೆಳ್ತಂಗಡಿ- ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಬೆಂಗಳೂರು ನಿವಾಸಿ ಮೂರ್ತಿ ಅಲಿಯಾಸ್ ಪಿಂಟು (37) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದರಿಂದ ನ್ಯಾಯಾಲಯವು ಆತನ ವಿರುದ್ಧ ಬಂಧನ ವಾರಂಟ್…
