ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಯಶವಂತರಾಯಗೌಡ ಪಾಟೀಲ್ ಅಸಮಾಧಾನ; ರಾಜೀನಾಮೆ ಎಚ್ಚರಿಕೆ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟವು ಸೋಮವಾರ ಸಂಜೆ ವಿಸ್ತರಣೆಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ಸಚಿವ ಸ್ಥಾನದಿಂದ ವಂಚಿತರಾದ ಕೆಲವು ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರಿಗೆ ಕೊನೆ ಕ್ಷಣದಲ್ಲಿ ಅವಕಾಶ ಕೈತಪ್ಪಿದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಳೆ ಶಾಸಕ ಸ್ಥಾನ ಹಾಗೂ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ…
