ರಾಹುಲ್ ಗಾಂಧಿ ವರ್ತನೆ ಪ್ರಜಾಪ್ರಭುತ್ವಕ್ಕೆ ಕಳಂಕ: ಕೋಟ ಶ್ರೀನಿವಾಸ ಪೂಜಾರಿ ಟೀಕೆ
ಉಡುಪಿ: ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ತಮ್ಮ ಹುದ್ದೆಯ ಘನತೆಗೆ ತಕ್ಕಂತೆ ನಡೆದುಕೊಳ್ಳುತ್ತಿಲ್ಲ. ದೇಶದಲ್ಲಿ ಅಸ್ಥಿರತೆ ಸೃಷ್ಟಿಸಲು ಪ್ರಯತ್ನಿಸುವ ಸಮಾಜಘಾತುಕ ಶಕ್ತಿಗಳೊಂದಿಗೆ ಕೈಜೋಡಿಸುವ ರೀತಿಯ ಅವರ ವರ್ತನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತರುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಹುಲ್ ಗಾಂಧಿಯವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಅಪಮಾನಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಯಾವ ಸ್ಥಳದಲ್ಲಿ ಯಾವ ರೀತಿಯಲ್ಲಿ ವರ್ತಿಸಬೇಕು, ಯಾವ ರೀತಿಯಲ್ಲಿ ಮಾತನಾಡಬೇಕು ಎನ್ನುವ ಪ್ರೌಢಿಮೆ ಇನ್ನೂ…
