11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿ ಬಂಧನ
ಮಂಗಳೂರು, ಜು. 31: ಸುಮಾರು 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕರ್ನೇಳ್ಳಿ ಗ್ರಾಮದ ನಿವಾಸಿ ಚುಂಕಿ ಆಕಾಶಭವನ @ ಸಂತೋಷ್ ಎಸ್. (34) ಎಂದು ಗುರುತಿಸಲಾಗಿದೆ. 2015ರಲ್ಲಿ ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಆಕಾಶಭವನದಲ್ಲಿ ನಡೆದ ಮದುವೆಯ ಮದುರಂಗಿ ಕಾರ್ಯಕ್ರಮದ ವೇಳೆ ಅಶೋಕ ಕುಮಾರ ಕೊಟ್ಟಾರಿ ಹಾಗೂ ಜಗ್ಗು ಎಂಬುವರ…
