ಅಪಘಾತದಲ್ಲಿ ನಿಧನರಾದ ರವಿಚಂದ್ರ ಶೆಟ್ಟಿಗೆ ಶ್ರದ್ಧಾಂಜಲಿ ಸಭೆ

ಮಂಗಳೂರು:ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ನಿಧನರಾದ ಮಂಗಳೂರಿನ ಹಾಪ್‌ಕಾಮ್ಸ್ ಪ್ರಧಾನ ವ್ಯವಸ್ಥಾಪಕರು ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಘಟಕದ ಕಾರ್ಯದರ್ಶಿಯಾಗಿದ್ದ ರವಿಚಂದ್ರ ಶೆಟ್ಟಿ ಅಶೋಕನಗರ ಅವರಿಗೆ ನಗರದ ಪತ್ತುಮುಡಿ ಸೌಧದಲ್ಲಿ ಭಾವಪೂರ್ಣ ನುಡಿನಮನ ಕಾರ್ಯಕ್ರಮ ನಡೆಯಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಹಾಗೂ ಅದರ ವಿವಿಧ ಘಟಕಗಳ ಸರ್ವ ಸದಸ್ಯರ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಟಮಾತನಾಡಿದ ಕದ್ರಿ ನವನೀತ ಶೆಟ್ಟಿ, “ರವಿಚಂದ್ರ ಶೆಟ್ಟಿ ಅವರ ಅಕಾಲಿಕ ನಿಧನ ಎಲ್ಲರಿಗೂ ಆಘಾತ ತಂದಿದೆ. ತಿರುಪತಿಯಿಂದ…

Read More

ಕೇರಳದಲ್ಲಿ ಪ್ರಕೃತಿ ವಿಕೋಪ: ಪ್ರವಾಹ–ಭೂಕುಸಿತಕ್ಕೆ ಮೂರು ಜೀವ ಬಲಿ

ಇಡುಕ್ಕಿ: ಕೇರಳದಲ್ಲಿ ಸುರಿಯುತ್ತಿರುವ ನಿರಂತರ ಧಾರಾಕಾರ ಮಳೆಯಿಂದ ಪ್ರವಾಹ ಮತ್ತು ಭೂಕುಸಿತಗಳು ಉಂಟಾಗಿ ಇಡುಕ್ಕಿ ಹಾಗೂ ಕೊಟ್ಟಾಯಂ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ದುರಂತಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಹಲವೆಡೆ ಭೂಕುಸಿತ ಸಂಭವಿಸಿದ್ದು, ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇಡುಕ್ಕಿಯ ಕುದಯತ್ತೂರು ಸಮೀಪದ ಆಡೂರ್‌ಮಾಲಾದಲ್ಲಿ ಭೂಕುಸಿತದಿಂದ ಸುಮತಿ ಮೃತಪಟ್ಟಿದ್ದು, ಅವರ ಪತಿ ಹಾಗೂ ಪುತ್ರ ಗಾಯಗೊಂಡಿದ್ದಾರೆ. ಕೊಟ್ಟಾಯಂ ಜಿಲ್ಲೆಯ ಪೂಂಜಾರ್‌ನಲ್ಲಿ ಸಂಭವಿಸಿದ ಮತ್ತೊಂದು ಭೂಕುಸಿತದಲ್ಲಿ ಜೋಸೆಫ್ ಮೃತಪಟ್ಟಿದ್ದು, ಅವರ ತಾಯಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ವಗಮೋನ್‌ನಲ್ಲಿ ಮನೆ ಮೇಲೆ…

Read More

ನಿಟ್ಟೆ ಡಾ ll ಎನ್. ಎಸ್. ಎ. ಎಂ. ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ

ಡಾ ll ಎನ್. ಎಸ್. ಎನ್.ಎಸ್. ಎ. ಎಂ. ಕನ್ನಡ ಮಾಧ್ಯಮ ಪ್ರೌಢ ಶಾಲೆ ನಿಟ್ಟೆ ಹಾಗೂ ರೋಟರಿ ಕ್ಲಬ್ ನಿಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಇಂಟ ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ನೆರವೇರಿತು. ನಿಟ್ಟೆ ರೋಟರಿ ಕ್ಲಬ್ ನ ನೂತನ ಅಧ್ಯಕ್ಷೆ ಹಾಗೂ NMAMIT ತಾಂತ್ರಿಕ ಮಹಾವಿದ್ಯಾಲಯದ ಲೆಕ್ಕ ವಿಭಾಗ ದ ಲೆಕ್ಕಧಿಕಾರಿ ರೊಟೇರಿಯನ್ ಶ್ರೀ ಮತಿ ಶೈಲಜಾ ವಿ. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಪದ ಪ್ರದಾನ ಮಾಡಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು….

Read More

ಕೇರಳದಲ್ಲಿ ಭಾರೀ ಮಳೆ ಆರ್ಭಟ: ಭೂಕುಸಿತಕ್ಕೆ 3 ಬಲಿ, 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಕೇರಳದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ವ್ಯಾಪಕ ಹಾನಿ ಉಂಟಾಗಿದೆ. ಇಡುಕ್ಕಿ ಹಾಗೂ ಕೋಟಾಯಂ ಜಿಲ್ಲೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಇಡುಕ್ಕಿ, ಪತ್ತನಂತಿಟ್ಟ ಮತ್ತು ಕೋಟಾಯಂ ಜಿಲ್ಲೆಗಳಲ್ಲಿ ಒಟ್ಟು ಮೂವರು ಮೃತಪಟ್ಟಿದ್ದಾರೆ. ಪತ್ತನಂತಿಟ್ಟ ಜಿಲ್ಲೆಯ ರನ್ನಿ ಪಟ್ಟಣದಲ್ಲಿ ಪ್ರವಾಹದ ನೀರು ನುಗ್ಗಿದೆ. ಪತ್ತನಂತಿಟ್ಟ, ಕೋಟಾಯಂ, ಇಡುಕ್ಕಿ, ಮಲಪ್ಪುರಂ ,ಕೊಜ್ಹಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಸೇರಿದಂತೆ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಡೂರ್ಮಲ ಪ್ರದೇಶದಲ್ಲಿ ಭೂಕುಸಿತದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಪಯ್ಯಾನಿತ್ತೊಟ್ಟಂನಲ್ಲಿ ಮನೆಯ ಮೇಲಕ್ಕೆ ಮಣ್ಣು ಕುಸಿದು ಬಿದ್ದ ಪರಿಣಾಮ…

Read More

ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆ; ಮನೆಗಳಿಗೆ ಹಾನಿ, ಜನಜೀವನ ಅಸ್ತವ್ಯಸ್ತ

ಮಂಗಳೂರಲ್ಲಿ ಮಳೆಯ ಆರ್ಭಟ ಜೋರಾಗಿದೆ. ನಿನ್ನೆ ಮಧ್ಯಾಹ್ನದಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಹಲವು ಭಾಗಗಳಲ್ಲಿ ಸಮಸ್ಯೆಗಳು ಎದುರಾಗಿವೆ. ಮಳೆಯ ತೀವ್ರತೆಯನ್ನು ಗಮನಿಸಿ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದರ ನಡುವೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದೆ. ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ಮನೆಯ ಛಾವಣಿ ಕುಸಿದಿದೆ. ರಾಯಿ ಗ್ರಾಮದ ದಡ್ಡು ಪ್ರದೇಶದಲ್ಲಿ ಮನೆಯ ಪಕ್ಕದಲ್ಲಿದ್ದ ತೆಂಗಿನ ಮರ ಬಿದ್ದು ಹಾನಿಯಾಗಿದ್ದು, ನರಿಕೊಂಬು ಗ್ರಾಮದ ಮೊಗರ್ನಾಡು…

Read More

ಮೃತ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ನಾಪತ್ತೆ; ಪೊಲೀಸರಿಗೆ ದೂರು

ಮಂಗಳೂರು: ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತರಲಾದ ಬಳಿಕ ಮೃತಪಟ್ಟ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ನಾಪತ್ತೆಯಾಗಿದೆ ಎಂದು ಆರೋಪಿಸಿ ಪತಿಯೊಬ್ಬರು ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳೂರು ಪದವು ಶಕ್ತಿನಗರದ ನಿವಾಸಿ ಸುಂದರ ಪೂಜಾರಿ (72) ಅವರ ಪತ್ನಿ ಜಾನಕಿ (53) ಅವರಿಗೆ ಜುಲೈ 26ರಂದು ಬೆಳಿಗ್ಗೆ ಸುಮಾರು 8 ಗಂಟೆಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಆಟೋ ರಿಕ್ಷಾದಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಹೃದ್ರೋಗ ತಜ್ಞರು ಲಭ್ಯವಿಲ್ಲದ ಕಾರಣ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಸರ್ಕಾರಿ…

Read More

ಕಾಸರಗೋಡಿನಲ್ಲಿ ಭಾರೀ ಮಳೆ ಅವಾಂತರ: ಜಾರಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್, ಭಾರೀ ದುರಂತದಿಂದ ಪಾರು

ಮಂಗಳೂರು: ಧಾರಾಕಾರ ಮಳೆಯ ನಡುವೆ ಮಂಗಳೂರು–ಕಾಸರಗೋಡು ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಘಟನೆ ಕಾಸರಗೋಡು ಜಿಲ್ಲೆಯ ಉಪ್ಪಳದ ಬಂದಿಯೊಡ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಜುಲೈ ೨೦ ರಂದು ಘಟನೆ ನಡೆದಿದ್ದು ಘಟನೆಯಾ ದೃಶ್ಯ ಭೀಕರತೆಯನ್ನು ತಿಳಿಸುತ್ತದೆ. ಮಳೆಯ ಕಾರಣ ರಸ್ತೆ ಜಾರುವಂತಾಗಿದ್ದ ಹಿನ್ನೆಲೆಯಲ್ಲಿ ಬಸ್‌ ನಿಯಂತ್ರಣ ತಪ್ಪಿ ನಿಧಾನವಾಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಘಟನೆಯ ವೇಳೆ ಬಸ್‌ನಲ್ಲಿ ಪ್ರಯಾಣಿಕರಿದ್ದರೂ ಯಾವುದೇ ಪ್ರಾಣಾಪಾಯ ಅಥವಾ…

Read More

ಪೈವಳಿಕೆಯಲ್ಲಿ ಸಾವಯವ ಕೃಷಿಯ ಹೊಸ ಮಾದರಿ; ನಾಲ್ವರು ರೈತರ ವಿಭಿನ್ನ ಪ್ರಯತ್ನ

ಜಿಲ್ಲೆಯ ಪೈವಳಿಕೆ ಪಂಚಾಯತ್‌ನ 14ನೇ ವಾರ್ಡ್‌ನಲ್ಲಿ ಡಿಸೂಜಾ, ಕೊಂತಲಕಾಡು, ಶೇಖ್ ಅಲಿ ಹಾಗೂ ರಂಸೀನಾ ಅವರ ಸ್ನೇಹಿತರ ಒಕ್ಕೂಟ ಮಾದರಿ ಕೃಷಿ ನಡೆಸುತ್ತಿದೆ. ಕಳೆದ 15 ವರ್ಷಗಳಿಂದ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ವಿನೋದ್ ಅವರ ಮಾರ್ಗದರ್ಶನದಲ್ಲಿ ಭತ್ತ, ವಿವಿಧ ತರಕಾರಿಗಳು ಹಾಗೂ ಹಣ್ಣಿನ ಗಿಡಗಳನ್ನು ಸಾವಯವ ವಿಧಾನದಲ್ಲಿ ಬೆಳೆಸಲಾಗುತ್ತಿದೆ. ರಾಸಾಯನಿಕ ಗೊಬ್ಬರಗಳನ್ನು ಸಂಪೂರ್ಣವಾಗಿ ತ್ಯಜಿಸಿ, ವಿಷರಹಿತ ಕೃಷಿ ಉತ್ಪನ್ನಗಳನ್ನು ಉತ್ಪಾದಿಸುತ್ತಿರುವುದರಿಂದ ಇವರ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಇದೆ. ಉತ್ತಮ ಗುಣಮಟ್ಟದ ತರಕಾರಿಗಳು ಮತ್ತು ಕೃಷಿ ಉತ್ಪನ್ನಗಳಿಗಾಗಿ…

Read More

ಕಾಸರಗೋಡು ಕನ್ನಡ ಗ್ರಾಮದಲ್ಲಿ ಕಾಸರಗೋಡು ನಗರಸಭೆ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ ಸಂಪನ್ನ

ಕಾಸರಗೋಡು ನಗರಸಭೆ ಹಾಗೂ ಕಾಸರಗೋಡು ನಗರಸಭೆ ಆಯುರ್ವೇದ ಆಸ್ಪತ್ರೆ ನುಳ್ಳಿಪ್ಪಾಡಿ ಅಣoಗೂರು ಸಂಯುಕ್ತ ಆಶ್ರಯದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ಜುಲೈ 31ರಂದು ಉಚಿತ ವೈದ್ಯಕೀಯ ಶಿಬಿರವು ಯಶಸ್ವಿಯಾಗಿ ನಡೆಯಿತು. ಕಾಸರಗೋಡು ನಗರಸಭಾ ಕೌನ್ಸಿಲರ್ ಶಾರದಾ ಬಿ. ಉದ್ಘಾಟಿಸಿದರು. ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಕನ್ನಡ ಗ್ರಾಮದಲ್ಲಿ ಪ್ರತಿ ತಿಂಗಳ ಒಂದು ದಿನ ಕಾಸರಗೋಡು ನಗರ ಸಭೆ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ ಮತ್ತು…

Read More

ಆಗಸ್ಟ್ 2ರಂದು ಕನ್ನಡ ಭವನದಲ್ಲಿ “ಭರವಸೆಯ ಬೆಳಕು “ಪ್ರಶಸ್ತಿ ಪ್ರದಾನ

ಕಾಸರಗೋಡು: ಕಾಸರಗೋಡು ಕನ್ನಡ ಭವನದಲ್ಲಿ ಇತ್ತೀಚೆಗೆ ನಡೆದ ಗಡಿನಾಡು ಕನ್ನಡ ಸಮ್ಮೇಳನ–2026 ಕಾರ್ಯಕ್ರಮದಲ್ಲಿ ಭಾಗವಹಿಸಲು ಅಥವಾ ಗೌರವ ಪ್ರಶಸ್ತಿಗಳನ್ನು ಸ್ವೀಕರಿಸಲು ಅನಿವಾರ್ಯ ಕಾರಣಗಳಿಂದ ಸಾಧ್ಯವಾಗದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆಗಸ್ಟ್‌ 2ರಂದು (ಭಾನುವಾರ) ಬೆಳಿಗ್ಗೆ 11 ಗಂಟೆಗೆ ಕನ್ನಡ ಭವನಕ್ಕೆ ಆಗಮಿಸಿ ತಮ್ಮ ಪ್ರಶಸ್ತಿಗಳನ್ನು ಸ್ವೀಕರಿಸುವಂತೆ ಕನ್ನಡ ಭವನದ ಸ್ಥಾಪಕ ಸಂಚಾಲಕರಾದ ಡಾ ವಾಮನ್ ರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ‘ಭರವಸೆಯ ಬೆಳಕು’ ಪ್ರಶಸ್ತಿಗೆ ಆಯ್ಕೆಯಾದ ವಿದ್ಯಾರ್ಥಿಗಳು: ಸಾನ್ವಿ ರಾವ್ (ಮುಲ್ಕಿ), ಅನನ್ಯ (ಮಂಗಳೂರು), ಶ್ರೇಯ (ಬೈಂದೂರು),…

Read More
error: Content is protected !!