ಸಹಕಾರ ರಂಗದ ಅಭಿವೃದ್ಧಿಗೆ ಮೊಳಹಳ್ಳಿ ಶಿವರಾಯರ ಕೊಡುಗೆ ಅಪಾರ: ಡಾ. ಎಂ.ಎನ್. ರಾಜೇಂದ್ರ ಕುಮಾರ್
ಮಂಗಳೂರು:ಸಹಕಾರ ರಂಗದ ಮೂಲಕ ಜಿಲ್ಲೆಯ ವಿವಿಧ ಕ್ಷೇತ್ರಗಳ ಅಭಿವೃದ್ಧಿ ಸಾಧ್ಯ ಎಂಬುದನ್ನು ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರು ತೋರಿಸಿಕೊಟ್ಟಿದ್ದಾರೆ. ಅವರು ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಕಾರ್ಯಗಳು ಇಂದಿಗೂ ನಮಗೆ ಮಾದರಿಯಾಗಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಮಂಗಳವಾರ ನಡೆದ ಮೊಳಹಳ್ಳಿ ಶಿವರಾಯರ ಜನ್ಮದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ…
