ಜಲ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಗಾರಿಕೆ: ಪ್ರೊ. ಕವಿತಾ ಕೆ.ಆರ್.

ಮಂಗಳೂರು: ಜಲವು ಕೇವಲ ಪ್ರಕೃತಿಯ ಸಂಪನ್ಮೂಲವಲ್ಲ; ಮಾನವ ಜೀವನ, ಕೃಷಿ, ಪರಿಸರ ಹಾಗೂ ದೇಶದ ಸುಸ್ಥಿರ ಅಭಿವೃದ್ಧಿಗೆ ಆಧಾರವಾಗಿದ್ದು, ನೀರಿನ ಕೊರತೆ ದಿನದಿಂದ ದಿನಕ್ಕೆ ಗಂಭೀರ ಸಮಸ್ಯೆಯಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಜಲ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ವಿಭಾಗದ ಜಂಟಿ ನಿರ್ದೇಶಕಿ ಪ್ರೊ. ಕವಿತಾ ಕೆ.ಆರ್. ಹೇಳಿದರು. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ (ರಿ.) ಮಂಗಳೂರು ವಿಭಾಗ, ಮಂಗಳೂರು ರನ್ನರ್ಸ್ ಕ್ಲಬ್ ಹಾಗೂ ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ…

Read More

ಮಂಜೇಶ್ವರ ಬ್ಲೋಕ್ ಪಂಚಾಯತ್ ವತಿಯಿಂದ ‘ಆಪರೇಶನ್ ತೂಫಾನ್’ ಶೂಟೌಟ್ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ಮಂಜೇಶ್ವರ: ಮಾದಕ ವಸ್ತು ವ್ಯಾಪನದ ವಿರುದ್ಧ ರಾಜ್ಯ ಸರ್ಕಾರದ ‘ಆಪರೇಶನ್ ತೂಫಾನ್’ ಅಭಿಯಾನದ ಭಾಗವಾಗಿ ಮಂಜೇಶ್ವರ ಬ್ಲೋಕ್ ಪಂಚಾಯತ್ ಆಯೋಜಿಸಿದ್ದ ಶೂಟೌಟ್ ಸ್ಪರ್ಧೆಯ ವಿಜೇತರಿಗೆ ಬ್ಲೋಕ್ ಪಂಚಾಯತ್ ಸಭಾಂಗಣದಲ್ಲಿ ಬಹುಮಾನ ವಿತರಿಸಲಾಯಿತು. ​ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬ್ಲೋಕ್ ಪಂಚಾಯತ್ ಅಧ್ಯಕ್ಷ ಯು.ಕೆ.ಸೈಫುಲ್ಲ ತಂಗಳ್, ಮಾದಕ ವಸ್ತುಗಳ ನಿರ್ಮೂಲನೆಗೆ ಸರ್ಕಾರದ ಪ್ರಯತ್ನದೊಂದಿಗೆ ಸಾರ್ವಜನಿಕರ ಜಾಗೃತಿ ಅತ್ಯಗತ್ಯ ಎಂದರು. ಪ್ರತಿಯೊಬ್ಬರೂ ‘ತೂಫಾನ್ ವಾರಿಯರ್’ ಆಗಿ ಕೈಜೋಡಿಸಬೇಕೆಂದು ಕರೆ ನೀಡಿದ ಅವರು, ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಮಾದಕ ವಸ್ತು ವಿರೋಧಿ ಪ್ರತಿಜ್ಞೆ…

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಇಂದು ಗುರು ಪೂರ್ಣಿಮೆ; ಲಕ್ಷ ತುಳಸಿ ಅರ್ಚನೆ, ವಿಶ್ವಶಾಂತಿ ಹೋಮ

ಮಂಗಳೂರು: ಶ್ರೀ ಕ್ಷೇತ್ರ ಕುದ್ರೋಳಿಯ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಇಂದು (ಜುಲೈ 29) ಗುರು ಪೂರ್ಣಿಮೆ ಅಂಗವಾಗಿ ಲೋಕಕಲ್ಯಾಣಾರ್ಥ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇಂದು ಬೆಳಗ್ಗೆ 9 ಗಂಟೆಗೆ ಗುರು ಪ್ರಾರ್ಥನೆ, 9.15ಕ್ಕೆ ವಿಶ್ವಶಾಂತಿ ಹೋಮ, 10 ಗಂಟೆಗೆ ಲಕ್ಷ ತುಳಸಿ ಅರ್ಚನೆ ಹಾಗೂ ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನಡೆಯಲಿದೆ. ಗುರು ಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ ದೇವರ ಹಾಗೂ ಗುರುಗಳ ಕೃಪೆಗೆ ಪಾತ್ರರಾಗುವ ಉದ್ದೇಶದಿಂದ ಭಕ್ತರು ಸಪರಿವಾರ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಆಡಳಿತ…

Read More

ಖ್ಯಾತ ಬಹುಭಾಷಾ ನಟಿ ವಿನ್ನಿ ಫರ್ನಾಂಡೀಸ್ ಐದನೇ ಪುಣ್ಯಸ್ಮರಣೆ ಇಂದು; ಕುಲಶೇಖರ ಚರ್ಚ್‌ನಲ್ಲಿ ವಿಶೇಷ ಕಾರ್ಯಕ್ರಮ

ಮಂಗಳೂರು: ಖ್ಯಾತ ಬಹುಭಾಷಾ ನಟಿ ವಿನ್ನಿ ಫರ್ನಾಂಡೀಸ್ (ವಿನ್ನಿ ಬಾಯಿ) ಅವರ ಐದನೇ ಪುಣ್ಯಸ್ಮರಣೆ ಅಂಗವಾಗಿ ಇಂದು (ಜುಲೈ 29) ಮಂಗಳೂರಿನ ಕುಲಶೇಖರ ಚರ್ಚ್‌ನಲ್ಲಿ IWIL Productions ವತಿಯಿಂದ ಸ್ಮರಣಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರ ಪುತ್ರ, ನಿರ್ಮಾಪಕ ಹಾಗೂ ಚಲನಚಿತ್ರ ನಿರ್ದೇಶಕ ವಿಲ್ಫ್ರೆಡ್ ಫರ್ನಾಂಡೀಸ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿನ್ನಿ ಫರ್ನಾಂಡೀಸ್ ಅವರು ಏಳು ಭಾಷೆಗಳ 90ಕ್ಕೂ ಹೆಚ್ಚು ನಾಟಕ, ದೂರದರ್ಶನ ಹಾಗೂ ಚಲನಚಿತ್ರ ನಿರ್ಮಾಣಗಳಲ್ಲಿ ಅಭಿನಯಿಸಿ, ನಿರ್ವಹಣಾ ಹೊಣೆಗಾರಿಕೆಯನ್ನೂ…

Read More

ಮಂಗಳೂರು ಪೊಲೀಸರ ಡ್ರಗ್ಸ್‌ ವಿರುದ್ಧ ದಿಢೀರ್ ಕಾರ್ಯಾಚರಣೆ: 159 ವಿದ್ಯಾರ್ಥಿಗಳ ತಪಾಸಣೆ, ಒಬ್ಬ ಪಾಸಿಟಿವ್

ಮಂಗಳೂರು : ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀ‌ರ್ ಆಗಿ ವಿದ್ಯಾರ್ಥಿಗಳಿದ್ದ ಬಸ್, ಇನ್ನಿತರ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ. ಮಂಗಳೂರು ಸೆಂಟ್ರಲ್ ಮತ್ತು ದಕ್ಷಿಣ ಉಪ ವಿಭಾಗದ ಎಸಿಪಿಗಳ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಕೋಟೆಕಾರು ಮತ್ತು ಕೋಣಾಜೆ ಬಂಟರ ಸಂಘದಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಕೋಣಾಜೆ, ಉಳ್ಳಾಲ, ಕಂಕನಾಡಿ, ಪಾಂಡೇಶ್ವರ, ಬಂದರು ಠಾಣೆ ವ್ಯಾಪ್ತಿಯ ಕಾಲೇಜುಗಳ ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಲಾಗಿದೆ. ಉಳ್ಳಾಲದ ಕೋಟೆಕಾರಿನಲ್ಲಿ…

Read More

ಆರ್ಥಿಕವಾಗಿ ಹಿಂದುಳಿದ ಮುಸ್ಲಿಂ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಹಾಯಧನ; ಆಗಸ್ಟ್ 5ರೊಳಗೆ ಅರ್ಜಿ ಆಹ್ವಾನ

ಮಂಗಳೂರು: ಮುಸ್ಲಿಂ ಸಮಾಜದ ಆರ್ಥಿಕವಾಗಿ ಅತ್ಯಂತ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಮೂರನೇ ಹಂತದ ಆರ್ಥಿಕ ಸಹಾಯ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಎಂಬಿಬಿಎಸ್, ಬಿಡಿಎಸ್, ಬಿಎಚ್‌ಎಂಎಸ್, ಇಂಜಿನಿಯರಿಂಗ್, ಎಂಬಿಎ, ಎಂಕಾಂ, ಎಂಎ, ಎಂಎಸ್‌ಸಿ, ಪದವಿ, ಪ್ಯಾರಾ ಮೆಡಿಕಲ್, ಡಿಎಡ್, ಬಿಎಡ್ ಹಾಗೂ ಎಂಎಡ್ ಸೇರಿದಂತೆ ವಿವಿಧ ಕೋರ್ಸ್‌ಗಳಿಗೆ ಆರ್ಥಿಕ ಸಹಾಯ ನೀಡಲಾಗುತ್ತದೆ. ಯೋಜನೆಯ ಪ್ರಯೋಜನವು ಝಕಾತ್ ಪಡೆಯಲು ಅರ್ಹರಾಗಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗಲಿದ್ದು, ಜಮಾತ್‌ನ ಶಿಫಾರಸು ಪತ್ರ ಕಡ್ಡಾಯವಾಗಿದೆ. ಪಿಯುಸಿಯಲ್ಲಿ…

Read More

ಪ್ರಶ್ನೆಪತ್ರಿಕೆ ಸೋರಿಕೆಗೆ ಬ್ರೇಕ್: ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆಗೆ ಕೇಂದ್ರದ ಗ್ರೀನ್ ಸಿಗ್ನಲ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಸಾರ್ವಜನಿಕ ಪರೀಕ್ಷೆಗಳಲ್ಲಿನ ಅಕ್ರಮಗಳಿಗೆ ಕಟ್ಟುನಿಟ್ಟಿನ ಕಡಿವಾಣ ಹಾಕುವ ಉದ್ದೇಶದಿಂದ ತರಲಾಗಿರುವ ‘ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ಮಾರ್ಗಗಳ ತಡೆ) ತಿದ್ದುಪಡಿ ಮಸೂದೆ–2026’ಯನ್ನು ಕೇಂದ್ರ ಸರ್ಕಾರ ಅಂಗೀಕರಿಸಲು ಮುಂದಾಗಿದೆ. ವಿರೋಧ ಪಕ್ಷಗಳು ಚರ್ಚೆಯನ್ನು ಬಹಿಷ್ಕರಿಸಿದರೂ ಮಸೂದೆ ಅಂಗೀಕಾರದ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸ್ಪಷ್ಟಪಡಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ಮಸೂದೆಯ ಕುರಿತು ಚರ್ಚೆಗೆ ಸರ್ಕಾರ ಸಂಪೂರ್ಣ ಸಿದ್ಧವಿದ್ದು, ಪ್ರತಿಪಕ್ಷಗಳು ಭಾಗವಹಿಸದಿದ್ದರೂ ಶಾಸನ ರೂಪಿಸುವ ಪ್ರಕ್ರಿಯೆ ಸ್ಥಗಿತಗೊಳ್ಳುವುದಿಲ್ಲ ಎಂದರು….

Read More

ಕರ್ನಾಟಕದ ಆಹಾರ ಸುರಕ್ಷತೆಗೆ ಹೊಸ ನಿಯಮ: ಅಮೆರಿಕದ ಪ್ರತಿಷ್ಠಿತ Purdue ವಿಶ್ವವಿದ್ಯಾಲಯದೊಂದಿಗೆ ಸಮಾಲೋಚನೆ

ಕರ್ನಾಟಕದ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಡಾ ಯು ಟಿ ಖಾದರ್ ಅವರು ಆಹಾರ ಸುರಕ್ಷತೆ ಹಾಗೂ ಗುಣಮಟ್ಟದ ಆಹಾರ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ, ಅಮೆರಿಕದ ಇಂಡಿಯಾನಾ ರಾಜ್ಯದಲ್ಲಿರುವ ವಿಶ್ವಪ್ರಸಿದ್ಧ ಪರ್ಡ್ಯೂ (Purdue) ಯೂನಿವರ್ಸಿಟಿಯ Department of Food Scienceಗೆ ಭೇಟಿ ನೀಡಿ ತಜ್ಞರೊಂದಿಗೆ ಮಹತ್ವದ ಸಮಾಲೋಚನೆ ನಡೆಸಲಾಯಿತು. ಇತ್ತೀಚಿನ ದಿನಗಳಲ್ಲಿ ಅಸುರಕ್ಷಿತ ಹಾಗೂ ಅಸಮರ್ಪಕ ಆಹಾರ ತಯಾರಿಕೆಯಿಂದ ಉಂಟಾಗುವ ಅನಾರೋಗ್ಯದ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಸುರಕ್ಷಿತ ಮತ್ತು ಗುಣಮಟ್ಟದ…

Read More

ರಾಹುಲ್ ಗಾಂಧಿ ಕುರಿತು ದ್ವೇಷ ಭಾಷಣ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು

ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಉಡುಪಿ ನಗರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಯಶ್‌ಪಾಲ್ ಸುವರ್ಣ, ಬಾಬರಿ ಮಸೀದಿಯಂತೆ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಅಲ್ಲದೆ, ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ…

Read More

ಲಾವಣ್ಯ ಹತ್ಯೆ ಪ್ರಕರಣ: ಚಿಕಿತ್ಸೆ ಬಳಿಕ ಆರೋಪಿ ಚೇತನ್ ಪೊಲೀಸ್ ವಶಕ್ಕೆ; ನಾಲ್ಕು ದಿನಗಳ ಕಸ್ಟಡಿ

ಬಂಟ್ವಾಳ: ಜುಲೈ 16ರಂದು ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದ ಲಾವಣ್ಯ (21) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಚೇತನ್ (22) ಅವರನ್ನು ಸೋಮವಾರ ಬಂಟ್ವಾಳ ನಗರ ಪೊಲೀಸರು ಅಧಿಕೃತವಾಗಿ ತಮ್ಮ ವಶಕ್ಕೆ ಪಡೆದಿದ್ದಾರೆ. ಪೊಲೀಸರು ನೀಡಿದ ಮಾಹಿತಿಯಂತೆ, ಮಂಗಳವಾರ ಆರೋಪಿಯನ್ನು ಬಂಟ್ವಾಳ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಲಾಯಿತು. ಮನವಿಯನ್ನು ಪರಿಗಣಿಸಿದ ನ್ಯಾಯಾಲಯವು ಆರೋಪಿಯನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ. ಪ್ರಕರಣದ…

Read More
error: Content is protected !!