ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ: ಹರೇಕಳ ಹಾಜಬ್ಬ ಸೇರಿ ಮೂವರಿಗೆ ಗೌರವ ಡಾಕ್ಟರೇಟ್
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಬಾರಿ ಶಿಕ್ಷಣ, ಕಲೆ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಕ್ಷರ ಸಂತ’ ಎಂದು ಖ್ಯಾತಿ ಪಡೆದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಯಕ್ಷಗಾನ ರಂಗದ ಹಿರಿಯ ಕಲಾವಿದ ಸೂರೆಕುಮೇರು ಗೋವಿಂದ ಭಟ್ ಹಾಗೂ ದೈವ ನರ್ತಕ ಡಾ. ರವೀಶ್ ಪಡುಮಲೆ…