ಕಾವೇರಿ ವಿವಾದ: ಆಗಸ್ಟ್ 2ರಂದು ಸರ್ವಪಕ್ಷ ಸಭೆ ಕರೆದ ಡಿ.ಕೆ. ಶಿವಕುಮಾರ್
ನವದೆಹಲಿ: ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. “ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ಮೇಲ್ಮನವಿ ಸಲ್ಲಿಸಿದ್ದು, ಮುಂದೆ ಈ ವಿಚಾರವನ್ನು ಹೇಗೆ ತೆಗೆದುಕೊಂಡು ಹೋಗಬೇಕು…
